ಟೀಂ ಇಂಡಿಯಾದ ಮುಂದಿನ ಟಿ20 ಸರಣಿ ಯಾವಾಗ? ಯಾರ ವಿರುದ್ಧ?

India T20 schedule 2025: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯೇ ಈ ವರ್ಷ ಟೀಂ ಇಂಡಿಯಾದ ಕೊನೆಯ ಟಿ20 ಸರಣಿ ಆಗಿತ್ತು. ಇದೀಗ ಹೊಸ ವರ್ಷ 2025 ರಲ್ಲಿ ಟೀಂ ಇಂಡಿಯಾ ತನ್ನ ಮುಂದಿನ ಟಿ20 ಸರಣಿಯನ್ನು ತವರಿನಲ್ಲಿ ಆಡಲಿದೆ. ಆ ಸರಣಿಯಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ಟೀಂ ಇಂಡಿಯಾದ ಮುಂದಿನ ಟಿ20 ಸರಣಿ ಯಾವಾಗ? ಯಾರ ವಿರುದ್ಧ?
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Nov 16, 2024 | 9:32 PM

ದಕ್ಷಿಣ ಆಫ್ರಿಕಾದಲ್ಲಿ ನಡೆದ ನಾಲ್ಕು ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು 3-1 ಅಂತರದಿಂದ ಮಣಿಸುವ ಮೂಲಕ ಟೀಂ ಇಂಡಿಯಾ ಈ ವರ್ಷದ ಕೊನೆಯ ಟಿ20 ಸರಣಿಗೆ ಅಂತ್ಯ ಹಾಡಿದೆ. ಉಭಯ ತಂಡಗಳ ನಡುವೆ ನಡೆದ ನಾಲ್ಕನೇ ಹಾಗೂ ಅಂತಿಮ ಪಂದ್ಯವನ್ನು ಭಾರತ 135 ರನ್‌ಗಳಿಂದ ಗೆದ್ದುಕೊಂಡಿತು. 284 ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ 18.2 ಓವರ್‌ಗಳಲ್ಲಿ 148 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ಟಿ20 ಸರಣಿಯನ್ನು ತನ್ನದಾಗಿಸಿಕೊಂಡಿರುವ ಭಾರತ ಟಿ20 ತಂಡ ವಿಶ್ರಾಂತಿ ಮೂಡ್​ಗೆ ಜಾರಲಿದೆ. ಏಕೆಂದರೆ ಈ ವರ್ಷ ಟೀಂ ಇಂಡಿಯಾದ ಕೊನೆಯ ಟಿ20 ಸರಣಿ ಇದಾಗಿತ್ತು. ಇನ್ನೇನಿದ್ದರು ಟೀಂ ಇಂಡಿಯಾ ಮುಂದಿನ ವರ್ಷವಷ್ಟೇ ಅಂದರೆ 2025 ರಲ್ಲೇ ಮತ್ತೊಮ್ಮೆ ಟಿ20 ಅಖಾಡಕ್ಕಿಳಿಯುವುದು.

ಭಾರತಕ್ಕೆ 24ನೇ ಗೆಲುವು

ಇನ್ನು ಈ ವರ್ಷ ಭಾರತ ಟಿ20 ತಂಡದ ಪ್ರದರ್ಶನ ಹೇಗಿತ್ತು ಎಂಬುದನ್ನು ನೋಡುವುದಾದರೆ.. ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟಿ20 ಗೆಲುವು, 2024 ರಲ್ಲಿ ಟೀಂ ಇಂಡಿಯಾಕ್ಕೆ ಸಿಕ್ಕ 24ನೇ ಗೆಲುವಾಗಿದೆ. ಈ ವರ್ಷ ಟೀಂ ಇಂಡಿಯಾ ಒಟ್ಟು 26 ಟಿ20 ಪಂದ್ಯಗಳನ್ನು ಆಡಿದೆ. ಅದರಲ್ಲಿ 2ರಲ್ಲಿ ಮಾತ್ರ ಸೋಲನುಭವಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಎರಡನೇ ಟಿ20 ಪಂದ್ಯ ಹಾಗೂ ಜಿಂಬಾಬ್ವೆ ಪ್ರವಾಸದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿದೆ. ಅದರ ಹೊರತಾಗಿ ಭಾರತ ಎಲ್ಲಾ ಪಂದ್ಯಗಳನ್ನೂ ಗೆದ್ದುಕೊಂಡಿದೆ.

ಹ್ಯಾಟ್ರಿಕ್ ಸರಣಿಯ ಗೆಲುವು

ಸೂರ್ಯಕುಮಾರ್ ಯಾದವ್ ಈ ಸರಣಿ ಗೆಲುವಿನೊಂದಿಗೆ ನಾಯಕನಾಗಿ ಹ್ಯಾಟ್ರಿಕ್ ಸಾಧನೆ ಮಾಡಿದರು. ನಾಯಕನಾಗಿ ಇದು ಸೂರ್ಯ ಅವರ ಐದನೇ ಸರಣಿಯಾಗಿದೆ. ಸೂರ್ಯ ನಾಯಕತ್ವದಲ್ಲಿ ಟೀಂ ಇಂಡಿಯಾ ಈ ಹಿಂದೆ ಬಾಂಗ್ಲಾದೇಶ ಮತ್ತು ಶ್ರೀಲಂಕಾವನ್ನು 3-0 ಅಂತರದಿಂದ ಕ್ಲೀನ್ ಮಾಡಿತ್ತು. ಅದಕ್ಕೂ ಮುನ್ನ ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು 1-1ರಲ್ಲಿ ಸಮಬಲಗೊಳಿಸಿತ್ತು. ಸೂರ್ಯ ನಾಯಕನಾಗಿ ಮೊದಲ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು 4-1 ರಿಂದ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಮುಂದಿನ ಟಿ20 ಸರಣಿ ಯಾವಾಗ?

ಮೇಲೆ ಹೇಳಿದಂತೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯೇ ಈ ವರ್ಷ ಟೀಂ ಇಂಡಿಯಾದ ಕೊನೆಯ ಟಿ20 ಸರಣಿ ಆಗಿತ್ತು. ಇದೀಗ ಹೊಸ ವರ್ಷ 2025 ರಲ್ಲಿ ಟೀಂ ಇಂಡಿಯಾ ತನ್ನ ಮುಂದಿನ ಟಿ20 ಸರಣಿಯನ್ನು ತವರಿನಲ್ಲಿ ಆಡಲಿದೆ. ಆ ಸರಣಿಯಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಈ ಸರಣಿಯ ವೇಳಾಪಟ್ಟಿಯೂ ಪ್ರಕಟವಾಗಿದ್ದು, ಆ ಪ್ರಕಾರ ಜನವರಿ 22 ರಿಂದ ಫೆಬ್ರವರಿ 2 ರವರೆಗೆ ಐದು ಪಂದ್ಯಗಳ ಟಿ20 ಸರಣಿ ನಡೆಯಲ್ಲಿದೆ.

ಟಿ20 ಸರಣಿಯ ವೇಳಾಪಟ್ಟಿ

  1. ಮೊದಲ ಪಂದ್ಯ: ಜನವರಿ 22 , ಈಡನ್ ಗಾರ್ಡನ್ಸ್
  2. ಎರಡನೇ ಪಂದ್ಯ: ಜನವರಿ 25, ಚೆನ್ನೈ
  3. ಮೂರನೇ ಪಂದ್ಯ: ಜನವರಿ 28, ರಾಜ್‌ಕೋಟ್
  4. ನಾಲ್ಕನೇ ಪಂದ್ಯ: ಜನವರಿ 31, ಪುಣೆ
  5. ಐದನೇ ಪಂದ್ಯ: ಫೆಬ್ರವರಿ 2, ಮುಂಬೈ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ನಾನ್ಯಾಕೆ ಬೇಡವಾಗಿದ್ದೇನೆಂದು ಕುಮಾರಸ್ವಾಮಿಯೇ ಹೇಳಬೇಕು: ದೇವೇಗೌಡ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ಜಾಗೃತಿ ಅಭಿಯಾನಕ್ಕಾಗಿ ವಿಜಯೇಂದ್ರ 3 ತಂಡಗಳನ್ನು ರಚಿಸಿದ್ದಾರೆ: ಯಡಿಯೂರಪ್ಪ
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ನಂಬಿಕೆಗಳ ಮಹಾ ತರ್ಕ, ಲೆಕ್ಕಚಾರ ಮಾಡಲು ಬಂದ ಸುದೀಪ್
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ವಕ್ಫ್ ಭೂವಿವಾದ; ಬಿಜೆಪಿಯ ಪ್ರಸ್ತಾಪಿತ ಜಾಗೃತಿ ಜಾಥಾಗೆ ಸಮನ್ವಯತೆಯ ಕೊರತೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ರೌಡಿಶೀಟರ್ ಸ್ನೇಹಮಯಿ ಕೃಷ್ಣರನ್ನು ಗಡಿಪಾರು ಮಾಡುವಂತೆ ದೂರಿನಲ್ಲಿ ಕೋರಿಕೆ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ, ಪರಿಸ್ಥಿತಿ ಗಂಭೀರ
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್
ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವುದು ಹೊಸದೇನಲ್ಲ: ಜಮೀರ್ ಅಹ್ಮದ್