AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ

Team India's Playing XI Prediction: ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಪಟ್ಟಿಯಲ್ಲಿ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡದಿರುವುದು ಅಚ್ಚರಿಯಾಗಿದೆ. ಉಳಿದಂತೆ ಟೂರ್ನಿಯ ಮೊದಲ ಪಂದ್ಯಕ್ಕೆ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದರ ಸಂಪೂರ್ಣ ಚಿತ್ರಣ ಹೊರಬಿದ್ದಿದೆ.

Champions Trophy 2025: ಟೀಂ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Jan 18, 2025 | 7:31 PM

Share

ಹಲವು ದಿನಗಳ ಕಾಯುವಿಕೆಯ ನಂತರ ಕೊನೆಗೂ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾ ಘೋಷಣೆಯಾಗಿದೆ. ಈಗಾಗಲೇ ಕೆಲ ದಿನ ತಡವಾಗಿದ್ದ ಈ ಘೋಷಣೆಗಾಗಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯೂ ಸುಮಾರು ಎರಡೂವರೆ ಗಂಟೆ ತಡವಾಗಿ ಆರಂಭವಾದರೂ ಅಂತಿಮವಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸುವ 15 ಮಂದಿಯ ಹೆಸರು ಹೊರಬಿದ್ದಿದೆ. ತಂಡದ ಆಯ್ಕೆಯಲ್ಲಿ ಯಾವುದೇ ಅಚ್ಚರಿಯ ನಿರ್ಧಾರವಾಗಿಲ್ಲ. ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡದಿರುವುದು ಮಾತ್ರ ಕೊಂಚ ಅಚ್ಚರಿಯನ್ನುಂಟು ಮಾಡಿದೆ. ಈಗ ಪ್ರಶ್ನೆ ಏನೆಂದರೆ, ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಆ ಪಂದ್ಯಕ್ಕೆ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಯಾರು ಸ್ಥಾನ ಪಡೆಯುತ್ತಾರೆ? ಎಂಬುದು.

2023 ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದ ಮತ್ತು ಈ ಸ್ವರೂಪದಲ್ಲಿ ನಿರಂತರವಾಗಿ ಉತ್ತಮವಾಗಿ ಆಡುತ್ತಿರುವ ಆಟಗಾರರನ್ನು ಹೆಚ್ಚಾಗಿ ಆಯ್ಕೆ ಮಾಡಲಾಗಿದೆ. ಕುಲ್ದೀಪ್ ಯಾದವ್ ಸಂಪೂರ್ಣ ಫಿಟ್ ಆಗಿ ಮತ್ತೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಇದರ ಜೊತೆಗೆ ಕೊಂಚ ಸಮಾಧಾನಕರ ಸಂಗತಿಯೆಂದರೆ ಇಂಜುರಿಯಿಂದಾಗಿ ಚಾಂಪಿಯನ್ಸ್ ಟ್ರೋಫಿಯಿಂದಲೇ ಹೊರಗುಳಿಯಲಿದ್ದಾರೆ ಎಂದು ಹೇಳಲಾಗುತ್ತಿದ್ದ ಜಸ್ಪ್ರೀತ್ ಬುಮ್ರಾ ಅವರನ್ನು ಆಯ್ಕೆ ಮಾಡಲಾಗಿದೆ. ಆದಾಗ್ಯೂ, ಅವರು ಆಡುವುದು ಅವರ ಫಿಟ್ನೆಸ್ ಮೇಲೆ ಅವಲಂಬಿತವಾಗಿದೆ.

ಬ್ಯಾಟಿಂಗ್ ಕ್ರಮಾಂಕ ಸ್ಥಿರ

ಇನ್ನು ಪ್ಲೇಯಿಂಗ್ ಇಲೆವೆನ್ ಬಗ್ಗೆ ಮಾತನಾಡುವುದಾದರೆ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ದೊಡ್ಡ ಸವಾಲೇನೂ ಇಲ್ಲ. ನಾಯಕ ರೋಹಿತ್ ಶರ್ಮಾ ಮತ್ತು ಉಪನಾಯಕ ಶುಭ್​ಮನ್ ಗಿಲ್ ಅವರ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಹೀಗಿರುವಾಗ ಚೊಚ್ಚಲ ಬಾರಿಗೆ ಏಕದಿನ ತಂಡದಲ್ಲಿ ಆಯ್ಕೆಯಾಗಿರುವ ಯಶಸ್ವಿ ಜೈಸ್ವಾಲ್‌ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ಕಾಯಬೇಕಿದೆ. ಉಳಿದಂತೆ ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಕ್ರಮವಾಗಿ ಮೂರನೇ ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದು, ಆರನೇ ಕ್ರಮಾಂಕದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟ್ ಬೀಸಲಿದ್ದಾರೆ.

ಇಲ್ಲಿ ವಿಕೆಟ್ ಕೀಪರ್ ಬಗ್ಗೆ ಪ್ರಶ್ನೆ ಮೂಡಿದ್ದು, ಇದಕ್ಕಾಗಿ ಕೆಎಲ್ ರಾಹುಲ್ ಹಾಗೂ ರಿಷಬ್ ಪಂತ್ ನಡುವೆ ಪೈಪೋಟಿ ಏರ್ಪಡಲಿದೆ. ಟೀಂ ಇಂಡಿಯಾ ಕಳೆದ ವಿಶ್ವಕಪ್‌ನ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡರೆ, ರಾಹುಲ್ ಇಲ್ಲಿ ಮೇಲುಗೈ ಸಾಧಿಸಿದಂತೆ ಕಾಣುತ್ತಿದೆ. ಮತ್ತೊಂದೆಡೆ, ಎಡಗೈ ಬ್ಯಾಟ್ಸ್‌ಮನ್‌ಗಳನ್ನು ಬ್ಯಾಟಿಂಗ್ ಕ್ರಮಾಂಕದಲ್ಲಿ ಇರಿಸಿಕೊಳ್ಳಲು ನಿರ್ಧರಿಸಿದರೆ, ಪಂತ್‌ಗೆ ಇದರಲ್ಲಿ ಅವಕಾಶ ಸಿಗಬಹುದು. ಆದಾಗ್ಯೂ, ಎಡಗೈ ಸಮಸ್ಯೆಯನ್ನು ಎದುರಿಸಲು, ತಂಡವು ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಅಥವಾ ರವೀಂದ್ರ ಜಡೇಜಾ ಅವರಂತಹ ಆಯ್ಕೆಗಳನ್ನು ಹೊಂದಿದ್ದು, ಅವರಲ್ಲಿ ಯಾರನ್ನಾದರೂ ಆಯ್ಕೆ ಮಾಡಿದರೆ ಬಡ್ತಿ ಪಡೆಯಬಹುದು. ಹೀಗಿರುವಾಗ ರಾಹುಲ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯುವುದು ಖಚಿತ ಎನ್ನಬಹುದು.

ಜಡೇಜಾ, ಶಮಿಗೆ ಅವಕಾಶ?

ಪಂದ್ಯಾವಳಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಕಾರಣ ಟೀಂ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಅಲ್ಲಿನ ಪಿಚ್‌ಗಳು ನಿಧಾನಗತಿಯ ಬೌಲಿಂಗ್‌ಗೆ ಸಹಕಾರಿಯಾಗಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ತಂಡದಲ್ಲಿ 4 ಸ್ಪಿನ್ನರ್‌ಗಳನ್ನು (3 ಸ್ಪಿನ್-ಆಲ್ ರೌಂಡರ್‌ಗಳು) ಆಯ್ಕೆ ಮಾಡಲಾಗಿದೆ. ಇವರಲ್ಲಿ ಯಾರಿಗೆ ಪ್ಲೇಯಿಂಗ್​ 11ನಲ್ಲಿ ಅವಕಾಶ ಸಿಗುತ್ತದೆ ಎಂಬುದು ಕುತೂಹಲಕಾರಿಯಾಗಿದೆ. ಅನುಭವವನ್ನು ಪರಿಗಣಿಸಿದರೆ ರವೀಂದ್ರ ಜಡೇಜಾಗೆ ಆಡುವ ಅವಕಾಶ ಸಿಗಬಹುದು. ಆದರೆ ಅವರ ಇತ್ತೀಚಿನ ಫಾರ್ಮ್ ಕಳವಳಕಾರಿಯಾಗಿರುವ ಕಾರಣ ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಮತ್ತು ಕುಲ್ದೀಪ್ ಯಾದವ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಬಹುದು.

ಇದಾದ ನಂತರ ಕೇವಲ ಇಬ್ಬರು ವೇಗದ ಬೌಲರ್‌ಗಳಿಗೆ ಮಾತ್ರ ಅವಕಾಶವಿದ್ದು, ಇದಕ್ಕಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಅರ್ಷದೀಪ್ ಸಿಂಗ್ ನಡುವೆ ಪೈಪೋಟಿ ನಡೆಯಲಿದೆ. ಇದರಲ್ಲಿ ಬುಮ್ರಾ ಅವರ ಫಿಟ್‌ನೆಸ್ ಪ್ರಮುಖವಾಗಲಿದೆ. ಬುಮ್ರಾ ಫಿಟ್ ಆಗದಿದ್ದರೆ ಶಮಿ ಮತ್ತು ಅರ್ಷದೀಪ್ ಆಡುವುದು ಖಚಿತ. ಬುಮ್ರಾ ಫಿಟ್ ಆದರೆ, ಶಮಿಯನ್ನು ತಂಡದಿಂದ ಕೈಬಿಡಬಹುದು. ಎಡಗೈ ವೇಗಿಯಾಗಿ ಅರ್ಷದೀಪ್​ಗೆ ಅವಕಾಶ ನೀಡಬಹುದು.

ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ / ಮೊಹಮ್ಮದ್ ಶಮಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Sat, 18 January 25

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​