ಟೀಮ್ ಇಂಡಿಯಾದ ವಿಜಯಯಾತ್ರೆ ಎಷ್ಟು ಗಂಟೆಗೆ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

T20 World Cup 2024: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 176 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 7 ರನ್​ಗಳ ರೋಚಕ ಜಯ ಸಾಧಿಸಿ ವಿಶ್ವಕಪ್ ಮುಡಿಗೇರಿಸಿಕೊಂಡಿದೆ.

ಟೀಮ್ ಇಂಡಿಯಾದ ವಿಜಯಯಾತ್ರೆ ಎಷ್ಟು ಗಂಟೆಗೆ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
Team India
Follow us
ಝಾಹಿರ್ ಯೂಸುಫ್
|

Updated on:Jul 04, 2024 | 1:52 PM

ಟಿ20 ವಿಶ್ವಕಪ್​ನೊಂದಿಗೆ ಟೀಮ್ ಇಂಡಿಯಾ (Team India) ತಾಯ್ನಾಡಿಗೆ ಮರಳಿದೆ. ಬಾರ್ಬಡೋಸ್​ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದಿರುವ ಭಾರತ ತಂಡವು ಇಂದು ಮುಂಬೈನಲ್ಲೆ ವಿಜಯಯಾತ್ರೆ ನಡೆಸಲಿದೆ. ಓಪನ್ ಬಸ್​ನಲ್ಲಿ ನಡೆಯಲಿರುವ ಈ ರೋಡ್ ಶೋ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ಏರ್ ಇಂಡಿಯಾ ಕಟ್ಟಡದಿಂದ ಪ್ರಾರಂಭವಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ಕೊನೆಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಇನ್ನು ವಾಂಖೆಡೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಆಟಗಾರರು ವಿಜಯೋತ್ಸವ ಆಚರಿಸಲಿದ್ದು, ಈ ವೇಳೆ ಬಿಸಿಸಿಐ ಭಾರತ ತಂಡಕ್ಕೆ 125 ಕೋಟಿ ರೂ.ಗಳ ಬಹುಮಾನ ಮೊತ್ತವನ್ನು ವಿತರಿಸಲಿದೆ ಎಂದು ವರದಿಯಾಗಿದೆ.

ಭಾರತ ತಂಡವು ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 125 ಕೋಟಿ ರೂ. ಬಹುಮಾನ ಮೊತ್ತ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಈ ಮೊತ್ತವನ್ನು ವಿತರಿಸಲಿದ್ದಾರೆ.

ಎಷ್ಟು ಗಂಟೆಗೆ ಶುರು?

ಟೀಮ್ ಇಂಡಿಯಾದ ವಿಜಯಯಾತ್ರೆಯು ಸಂಜೆ 5 ಗಂಟೆಯಿಂದ ಶುರುವಾಗಲಿದ್ದು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮನವಿ ಮಾಡಿದ್ದಾರೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ವಿಜಯಯಾತ್ರೆಯನ್ನು ನೇರ ಪ್ರಸಾರ ಮಾಡುವುದಾಗಿ ಸ್ಟಾರ್ ಸ್ಪೋರ್ಟ್ಸ್ ಘೋಷಿಸಿದೆ. ಹಾಗೆಯೇ ನೆಟ್​ವರ್ಕ್​ 18ನ ಸ್ಪೋರ್ಟ್ಸ್ 18ನಲ್ಲೂ ಈ ವಿಜಯೋತ್ಸವದ ಲೈವ್ ವೀಕ್ಷಿಸಬಹುದು. ಹಾಗೆಯೇ ಜಿಯೋ ಸಿನಿಮಾ ಆ್ಯಪ್​ನಲ್ಲೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

11 ವರ್ಷಗಳ ಬಳಿಕ ಗೆದ್ದು ಬೀಗಿದ ಭಾರತ:

ಭಾರತ ತಂಡವು ಕೊನೆಯ ಬಾರಿಗೆ ಐಸಿಸಿ ಟ್ರೋಫಿ ಗೆದ್ದಿದ್ದು 2013 ರಲ್ಲಿ. ಇದಾದ ಬಳಿಕ ಹಲವು ಟೂರ್ನಿಗಳಲ್ಲಿ ಫೈನಲ್ ಆಡಿದರೂ, ಟೀಮ್ ಇಂಡಿಯಾ ಪಾಲಿಗೆ ಪ್ರಶಸ್ತಿ ಮರೀಚಿಕೆಯಾಗಿತ್ತು. ಅದರಲ್ಲೂ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೆ ತಲುಪಿದ್ದ ಭಾರತ ತಂಡವು ಅಂತಿಮ ಹಣಾಹಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು.

ಆದರೆ ಈ ಬಾರಿ ಪ್ರಶಸ್ತಿ ಗೆಲ್ಲಬೇಕೆಂದು ಪಣತೊಟ್ಟಿದ್ದ ಟೀಮ್ ಇಂಡಿಯಾ ಆರಂಭದಿಂದಲೇ ಭರ್ಜರಿ ಪ್ರದರ್ಶನ ನಿಡಿದ್ದರು. ಅಲ್ಲದೆ ಸೋಲಿಲ್ಲದ ಸರದಾರನಾಗಿ ಫೈನಲ್​ಗೆ ಪ್ರವೇಶಿಸಿತ್ತು. ಅಂತಿಮ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು 7 ರನ್​ಗಳಿಂದ ಮಣಿಸಿದ ಟೀಮ್ ಇಂಡಿಯಾ 11 ವರ್ಷಗಳ ಬಳಿಕ ಐಸಿಸಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

ಇದನ್ನೂ ಓದಿ: Team India: ಟೀಮ್ ಇಂಡಿಯಾದ ಚಾಂಪಿಯನ್ಸ್​ ಜೆರ್ಸಿ ಅನಾವರಣ

ಅಲ್ಲದೆ ಇದು ಟೀಮ್ ಇಂಡಿಯಾದ 2ನೇ ಟಿ20 ವಿಶ್ವಕಪ್ ಎಂಬುದು ವಿಶೇಷ. ಅಂದರೆ 2007 ರಲ್ಲಿ ಮೊದಲ ಬಾರಿಗೆ ಟಿ20 ವಿಶ್ವಕಪ್ ಗೆದ್ದಿದ್ದ ಟೀಮ್ ಇಂಡಿಯಾ ಇದೀಗ 17 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದೆ.

Published On - 1:03 pm, Thu, 4 July 24

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ