AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India's Schedule: ಭಾರತ ತಂಡವು ಮುಂಬರುವ ಐಪಿಎಲ್​ವರೆಗೆ ಯಾವುದೇ ಸರಣಿಯಲ್ಲಿ ಕಣಕ್ಕಿಳಿಯುವುದಿಲ್ಲ. ಬದಲಾಗಿ ಐಪಿಎಲ್​ಗೂ ಮುನ್ನ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಆಡಲಿದೆ. ಈ ಟೂರ್ನಿಯಲ್ಲಿ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸಿದರೆ ಒಟ್ಟು 5 ಪಂದ್ಯಗಳನ್ನಾಡಲಿದೆ. ಇದಕ್ಕೂ ಮುನ್ನ ಲೀಗ್​ ಹಂತದಲ್ಲಿ ಮೂರು ಪಂದ್ಯಗಳಲ್ಲಿ ಕಾಣಿಸಿಕೊಳ್ಳಲಿದೆ.

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
Team India
ಝಾಹಿರ್ ಯೂಸುಫ್
|

Updated on:Feb 16, 2025 | 10:32 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ದುಬೈನತ್ತ ಪ್ರಯಾಣ ಬೆಳೆಸಿದೆ. ಅದು ಕೂಡ ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿ ಆಡಲು. ಅಂದರೆ ಭಾರತ ತಂಡವು ಐಪಿಎಲ್​ ಮುಕ್ತಾಯದವರೆಗೆ ಯಾವುದೇ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾತ್ರ ಕಣಕ್ಕಿಳಿಯಲಿದೆ.

ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಬುಧವಾರದಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಇನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಅದರಂತೆ ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಈ ಕೆಳಗಿನಂತಿದೆ…

  • ಭಾರತ vs ಬಾಂಗ್ಲಾದೇಶ್: ಫೆಬ್ರವರಿ 20 (ದುಬೈ)
  • ಭಾರತ vs ಪಾಕಿಸ್ತಾನ್: ಫೆಬ್ರವರಿ 23 (ದುಬೈ)
  • ಭಾರತ vs ನ್ಯೂಝಿಲೆಂಡ್: ಮಾರ್ಚ್ 2 (ದುಬೈ)
  • ಸೆಮಿಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 4 (ದುಬೈ)
  • ಫೈನಲ್ (ಅರ್ಹತೆ ಪಡೆದರೆ): ಮಾರ್ಚ್ 9 (ದುಬೈ)

ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ಅಲ್ಲದೆ ಈ ಮ್ಯಾಚ್​ಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ ಹಾಗೂ ಜಿಯೋ ಹಾಟ್​ಸ್ಟಾರ್​ನಲ್ಲಿ ಲೈವ್ ವೀಕ್ಷಿಸಬಹುದು.

ಇದನ್ನೂ ಓದಿ: WPL 2025: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಇತಿಹಾಸ ನಿರ್ಮಿಸಿದ RCB

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

ಜಸ್​ಪ್ರೀತ್ ಬುಮ್ರಾ ಅಲಭ್ಯ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಹೊರಗುಳಿದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಸಂಪೂರ್ಣ ಟೂರ್ನಿಯಿಂದ ಹೊರಗುಳಿದಿದ್ದು, ಅವರ ಬದಲಿಗೆ ಯುವ ವೇಗಿ ಹರ್ಷಿತ್ ರಾಣಾ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

Published On - 10:32 am, Sun, 16 February 25

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ