
ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ದುಬೈನತ್ತ ಪ್ರಯಾಣ ಬೆಳೆಸಿದೆ. ಅದು ಕೂಡ ಪ್ರತಿಷ್ಠಿತ ಚಾಂಪಿಯನ್ಸ್ ಟ್ರೋಫಿ ಆಡಲು. ಅಂದರೆ ಭಾರತ ತಂಡವು ಐಪಿಎಲ್ ಮುಕ್ತಾಯದವರೆಗೆ ಯಾವುದೇ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ. ಬದಲಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಾತ್ರ ಕಣಕ್ಕಿಳಿಯಲಿದೆ.
ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19 ರಿಂದ ಶುರುವಾಗಲಿದೆ. ಬುಧವಾರದಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.
ಇನ್ನು ಈ ಬಾರಿಯ ಚಾಂಪಿಯನ್ಸ್ ಟ್ರೋಫಿ ಹೈಬ್ರಿಡ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಅದರಂತೆ ಫೆಬ್ರವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಈ ಕೆಳಗಿನಂತಿದೆ…
ಈ ಎಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ಮಧ್ಯಾಹ್ನ 2.30 ರಿಂದ ಶುರುವಾಗಲಿದೆ. ಅಲ್ಲದೆ ಈ ಮ್ಯಾಚ್ಗಳನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಹಾಗೂ ಜಿಯೋ ಹಾಟ್ಸ್ಟಾರ್ನಲ್ಲಿ ಲೈವ್ ವೀಕ್ಷಿಸಬಹುದು.
ಇದನ್ನೂ ಓದಿ: WPL 2025: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಇತಿಹಾಸ ನಿರ್ಮಿಸಿದ RCB
Published On - 10:32 am, Sun, 16 February 25