T20 World Cup 2024: ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ನೂತನ ಜೆರ್ಸಿ ಬಿಡುಗಡೆ; ಫ್ಯಾನ್ಸ್ ಬೇಸರ

India's T20 World Cup Jersey: ಮುಂದಿನ ತಿಂಗಳು ಅಂದರೆ ಇದೆ ಜೂನ್ 1 ರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಇಂದು ಬಿಡುಗಡೆ ಮಾಡಲಾಗಿದೆ.

T20 World Cup 2024: ಟಿ20 ವಿಶ್ವಕಪ್‌ಗೆ ಟೀಂ ಇಂಡಿಯಾದ ನೂತನ ಜೆರ್ಸಿ ಬಿಡುಗಡೆ; ಫ್ಯಾನ್ಸ್ ಬೇಸರ
ಟೀಂ ಇಂಡಿಯಾ
Follow us
| Updated By: Digi Tech Desk

Updated on:May 16, 2024 | 12:34 PM

ಮುಂದಿನ ತಿಂಗಳು ಅಂದರೆ ಇದೆ ಜೂನ್ 1 ರಿಂದ ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ (T20 World Cup 2024) ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಟೀಂ ಇಂಡಿಯಾದ (Team India) ಕಿಟ್ ಪ್ರಾಯೋಜಕತ್ವದ ಹಕ್ಕನ್ನು ಖರೀದಿಸಿರುವ ಅಡಿಡಾಸ್‌, ಮುಂಬರುವ ಟಿ20 ವಿಶ್ವಕಪ್​ಗೆ ಹಸಿರು ಹಾಗೂ ಕೇಸರಿ ಮಿಶ್ರಿತ ನೂತನ ಜೆರ್ಸಿಯನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್ ಅವರ ಉಪಸ್ಥಿತಿಯಲ್ಲಿ ಧರ್ಮಶಾಲಾದಲ್ಲಿ ಬಿಡುಗಡೆ ಮಾಡಿದೆ ಎಂದು ವರದಿಗಳಾಗಿವೆ. ಬಿಸಿಸಿಐ (BCCI) ಜೆರ್ಸಿ ಬಿಡುಗಡೆ ಮಾಡಿರುವ ಅದರ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಮುಂಬರುವ ಟಿ20 ವಿಶ್ವಕಪ್​ಗೆ ಇಂದು ಬಿಡುಗಡೆಯಾಗಿರುವ ಟೀಂ ಇಂಡಿಯಾದ ನೂತನ ಜೆರ್ಸಿ ಮೇಲೆ ಹೇಳಿದಂತೆ ನೀಲಿ ಮತ್ತು ಕೇಸರಿ ಬಣ್ಣದಲ್ಲಿದೆ. ಜೆರ್ಸಿಯ ಕಾಲರ್ ಮೇಲೆ ತ್ರಿವರ್ಣ ಧ್ವಜವನ್ನು ಹೊಲುವ ಅಂದರೆ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಪಟ್ಟೆಗಳಿವೆ. ತೋಳುಗಳು ಕೇಸರಿ ಬಣ್ಣದಲ್ಲಿದ್ದರೆ, ಭುಜದ ಮೇಲೆ ಮೂರು ಬಿಳಿಯ ಗೆರೆಗಳಿವೆ. ಉಳಿದ ಭಾಗ ಸಂಪೂರ್ಣ ನೀಲಿ ಬಣ್ಣದ್ದಾಗಿದೆ. ಜರ್ಸಿಯ ಮಧ್ಯದಲ್ಲಿ ಟೀಂ ಇಂಡಿಯಾ ಎಂದು ಬರೆಯಲಾಗಿದೆ. ಈ ಜೆರ್ಸಿಯನ್ನು ಹೆಲಿಕಾಪ್ಟರ್‌ನಿಂದ ಬಿಡುಗಡೆ ಮಾಡಿರುವಂತೆ ತೋರಿಸಲಾಗಿದೆ.

ಏತನ್ಮಧ್ಯೆ, ಜೆರ್ಸಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾದ ಬಳಿಕ ಟೀಂ ಇಂಡಿಯಾ ಅಭಿಮಾನಿಗಳು ಬಿಡುಗಡೆಯಾಗಿರುವ ನೂತನ ಜೆರ್ಸಿಯ ಬಗ್ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವರು ಜರ್ಸಿಯನ್ನು ‘ಸ್ಟೈಲಿಶ್’ ಎಂದಿದ್ದರೆ, ಇನ್ನು ಕೆಲವರಿಗೆ ನೂತನ ಜೆರ್ಸಿ ಇಷ್ಟವಾಗಿಲ್ಲ.

ಇನ್ನು ಟಿ20 ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಆ ನಂತರ ಪಾಕಿಸ್ತಾನದ ವಿರುದ್ಧ ಜೂನ್ 9 ರಂದು ಹೈವೋಲ್ಟೇಜ್ ಕದನ ನಡೆಯಲ್ಲಿದೆ. ಬಳಿಕ ಕ್ರಮವಾಗಿ ಯುಎಸ್ಎ ಮತ್ತು ಕೆನಡಾ ವಿರುದ್ಧ ಜೂನ್ 12 ಮತ್ತು 15 ರಂದು ಗುಂಪು ಹಂತದ ಪಂದ್ಯಗಳನ್ನು ಆಡಲಿದೆ.

ಟಿ20 ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್​ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಮೀಸಲು  ಆಟಗಾರರು: ಶುಭ್​ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 pm, Mon, 6 May 24

ತಾಜಾ ಸುದ್ದಿ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ