AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಚ್ಚಲ ಪಂದ್ಯದಲ್ಲೇ ದಾಖಲೆಗಳ ಮೇಲೆ ದಾಖಲೆ ಬರೆದ ಮಾನವ್ ಸುತಾರ್..!

ಅಫ್ಘಾನಿಸ್ತಾನ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 22 ಓವರ್​ಗಳನ್ನು ಎಸೆದಿರುವ ಮಾನವ್ ಸುತಾರ್ ನೀಡಿದ್ದು ಕೇವಲ 33 ರನ್​ಗಳು ಮಾತ್ರ. ಇದರ ನಡುವೆ 6 ವಿಕೆಟ್​ಗಳನ್ನು ಕೂಡ ಕಬಳಿಸಿದ್ದಾರೆ. ಈ ಮೂಲಕ ಚೊಚ್ಚಲ ಪಂದ್ಯದಲ್ಲೇ ಭರ್ಜರಿ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಚೊಚ್ಚಲ ಪಂದ್ಯದಲ್ಲೇ ದಾಖಲೆಗಳ ಮೇಲೆ ದಾಖಲೆ ಬರೆದ ಮಾನವ್ ಸುತಾರ್..!
Manav Suthar Image Credit source: indianexpress.com
ಝಾಹಿರ್ ಯೂಸುಫ್
|

Updated on:Jun 08, 2026 | 12:43 PM

Share

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸ್ಪಿನ್ ಬೌಲರ್‌ಗಳಿಗೆ ಯಾವಾಗಲೂ ವಿಶೇಷ ಗೌರವವಿದೆ. ಅನಿಲ್ ಕುಂಬ್ಳೆ, ಹರ್ಭಜನ್ ಸಿಂಗ್, ಆರ್. ಅಶ್ವಿನ್ ಅವರಂತಹ ದಿಗ್ಗಜರು ಆಳಿದ ಈ ಸಾಮ್ರಾಜ್ಯಕ್ಕೆ ಈಗ ಮತ್ತೊಬ್ಬ ಯುವ ಮಾಂತ್ರಿಕ ಸ್ಪಿನ್ನರ್​ನ ಎಂಟ್ರಿಯಾಗಿದೆ. ಅವರೇ 23 ವರ್ಷದ ಎಡಗೈ ಸ್ಪಿನ್ನರ್ ಮಾನವ್ ಸುತಾರ್.

ಅಫ್ಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಈ ಯುವ ಆಟಗಾರ, ಕೇವಲ ವಿಕೆಟ್ ಬೇಟೆಯಾಡಲಿಲ್ಲ, ಬದಲಿಗೆ ಮೂರೂವರೆ ದಶಕಗಳಿಗೂ ಹೆಚ್ಚು ಹಳೆಯದಾದ ಐತಿಹಾಸಿಕ ದಾಖಲೆಗಳನ್ನು ಧೂಳೀಪಟ ಮಾಡಿದ್ದಾರೆ. ನ್ಯೂ ಚಂಡೀಗಢ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮಾನವ್ ಸುತಾರ್ ಬರೆದ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

  1. 38 ವರ್ಷಗಳ ದಾಖಲೆ ಬ್ರೇಕ್: ಭಾರತದ ಪರ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಸ್ಪಿನ್ನರ್ ಒಬ್ಬರು ನೀಡಿದ ಅತ್ಯುತ್ತಮ ಪ್ರದರ್ಶನ (6/33) ಇದಾಗಿದೆ. 1988ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನರೇಂದ್ರ ಹಿರವಾನಿ (8/61) ಅವರ ಬಳಿಕ ಭರ್ಜರಿ ಪ್ರದರ್ಶನ ನೀಡಿದ ಮೊದಲ ಸ್ಪಿನ್ನರ್ ಎಂಬ ಹೆಗ್ಗಳಿಕೆಗೆ ಸುತಾರ್ ಪಾತ್ರರಾಗಿದ್ದಾರೆ.
  2. ಅಶ್ವಿನ್ ದಾಖಲೆ ಉಡೀಸ್: 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆರ್. ಅಶ್ವಿನ್ (6/47) ಬರೆದಿದ್ದ 21ನೇ ಶತಮಾನದ ಅತ್ಯುತ್ತಮ ಚೊಚ್ಚಲ ಪಂದ್ಯದ ಬೌಲಿಂಗ್ ದಾಖಲೆಯನ್ನು ಸುತಾರ್ ಮುರಿದಿದ್ದಾರೆ.
  3.  ಮೊದಲ ಓವರ್‌ನಲ್ಲೇ ವಿಕೆಟ್ ಬೇಟೆ: ತಮ್ಮ ಟೆಸ್ಟ್ ವೃತ್ತಿಜೀವನದ ಅತ್ಯಂತ ಮೊದಲ ಓವರ್‌ನಲ್ಲೇ (4ನೇ ಎಸೆತದಲ್ಲಿ ಅಬ್ದುಲ್ ಮಲಿಕ್) ವಿಕೆಟ್ ಪಡೆದ ಭಾರತದ 8ನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
  4.  25 ವರ್ಷಗಳ ಕಾಯುವಿಕೆಗೆ ಅಂತ್ಯ: 2001ರಲ್ಲಿ ಟಿನು ಯೋಹಾನನ್ ಬಳಿಕ, 21ನೇ ಶತಮಾನದಲ್ಲಿ ತಮ್ಮ ಮೊದಲ ಓವರ್‌ನಲ್ಲೇ ವಿಕೆಟ್ ಪಡೆದ ಕೇವಲ ಎರಡನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.
  5. ಎಲೈಟ್ ‘ಫೈಫರ್’: ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ 10ನೇ ಬೌಲರ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.
  6.  ಎಡಗೈ ಸ್ಪಿನ್ನರ್ ಸಾಧನೆ: ಭಾರತದ ಪರ ಪದಾರ್ಪಣೆ ಪಂದ್ಯದಲ್ಲೇ 5 ವಿಕೆಟ್ ಗೊಂಚಲು ಪಡೆದ ಕೇವಲ 3ನೇ ಎಡಗೈ ಆರ್ಥೊಡಾಕ್ಸ್ ಸ್ಪಿನ್ನರ್ (ದಿಲೀಪ್ ದೋಷಿ ಮತ್ತು ಅಕ್ಷರ್ ಪಟೇಲ್ ನಂತರ) ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
  7.  ಅತ್ಯುತ್ತಮ ಎಕಾನಮಿ ರೇಟ್: ಕೇವಲ 1.50 ಎಕಾನಮಿ ರೇಟ್‌ನಲ್ಲಿ ಬೌಲಿಂಗ್ ಮಾಡುವ ಮೂಲಕ, ಚೊಚ್ಚಲ ಪಂದ್ಯದಲ್ಲಿ ಕನಿಷ್ಠ 20 ಓವರ್ ಬೌಲಿಂಗ್ ಮಾಡಿ ಅತೀ ಕಡಿಮೆ ರನ್ ಬಿಟ್ಟುಕೊಟ್ಟ ಭಾರತೀಯ ಬೌಲರ್‌ಗಳ ಸಾಲಿಗೆ ಸೇರಿದ್ದಾರೆ.

ಇದನ್ನೂ ಓದಿ: WTC ಫೈನಲ್​ಗೇರಲು ಭಾರತ ತಂಡ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಒಟ್ಟಿನಲ್ಲಿ ಚೊಚ್ಚಲ ಟೆಸ್ಟ್ ಪಂಇದ್ಯದಲ್ಲೇ ಭರ್ಜರಿ ಪ್ರದರ್ಶನ ನೀಡುವ ಮೂಲಕ ಮಾನವ್ ಸುತಾರ್,  ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಂತಹ ದಿಗ್ಗಜ ಸ್ಪಿನ್ನರ್‌ಗಳ ಯುಗದ ನಂತರ, ಭಾರತೀಯ ಟೆಸ್ಟ್ ಕ್ರಿಕೆಟ್ ಅನ್ನು ಮುನ್ನಡೆಸಬಲ್ಲೇ ಎಂಬ ಭರವಸೆ ಮೂಡಿಸಿದ್ದಾರೆ. ಈ ಭರವಸೆಯೊಂದಿಗೆ ಅವರು ಮುಂದಿನ ಸರಣಿಗಳಲ್ಲಿ ಹೇಗೆ ಪ್ರದರ್ಶನ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

Published On - 12:42 pm, Mon, 8 June 26

Follow Us
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ