
ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಏಕದಿನ ಪಂದ್ಯ ನಾಳೆ (ಫೆ.9) ನಡೆಯಲಿದೆ. ಕಟಕ್ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ 2 ಬದಲಾವಣೆ ಮಾಡಿಕೊಳ್ಳುವುದು ಖಚಿತ. ಏಕೆಂದರೆ ಮೊಣಕಾಲಿನ ನೋವಿನ ಕಾರಣ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ವಿರಾಟ್ ಕೊಹ್ಲಿ ಕಣಕ್ಕಿಳಿದರೆ ಮೊದಲ ಮ್ಯಾಚ್ನಲ್ಲಿ ಆರಂಭಿಕನಾಗಿ ಆಡಿದ ಯಶಸ್ವಿ ಜೈಸ್ವಾಲ್ ಹೊರಗುಳಿಯಬಹುದು. ಇನ್ನು ಮೊದಲ ಪಂದ್ಯದಲ್ಲಿ 9.4 ಓವರ್ಗಳನ್ನು ಎಸೆದಿದ್ದ ಕುಲ್ದೀಪ್ ಯಾದವ್ 53 ರನ್ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಹೀಗಾಗಿ ಕುಲ್ದೀಪ್ ಬದಲಿಗೆ ದ್ವಿತೀಯ ಪಂದ್ಯದಲ್ಲಿ ವರುಣ್ ಚಕ್ರವರ್ತಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.
ಅದರಂತೆ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಿದರೆ, ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.
ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಅವಕಾಶ ಪಡೆಯಲಿದ್ದಾರೆ. ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬೌಲರ್ಗಳಾಗಿ ಮೊಹಮ್ಮದ್ ಶಮಿ, ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿ ಸ್ಥಾನ ಪಡೆಯಬಹುದು. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ 11 ಹೀಗಿರಲಿದೆ…
ಇದನ್ನೂ ಓದಿ: ಅಚ್ಚರಿಯ ನಿರ್ಧಾರ… ದಿಢೀರ್ ನಿವೃತ್ತಿ ಘೋಷಿಸಿದ ಮಾರ್ಕಸ್ ಸ್ಟೊಯಿನಿಸ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.