AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 27 ಪಂದ್ಯಗಳು… ಟೀಮ್ ಇಂಡಿಯಾದ ವಿಶ್ವಕಪ್​ ಸಿದ್ಧತೆ ಶುರು!

India vs Afghanistan: ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಮೂರು ಮ್ಯಾಚ್​ಗಳ ಏಕದಿನ ಸರಣಿಯು ಇಂದಿನಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಧರ್ಮಶಾಲಾದಲ್ಲಿ ನಡೆದರೆ, ಎರಡನೇ ಪಂದ್ಯವು ಲಕ್ನೋನಲ್ಲಿ ಜರುಗಲಿದೆ. ಇನ್ನು ಮೂರನೇ ಪಂದ್ಯಕ್ಕೆ ಚೆನ್ನೈನ ಚೆಪಾಕ್ ಸ್ಟೇಡಿಯಂ ಆತಿಥ್ಯವಹಿಸಲಿದೆ.

ಬರೋಬ್ಬರಿ 27 ಪಂದ್ಯಗಳು... ಟೀಮ್ ಇಂಡಿಯಾದ ವಿಶ್ವಕಪ್​ ಸಿದ್ಧತೆ ಶುರು!
Team India 2026 06 13t102609.561
ಝಾಹಿರ್ ಯೂಸುಫ್
|

Updated on: Jun 13, 2026 | 10:29 AM

Share

ಟೀಮ್ ಇಂಡಿಯಾದ ಏಕದಿನ ವಿಶ್ವಕಪ್ (ODI World Cup 2027) ತಯಾರಿ ಇಂದಿನಿಂದ (ಜೂನ್ 13) ಶುರುವಾಗಲಿದೆ. ಅಫ್ಘಾನಿಸ್ತಾನ್ ವಿರುದ್ಧದ ಮೂರು ಪಂದ್ಯಗಳ ದ್ವಿಪಕ್ಷೀಯ ಸರಣಿಯೊಂದಿಗೆ ಭಾರತ ತಂಡ ವಿಶ್ವಕಪ್ ಸಿದ್ಧತೆ ಆರಂಭವಾಗುತ್ತಿದ್ದು, ಈ ಸರಣಿಯ ಬಳಿಕ ಟೀಮ್ ಇಂಡಿಯಾ ಒಟ್ಟು 24 ಪಂದ್ಯಗಳನ್ನಾಡಲಿದೆ. ಅಂದರೆ 2027ರ ಏಕದಿನ ವಿಶ್ವಕಪ್​ಗೂ ಮುನ್ನ ಒಟ್ಟು 27 ಒನ್​ಡೇ ಮ್ಯಾಚ್​ಗಳಲ್ಲಿ ಕಣಕ್ಕಿಳಿಯಲಿದೆ.

ಯಾರ ವಿರುದ್ಧ 27 ಪಂದ್ಯಗಳು?

ಭಾರತ ತಂಡವು 2027ರ ಏಕದಿನ ವಿಶ್ವಕಪ್‌ಗೂ ಮುನ್ನ ಒಟ್ಟು 27 ಏಕದಿನ ಪಂದ್ಯಗಳನ್ನು (ODIs) ಆಡಲಿದೆ. ಐಸಿಸಿ (ICC) ಭವಿಷ್ಯದ ಪ್ರವಾಸ ಯೋಜನೆ (FTP) ಹಾಗೂ BCCI ಪ್ರಕಟಿಸಿರುವ ಅಧಿಕೃತ ವೇಳಾಪಟ್ಟಿಯ ಪ್ರಕಾರ ಈ ಪಂದ್ಯಗಳು ನಿಗದಿಯಾಗಿವೆ.

ವಿಶ್ವಕಪ್ ಸಿದ್ಧತೆಯ ಭಾಗವಾಗಿ ಭಾರತ ತಂಡವು ಯಾವೆಲ್ಲಾ ದೇಶಗಳ ವಿರುದ್ಧ ಎಷ್ಟು ಏಕದಿನ ಪಂದ್ಯಗಳನ್ನು ಆಡಲಿದೆ ಎಂಬ ಸಂಪೂರ್ಣ ವಿವರ ಇಲ್ಲಿದೆ:

  • ಅಫ್ಘಾನಿಸ್ತಾನ್: ಜೂನ್ 13 ರಿಂದ ಶುರುವಾಗಲಿರುವ ಅಫ್ಘಾನಿಸ್ತಾನ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲಿದೆ.
  • ಇಂಗ್ಲೆಂಡ್: ಜುಲೈ 2026 ರಲ್ಲಿ ಭಾರತ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ 3 ಏಕದಿನ ಪಂದ್ಯಗಳನ್ನು ಆಡಲಿದೆ.
  • ವೆಸ್ಟ್ ಇಂಡೀಸ್: ಸೆಪ್ಟೆಂಬರ್-ಅಕ್ಟೋಬರ್ 2026 ರಲ್ಲಿ ವೆಸ್ಟ್ ಇಂಡೀಸ್ ತಂಡ ಭಾರತಕ್ಕೆ ಪ್ರವಾಸ ಬರಲಿದ್ದು, ತವರಿನಲ್ಲಿ 3 ಪಂದ್ಯಗಳು ನಡೆಯಲಿವೆ.
  • ನ್ಯೂಝಿಲೆಂಡ್: ಅಕ್ಟೋಬರ್-ನವೆಂಬರ್ 2026 ರಲ್ಲಿ ನ್ಯೂಝಿಲೆಂಡ್ ಪ್ರವಾಸದಲ್ಲಿ ಭಾರತ ತಂಡವು 5 ಏಕದಿನ ಪಂದ್ಯಗಳ ಸರಣಿಯನ್ನು ಆಡಲಿದೆ.
  • ಶ್ರೀಲಂಕಾ: ಡಿಸೆಂಬರ್ 2026 ರಲ್ಲಿ ಶ್ರೀಲಂಕಾ ತಂಡ ಭಾರತ ಪ್ರವಾಸ ಕೈಗೊಳ್ಳಲಿದ್ದು, ಭಾರತದಲ್ಲಿ 3 ಪಂದ್ಯಗಳು ನಡೆಯಲಿವೆ.
  • ಝಿಂಬಾಬ್ವೆ: ಜನವರಿ 2027 ರ ಆರಂಭದಲ್ಲಿ ಝಿಂಬಾಬ್ವೆ ವಿರುದ್ಧ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲಿದೆ.
  • ಏಷ್ಯಾ ಕಪ್: 2027ರ ಮಧ್ಯಭಾಗದಲ್ಲಿ (ವಿಶ್ವಕಪ್‌ಗೂ ಮುನ್ನ) ಏಕದಿನ ಮಾದರಿಯ ಏಷ್ಯಾ ಕಪ್ ಟೂರ್ನಿ ನಡೆಯಲಿದ್ದು, ಭಾರತ ಫೈನಲ್ ತಲುಪಿದರೆ ಕನಿಷ್ಠ 7 ಪಂದ್ಯಗಳನ್ನು ಆಡಲಿದೆ.

ಈ ಸರಣಿ ಮತ್ತು ಟೂರ್ನಿಗಳ ಮೂಲಕ ಟೀಮ್ ಇಂಡಿಯಾ ಒಟ್ಟು 27 ಏಕದಿನ ಪಂದ್ಯಗಳನ್ನು ಆಡುವ ಮೂಲಕ ಅಕ್ಟೋಬರ್ 2027 ರಲ್ಲಿ ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ನಡೆಯಲಿರುವ ವಿಶ್ವಕಪ್‌ಗೆ ಸಂಪೂರ್ಣವಾಗಿ ಸಜ್ಜಾಗಲಿದೆ.

ಇದನ್ನೂ ಓದಿ: ಯುದ್ಧದ ನಡುವೆ ಫಿಫಾ ವಿಶ್ವಕಪ್​​ಗೆ ಇರಾನ್ ಎಂಟ್ರಿ..!

ಭಾರತ vs ಅಫ್ಘಾನಿಸ್ತಾನ್ ಏಕದಿನ ಸರಣಿ ವೇಳಾಪಟ್ಟಿ:

  • ಮೊದಲ ಏಕದಿನ ಪಂದ್ಯ: ಜೂನ್ 13 – ಧರ್ಮಶಾಲಾ.
  • ಎರಡನೇ ಏಕದಿನ ಪಂದ್ಯ: ಜೂನ್ 17 – ಲಕ್ನೋ.
  • ಮೂರನೇ ಏಕದಿನ ಪಂದ್ಯ: ಜೂನ್ 20 – ಚೆನ್ನೈ.

ಭಾರತ ಏಕದಿನ ತಂಡ

ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು