ಟೀಂ ಇಂಡಿಯಾಗೆ ಹೊಸ ಕೋಚ್ ಪದಗ್ರಹಣ ಯಾವಾಗ? ಸ್ಪಷ್ಟನೆ ನೀಡಿದ ಜಯ್​ ಶಾ

A new coach Team India Head Coach: ಜಯ್​ ಶಾ ಹೊಸ ಕೋಚ್ ಹೆಸರನ್ನು ಬಹಿರಂಗಪಡಿಸಿಲ್ಲ. ಆದರೆ ಗೌತಮ್ ಗಂಭೀರ್ ಅವರನ್ನು ಈ ಹುದ್ದೆಗೆ ದೊಡ್ಡ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಆದರೆ, ಕೆಲವೇ ದಿನಗಳಲ್ಲಿ ಬಿಸಿಸಿಐ ನೂತನ ಕೋಚ್ ಅನ್ನು ಕೂಡ ಪ್ರಕಟಿಸಲಿದ್ದು, ತಂಡದ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗುತ್ತದೆಯೇ ಅಥವಾ ಬಿಸಿಸಿಐ ಬೇರೆ ಅಭ್ಯರ್ಥಿಗಳಿಗೆ ಅವಕಾಶ ನೀಡಲಿದೆಯೇ ಎಂಬುದು ಸ್ಪಷ್ಟವಾಗಲಿದೆ.

ಟೀಂ ಇಂಡಿಯಾಗೆ ಹೊಸ ಕೋಚ್ ಪದಗ್ರಹಣ ಯಾವಾಗ? ಸ್ಪಷ್ಟನೆ ನೀಡಿದ ಜಯ್​ ಶಾ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Jul 01, 2024 | 6:53 PM

2024 ರ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗುವುದರೊಂದಿಗೆ, ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯೂ ಕೊನೆಗೊಂಡಿದೆ. ರಾಹುಲ್ ದ್ರಾವಿಡ್ ಅವರನ್ನು 2021 ರಲ್ಲಿ ಭಾರತ ತಂಡದ ಮುಖ್ಯ ಕೋಚ್ ಆಗಿ ನೇಮಿಸಲಾಯಿತು. ರಾಹುಲ್ ದ್ರಾವಿಡ್ ಅವರ ತರಬೇತಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದ್ದು ಟಿ20 ಚಾಂಪಿಯನ್ ಆಗಿದೆ. ಇದಕ್ಕೂ ಮೊದಲು, ರಾಹುಲ್ ಕೋಚಿಂಗ್‌ನಲ್ಲಿ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು 2023 ರ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯವನ್ನೂ ಆಡಿತ್ತು. ಆದರೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿರಲಿಲ್ಲ.

ರಾಹುಲ್ ದ್ರಾವಿಡ್ ಭಾರತ ತಂಡದ ಯಶಸ್ವಿ ಕೋಚ್ ಆಗಿದ್ದಾರೆ. ಆದಾಗ್ಯೂ, ಟಿ20 ವಿಶ್ವಕಪ್ ಫೈನಲ್ ಪಂದ್ಯವು ಅವರ ಕೊನೆಯ ಪಂದ್ಯವಾಗಿತ್ತು. ಈಗ ಅವರು ಭಾರತ ತಂಡಕ್ಕೆ ಯಾವುದೇ ಸ್ವರೂಪದ ಕೋಚ್ ಆಗುವುದಿಲ್ಲ. ರಾಹುಲ್ ದ್ರಾವಿಡ್ ನಂತರ ಬಿಸಿಸಿಐ ಹೊಸ ತಂಡವನ್ನು ಹುಡುಕುತ್ತಿದೆ. ಈ ಮಧ್ಯೆ ಹೊಸ ಅಪ್‌ಡೇಟ್ ಕೂಡ ಹೊರಬಿದ್ದಿದೆ.

ಜಯ್​ ಶಾ ಹೇಳಿದ್ದೇನು?

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತಾ, ಹೊಸ ಕೋಚ್‌ಗಾಗಿ ಇಬ್ಬರು ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗಿದೆ ಎಂದು ಹೇಳಿದ್ದಾರೆ. ಭಾರತ ತಂಡ ಇದೇ ತಿಂಗಳು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಅದಕ್ಕೂ ಮುನ್ನ ತಂಡಕ್ಕೆ ಹೊಸ ಕೋಚ್ ಸಿಗಲಿದ್ದಾರೆ. ಬಿಸಿಸಿಐನ ಕ್ರಿಕೆಟ್ ಸಲಹಾ ಸಮಿತಿ ಶೀಘ್ರದಲ್ಲೇ ಹೊಸ ಕೋಚ್ ಹೆಸರನ್ನು ಪ್ರಕಟಿಸಲಿದೆ. ಪ್ರಸ್ತುತ ತಂಡವು ಜುಲೈ 6 ರಿಂದ ಜಿಂಬಾಬ್ವೆಯಲ್ಲಿ ಆಡಲಿದ್ದು, ಇದರಲ್ಲಿ ವಿವಿಎಸ್ ಲಕ್ಷ್ಮಣ್ ಅವರನ್ನು ಕೋಚ್ ಆಗಿ ಕಳುಹಿಸಲಾಗುತ್ತಿದೆ ಎಂದಿದ್ದಾರೆ.

ಯಾರು ತರಬೇತುದಾರರಾಗಬಹುದು?

ಜಯ್​ ಶಾ ಹೊಸ ಕೋಚ್ ಹೆಸರನ್ನು ಬಹಿರಂಗಪಡಿಸಿಲ್ಲ. ಆದರೆ ಗೌತಮ್ ಗಂಭೀರ್ ಅವರನ್ನು ಈ ಹುದ್ದೆಗೆ ದೊಡ್ಡ ಸ್ಪರ್ಧಿ ಎಂದು ಪರಿಗಣಿಸಲಾಗಿದೆ. ಆದರೆ, ಕೆಲವೇ ದಿನಗಳಲ್ಲಿ ಬಿಸಿಸಿಐ ನೂತನ ಕೋಚ್ ಅನ್ನು ಕೂಡ ಪ್ರಕಟಿಸಲಿದ್ದು, ತಂಡದ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗುತ್ತದೆಯೇ ಅಥವಾ ಬಿಸಿಸಿಐ ಬೇರೆ ಅಭ್ಯರ್ಥಿಗಳಿಗೆ ಅವಕಾಶ ನೀಡಲಿದೆಯೇ ಎಂಬುದು ಸ್ಪಷ್ಟವಾಗಲಿದೆ.

ಹೊಸ ನಾಯಕನ ಬಗ್ಗೆಯೂ ತೀರ್ಮಾನ

ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಹೀಗಾಗಿ ಇದೀಗ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ. ಸದ್ಯ ಯಾವುದೇ ಆಟಗಾರರ ಹೆಸರು ಚರ್ಚೆಯಾಗುತ್ತಿಲ್ಲ. ಆಯ್ಕೆದಾರರು ಶೀಘ್ರದಲ್ಲೇ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಲಿದ್ದಾರೆ.

ಹೊಸ ಕೋಚ್‌ ಅಧಿಕಾರಾವಧಿ ಎಷ್ಟು?

ನೂತನ ಕೋಚ್ ಅನ್ನು ಬಿಸಿಸಿಐ ಶೀಘ್ರದಲ್ಲೇ ಪ್ರಕಟಿಸಲಿದೆ. ಮಾಧ್ಯಮ ವರದಿಗಳ ಪ್ರಕಾರ, ಹೊಸ ಕೋಚ್‌ನ ಅಧಿಕಾರಾವಧಿಯು ಜುಲೈ 1, 2024 ರಿಂದ ಡಿಸೆಂಬರ್ 31, 2027 ರವರೆಗೆ ಇರುತ್ತದೆ. ಈ ಅವಧಿಯಲ್ಲಿ ಎರಡು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಈವೆಂಟ್‌ಗಳು ನಡೆಯಲಿವೆ. ಇದೇ ವೇಳೆ ಚಾಂಪಿಯನ್ಸ್ ಟ್ರೋಫಿ, ಟಿ20 ವಿಶ್ವಕಪ್ ಮತ್ತು ಏಕದಿನ ವಿಶ್ವಕಪ್ ಕೂಡ ಆಯೋಜನೆಯಾಗಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ