ಮೂವರು ಆಲ್​ರೌಂಡರ್​ಗಳು, ಇಬ್ಬರು ವೇಗಿಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

IND vs ENG 1st T20I: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿಯು ಜನವರಿ 22 ರಿಂದ ಶುರುವಾಗಲಿದೆ. ಈ ಸರಣೀಯಲ್ಲಿ ಒಟ್ಟು ಐದು ಪಂದ್ಯಗಳನ್ನಾಡಲಾಗುತ್ತದೆ. ಮೊದಲ ಮ್ಯಾಚ್​ ಕೊಲ್ಕತ್ತಾದಲ್ಲಿ ನಡೆದರೆ, 2ನೇ ಪಂದ್ಯವು ಜನವರಿ 25 ರಂದು ಚೆನ್ನೈನಲ್ಲಿ ನಡೆಯಲಿದೆ. ಇನ್ನು ಮೂರನೇ ಪಂದ್ಯ ಜ.28 ರಂದು ರಾಜ್​ಕೋಟ್​ನಲ್ಲಿ ನಡೆಯಲಿದ್ದು, ನಾಲ್ಕನೇ ಪಂದ್ಯ ಜನವರಿ 31 ರಂದು ಪುಣೆಯಲ್ಲಿ ಜರುಗಲಿದೆ. ಹಾಗೆಯೇ ಈ ಸರಣಿಯ ಕೊನೆಯ ಮ್ಯಾಚ್ ಫೆಬ್ರವರಿ 2 ರಂದು ಮುಂಬೈನಲ್ಲಿ ನಡೆಯಲಿದೆ.

ಮೂವರು ಆಲ್​ರೌಂಡರ್​ಗಳು, ಇಬ್ಬರು ವೇಗಿಗಳು: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11
Team India
Follow us
ಝಾಹಿರ್ ಯೂಸುಫ್
|

Updated on: Jan 21, 2025 | 12:55 PM

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಬುಧವಾರದಿಂದ (ಜ.22) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್​ ರೂಪಿಸಬೇಕಿದೆ. ಏಕೆಂದರೆ ಈ ಸರಣಿಯಿಂದ ಶುಭ್​ಮನ್ ಗಿಲ್, ರಿಷಭ್ ಪಂತ್, ಯಶಸ್ವಿ ಜೈಸ್ವಾಲ್ ಸೇರಿದಂತೆ ಕೆಲ ಆಟಗಾರರು ಹೊರಗುಳಿದಿದ್ದಾರೆ.

ಹೀಗಾಗಿ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್​ ಆರಂಭಿಸುವುದು ಖಚಿತ ಎನ್ನಬಹುದು. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ.

ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿದರೆ, ಐದನೇ ಕ್ರಮಾಂಕದಲ್ಲಿ ರಿಂಕು ಸಿಂಗ್ ಬ್ಯಾಟ್ ಬೀಸಬಹುದು. ಹಾಗೆಯೇ ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.

ಇವರೊಂದಿಗೆ ಪರಿಪೂರ್ಣ ಸ್ಪಿನ್ನರ್​ ಆಗಿ ವರುಣ್ ಚಕ್ರವರ್ತಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ವೇಗಿಗಳಾಗಿ ಮೊಹಮ್ಮದ್ ಶಮಿ ಹಾಗೂ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವುದು ಬಹುತೇಕ ಖಚಿತ.

ಮೂವರು ಆಲ್​ರೌಂಡರ್, ಇಬ್ಬರು ವೇಗಿಗಳು:

  • ಟೀಮ್ ಇಂಡಿಯಾ ಮೂವರು ಆಲ್​ರೌಂಡರ್​​ಗಳನ್ನು ಕಣಕ್ಕಿಳಿಸುವ ಮೂಲಕ ಹಾರ್ದಿಕ್ ಪಾಂಡ್ಯ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಹೆಚ್ಚವರಿ ವೇಗಿಗಳಾಗಿ ಬಳಸಿಕೊಳ್ಳಬಹುದು.
  • ಮೊಹಮ್ಮದ್ ಶಮಿ ಹಾಗೂ ಅರ್ಷದೀಪ್ ಸಿಂಗ್ ಜೊತೆ ಪಾಂಡ್ಯ ಹಾಗೂ ನಿತೀಶ್ ಕುಮಾರ್ ಅವರನ್ನು ಬಳಸಿಕೊಂಡು ಒಟ್ಟು ನಾಲ್ವರು ವೇಗದ ಬೌಲರ್​​ಗಳ ಆಯ್ಕೆಯನ್ನು ಪಡೆಯಬಹುದು.
  • ಹಾಗೆಯೇ ವರುಣ್ ಚಕ್ರವರ್ತಿ ಜೊತೆ 2ನೇ ಸ್ಪಿನ್ನರ್ ಆಗಿ ಅಕ್ಷರ್ ಪಟೇಲ್​ ಬಳಸಿಕೊಳ್ಳಲು ಅವಕಾಶ ಸಿಗಲಿದೆ.
  • ಇದರಿಂದ ಟೀಮ್ ಇಂಡಿಯಾಗೆ ಒಟ್ಟು ಆರು ಬೌಲರ್​ಗಳನ್ನು ಬಳಸಿಕೊಳ್ಳಲು ಅವಕಾಶ ಸಿಗಲಿದೆ. ಅದರಂತೆ ಭಾರತ ತಂಡದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
  • ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್)
  • ಅಭಿಷೇಕ್ ಶರ್ಮಾ
  • ತಿಲಕ್ ವರ್ಮಾ
  • ಸೂರ್ಯಕುಮಾರ್ ಯಾದವ್ (ನಾಯಕ)
  • ರಿಂಕು ಸಿಂಗ್
  • ಹಾರ್ದಿಕ್ ಪಾಂಡ್ಯ
  • ಅಕ್ಷರ್ ಪಟೇಲ್
  • ನಿತೀಶ್ ಕುಮಾರ್ ರೆಡ್ಡಿ
  • ಮೊಹಮ್ಮದ್ ಶಮಿ
  • ಅರ್ಷದೀಪ್ ಸಿಂಗ್
  • ವರುಣ್ ಚಕ್ರವರ್ತಿ

ಇದನ್ನೂ ಓದಿ: 26 ಸಿಕ್ಸ್, 17 ಫೋರ್​: RCBಯಿಂದ ಹೊರಬಿದ್ದ ಬಳಿಕ ಗ್ಲೆನ್ ಮ್ಯಾಕ್ಸ್​ವೆಲ್ ಸಿಡಿಲಬ್ಬರ

ಭಾರತ ಟಿ20 ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್).

ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಬೆಳಗಾವಿ ಅಧಿವೇಶನ ನಿಸ್ಸಂದೇಹವಾಗಿ ಕಾಂಗ್ರೆಸ್ ಪಕ್ಷದ ಜಾತ್ರೆ: ಶಿವಕುಮಾರ್
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕರ್ತವ್ಯನಿರತ ಪೊಲೀಸರ ಮೇಲೆ ಜೋರು ಮಾಡಲು ಮುಂದಾದ ಕಾಂಗ್ರೆಸ್ಸಿಗರು
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
ಕಾಂಗ್ರೆಸ್ ಅಧಿವೇಶನದಲ್ಲಿ ಭಾಗಿಯಾಗಲು ಸೋಮಶೇಖರ್ ಬಂದಿರುವರೇ?
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
Video: ಪ್ರಬಲ ಭೂಕಂಪಕ್ಕೆ ನಲುಗಿದ ತೈವಾನ್
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
‘2 ರೆಕ್ಕೆ ಕೊಡು, ದೊಡ್ಡ ಸ್ಟಾರ್ ಆಗಬೇಕು’; ಟ್ರೋಫಿ ನೋಡಿ ತ್ರಿವಿಕ್ರಂ ಮಾತು
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಕೊಪ್ಪಳ: ಸ್ವಂತ ಹಣದಲ್ಲಿ ಸರ್ಕಾರಿ ಶಾಲೆಗೆ‌ ಬೋರ್​ವೆಲ್ ಕೊರೆಸಿದ ರೈತ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ