ವಿಂಡೀಸ್ ವಿರುದ್ಧ ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಏಕದಿನ ಸರಣಿಯು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್ ತಿರುವನಂತಪುರದ ಗ್ರೀನ್ ಫೀಲ್ಡ್​ ಮೈದಾನದಲ್ಲಿ ನಡೆಯಲಿದ್ದು, ದ್ವಿತೀಯ ಪಂದ್ಯಕ್ಕೆ ಗುವಾಹಟಿ ಆತಿಥ್ಯವಹಿಸಲಿದೆ. ಇನ್ನು ಮೂರನೇ ಮ್ಯಾಚ್ ಚಂಡೀಗಢ್​ನಲ್ಲಿ ಜರುಗಲಿದೆ.

ವಿಂಡೀಸ್ ವಿರುದ್ಧ ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Image Credit source: BCCI

Updated on: Sep 26, 2026 | 2:01 PM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯವು ಸೆಪ್ಟೆಂಬರ್ 27ರಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ.

ಅದರಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ಕಾಣಿಸಿಕೊಳ್ಳುವುದು ಖಚಿತ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ.

ಏಕೆಂದರೆ ಟೀಮ್ ಇಂಡಿಯಾ ಪರ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿದ್ದ ಶ್ರೇಯಸ್ ಅಯ್ಯರ್ ಅವರು ಪ್ರಸ್ತುತ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಟಿ20 ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಗಾಗಿ ಈ ಸರಣಿಗೆ ಅವರು ಅಲಭ್ಯರಾಗಿದ್ದು, ಅವರ ಬದಲಿಗೆ ರುತುರಾಜ್ ಗಾಯಕ್ವಾಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಕಾರಣದಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಅವರೇ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಸಾಧ್ಯತೆ ಇದೆ.

ಇನ್ನು ಐದನೇ ಕ್ರಮಾಂಕದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆರನೇ ಮತ್ತು ಏಳನೇ ಕ್ರಮಾಂಕಗಳಲ್ಲಿ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ನಿತೀಶ್ ಕುಮಾರ್ ರೆಡ್ಡಿ ಸ್ಥಾನ ಪಡೆಯಲಿದ್ದಾರೆ.

ಬೌಲರ್​ಗಳಾಗಿ ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಹಾಗೂ ಗುರ್ನೂರ್ ಬ್ರಾರ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ….

  1. ಶುಭ್​ಮನ್ ಗಿಲ್ (ನಾಯಕ)
  2. ರೋಹಿತ್ ಶರ್ಮಾ
  3. ವಿರಾಟ್ ಕೊಹ್ಲಿ
  4. ರುತುರಾಜ್ ಗಾಯಕ್ವಾಡ್
  5. ಕೆಎಲ್ ರಾಹುಲ್ (ವಿಕೆಟ್ ಕೀಪರ್)
  6. ರವೀಂದ್ರ ಜಡೇಜಾ
  7. ನಿತೀಶ್ ಕುಮಾರ್ ರೆಡ್ಡಿ
  8. ಕುಲ್ದೀಪ್ ಯಾದವ್
  9. ಮೊಹಮ್ಮದ್ ಸಿರಾಜ್
  10. ಗುರ್ನೂರ್ ಬ್ರಾರ್
  11. ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: ಏಕದಿನ ವಿಶ್ವಕಪ್‌ಗೆ ಮೊರ್ಕೆಲ್ ಮಾಸ್ಟರ್ ಪ್ಲ್ಯಾನ್!

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಯಶಸ್ವಿ ಜೈಸ್ವಾಲ್, ನಮನ್ ಧೀರ್.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us