ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಬುಧವಾರದಿಂದ (ಜ.22) ಶುರುವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಬೇಕಿದೆ. ಏಕೆಂದರೆ ಈ ಸರಣಿಯಿಂದ ಶುಭ್ಮನ್ ಗಿಲ್, ರಿಷಭ್ ಪಂತ್, ಯಶಸ್ವಿ ಜೈಸ್ವಾಲ್ ಸೇರಿದಂತೆ ಕೆಲ ಆಟಗಾರರು ಹೊರಗುಳಿದಿದ್ದಾರೆ.
ಹೀಗಾಗಿ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಇನಿಂಗ್ಸ್ ಆರಂಭಿಸುವುದು ಖಚಿತ ಎನ್ನಬಹುದು. ಇನ್ನು ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕಾಣಿಸಿಕೊಳ್ಳಲಿದ್ದಾರೆ.
ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿದರೆ, ಐದನೇ ಕ್ರಮಾಂಕದಲ್ಲಿ ರಿಂಕು ಸಿಂಗ್ ಬ್ಯಾಟ್ ಬೀಸಬಹುದು. ಹಾಗೆಯೇ ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ಹಾಗೂ ನಿತೀಶ್ ಕುಮಾರ್ ರೆಡ್ಡಿಗೆ ಅವಕಾಶ ನೀಡುವ ಸಾಧ್ಯತೆ ಹೆಚ್ಚಿದೆ.
ಇವರೊಂದಿಗೆ ಪರಿಪೂರ್ಣ ಸ್ಪಿನ್ನರ್ ಆಗಿ ವರುಣ್ ಚಕ್ರವರ್ತಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ ವೇಗಿಗಳಾಗಿ ಮೊಹಮ್ಮದ್ ಶಮಿ ಹಾಗೂ ಅರ್ಷದೀಪ್ ಸಿಂಗ್ ಕಣಕ್ಕಿಳಿಯುವುದು ಬಹುತೇಕ ಖಚಿತ.
ಇದನ್ನೂ ಓದಿ: 26 ಸಿಕ್ಸ್, 17 ಫೋರ್: RCBಯಿಂದ ಹೊರಬಿದ್ದ ಬಳಿಕ ಗ್ಲೆನ್ ಮ್ಯಾಕ್ಸ್ವೆಲ್ ಸಿಡಿಲಬ್ಬರ
ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪಾನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ವಾಷಿಂಗ್ಟನ್ ಸುಂದರ್, ಧ್ರುವ್ ಜುರೇಲ್ (ವಿಕೆಟ್ ಕೀಪರ್).