AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: 8 ತಂಡಗಳ ಕದನ: ಟೀಮ್ ಇಂಡಿಯಾದ ಮುಂದಿನ ಟಾರ್ಗೆಟ್

Team india: 2013 ರಲ್ಲಿ ಭಾರತ ತಂಡವು ಕೊನೆಯ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿತ್ತು. 2017 ರಲ್ಲಿ ಫೈನಲ್​ಗೆ ತಲುಪಿದರೂ ಟೀಮ್ ಇಂಡಿಯಾಗೆ ಸೋಲುಣಿಸಿ ಪಾಕಿಸ್ತಾನ್ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದರು. ಇದೀಗ ಮತ್ತೆ ಚಾಂಪಿಯನ್ಸ್ ಟ್ರೋಫಿಗೆ ವೇದಿಕೆ ಸಿದ್ಧವಾಗಿದೆ. ಅದರಂತೆ ಮುಂದಿನ ವರ್ಷ ಮತ್ತೊಂದು ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲು ಟೀಮ್ ಇಂಡಿಯಾ ಸಜ್ಜಾಗಲಿದೆ.

Team India: 8 ತಂಡಗಳ ಕದನ: ಟೀಮ್ ಇಂಡಿಯಾದ ಮುಂದಿನ ಟಾರ್ಗೆಟ್
Team India
ಝಾಹಿರ್ ಯೂಸುಫ್
|

Updated on: Jul 02, 2024 | 9:24 AM

Share

ಭಾರತ ತಂಡವು ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ವಿಶ್ವಕಪ್ ಗೆಲುವಿನ ಅಲೆಯ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. ಇದಾಗ್ಯೂ ಈ ಇಬ್ಬರು ದಿಗ್ಗಜರು ಏಕದಿನ ಮತ್ತು ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯಲಿದ್ದಾರೆ.

ಅದರಲ್ಲೂ ಮುಂಬರುವ ಚಾಂಪಿಯನ್ಸ್ ಟ್ರೋಫಿವರೆಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಏಕದಿನ ತಂಡದಲ್ಲಿ ಕಾಣಿಸಿಕೊಳ್ಳುವುದು ಖಚಿತ. ಇದನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಖಚಿತಪಡಿಸಿದ್ದಾರೆ. ಹೀಗಾಗಿ 2025 ರವರೆಗೆ ಕಿಂಗ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ವಿದಾಯ ಹೇಳುವುದಿಲ್ಲ ಎಂದೇ ಹೇಳಬಹುದು.

8 ತಂಡಗಳ ಕದನ:

20 ತಂಡಗಳ ನಡುವಣ ಟಿ20 ವಿಶ್ವಕಪ್​ ಕದನದಲ್ಲಿ ಚಾಂಪಿಯನ್ ಪಟ್ಟಕ್ಕೇರಿರುವ ಭಾರತ ತಂಡದ ಮುಂದಿನ ಗುರಿ ಚಾಂಪಿಯನ್ಸ್ ಟ್ರೋಫಿ 2025. ಮುಂದಿನ ವರ್ಷ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಆ ತಂಡಗಳಾವುವು ಎಂದರೆ…

  1. ಭಾರತ
  2. ಪಾಕಿಸ್ತಾನ್
  3. ಸೌತ್ ಆಫ್ರಿಕಾ
  4. ನ್ಯೂಝಿಲೆಂಡ್
  5. ಅಫ್ಘಾನಿಸ್ತಾನ್
  6. ಇಂಗ್ಲೆಂಡ್
  7. ಬಾಂಗ್ಲಾದೇಶ್
  8. ಆಸ್ಟ್ರೇಲಿಯಾ

ಈ ತಂಡಗಳ ನಡುವೆ ಚಾಂಪಿಯನ್ ಪಟ್ಟಕ್ಕಾಗಿ ಏಕದಿನ ಟೂರ್ನಿ ನಡೆಯಲಿದೆ. ಇಲ್ಲಿ 8 ತಂಡಗಳು ಬಲಿಷ್ಠವಾಗಿರುವ ಕಾರಣ ಮೊದಲ ಸುತ್ತಿನಿಂದಲೇ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು. ಅದರಲ್ಲೂ ಕಳೆದ ಏಕದಿನ ವಿಶ್ವಕಪ್​ನ ಫೈನಲ್​ನಲ್ಲಿ ಸೋಲನುಭವಿಸಿದ್ದ ಭಾರತ ತಂಡವು ಮುಂದಿನ ವರ್ಷ ಮತ್ತೆ ಏಕದಿನ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್ ಆಗುವ ಅವಕಾಶ ಹೊಂದಿದ್ದು, ಈ ಮೂಲಕ ಚಾಂಪಿಯನ್ಸ್ ಟ್ರೋಫಿಯ ಬರವನ್ನು ಟೀಮ್ ಇಂಡಿಯಾ ನೀಗಿಸಲಿದೆಯಾ ಕಾದು ನೋಡಬೇಕಿದೆ.

ಪಾಕಿಸ್ತಾನದಲ್ಲಿ ಟೂರ್ನಿ:

ಫೆಬ್ರವರಿ-ಮಾರ್ಚ್ ನಡುವೆ ನಡೆಯಲಿರುವ ಬಹುನಿರೀಕ್ಷಿತ ಚಾಂಪಿಯನ್ಸ್​ ಟ್ರೋಫಿ ಟೂರ್ನಿಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಆತಿಥ್ಯವಹಿಸುತ್ತಿದೆ. ಅಂದರೆ ಟೂರ್ನಿಯು ಪಾಕ್​ನಲ್ಲಿ ನಡೆಯಲಿದೆ. ಆದರೆ ಭಾರತ ತಂಡವು ಪಾಕ್​ಗೆ ತೆರಳಲು ಹಿಂದೇಟು ಹಾಕಲಿದೆ.

ಅಲ್ಲದೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಬೇಕಿದ್ದರೆ, ತಟಸ್ಥ ಸ್ಥಳದಲ್ಲಿ ಟೂರ್ನಿಯನ್ನು ಆಯೋಜಿಸಲು ಬಿಸಿಸಿಐ ಬೇಡಿಕೆ ಮುಂದಿಡಬಹುದು. ಅದರಂತೆ ಟೀಮ್ ಇಂಡಿಯಾದ ಪಂದ್ಯಗಳಿಗೆ ಯುಎಇ ಅಥವಾ ಶ್ರೀಲಂಕಾ ಆತಿಥ್ಯವಹಿಸುವ ಸಾಧ್ಯತೆ ಕೂಡ ಇದೆ.

ಇದನ್ನೂ ಓದಿ: T20 World Cup 2024: ಟೀಮ್ ಇಂಡಿಯಾ ಪರ ಒಂದೇ ಒಂದು ಪಂದ್ಯವಾಡದ ಮೂವರು ಆಟಗಾರರು..!

ಏಕೆಂದರೆ ಈ ಹಿಂದೆ ಪಾಕಿಸ್ತಾನದಲ್ಲಿ ಏಷ್ಯಾಕಪ್ ಆಯೋಜನೆಗೊಂಡಿದ್ದಾಗ, ಭಾರತ ತಂಡವು ತನ್ನ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಿತ್ತು. ಹೀಗಾಗಿ ಈ ಬಾರಿ ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲು ಐಸಿಸಿಗೆ ಬಿಸಿಸಿಐ ಮನವಿ ಮಾಡುವ ಸಾಧ್ಯತೆ ಹೆಚ್ಚಿದೆ.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ