IND vs NZ: ಟೀಮ್ ಇಂಡಿಯಾ ಸೋಲಿಗೆ ಕಾರಣವಾದ ಆ ಒಂದು ನಿರ್ಧಾರ..!
IND vs NZ: ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಝಿಲೆಂಡ್ ತಂಡ ಗೆಲುವಿನೊಂದಿಗೆ ಆರಂಭಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ 402 ರನ್ ಕಲೆಹಾಕಿತು.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಈ ಸೋಲಿಗೆ ಪ್ರಮುಖ ಕಾರಣವಾಗಿದ್ದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ತೆಗೆದುಕೊಂಡ ಆ ಒಂದು ನಿರ್ಧಾರ. ಹೌದು, ಭಾರತ ತಂಡದ ಸೋಲಿಗೆ ಪ್ರಮುಖ ಕಾರಣವಾಗಿದ್ದೇ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದು.
ಮೊದಲ ದಿನದಾಟ ಸಂಪೂರ್ಣ ಮಳೆಗೆ ಅಹುತಿಯಾದರೂ, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದರು. ಬ್ಯಾಟಿಂಗ್ಗೆ ಪಿಚ್ ಸಹಕಾರಿಯಾಗಲಿದೆ ಎಂಬ ಅತಿಯಾದ ಆತ್ಮ ವಿಶ್ವಾಸವೇ ಭಾರತದ ಪಾಲಿಗೆ ಮುಳುವಾಯಿತು.
ಪರಿಣಾಮ ಮೊದಲ ಇನಿಂಗ್ಸ್ನಲ್ಲಿ ಭಾರತೀಯ ಬ್ಯಾಟರ್ಗಳು ರನ್ಗಳಿಸುವುದಿರಲಿ, ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದರು. ಅಲ್ಲದೆ ಕೇವಲ 46 ರನ್ಗಳಿಗೆ ಆಲೌಟ್ ಆಯಿತು. ಅದರಲ್ಲೂ ಮಳೆ ಬರುವ ಮುನ್ಸೂಚನೆ ಇದ್ದರೂ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.
ಏಕೆಂದರೆ ಬಾಂಗ್ಲಾದೇಶ್ ವಿರುದ್ಧದ ಮಳೆಬಾಧಿತ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಲಿಗೆ ವರವಾಗಿದ್ದು ನಾಲ್ಕನೇ ಇನಿಂಗ್ಸ್. ಎರಡು ದಿನದಾಟಗಳು ಮಳೆಗೆ ಅಹುತಿಯಾದರೂ ಆ ಪಂದ್ಯವನ್ನು ಟೀಮ್ ಇಂಡಿಯಾ 7 ವಿಕೆಟ್ಗಳಿಂದ ಗೆದ್ದುಕೊಂಡಿತ್ತು.
ಮಳೆಬಾಧಿತ ಪಂದ್ಯದಲ್ಲಿ ಗೆದ್ದು ಬೀಗಿದ ಇಂತಹದೊಂದು ತಾಜಾ ಉದಾಹರಣೆ ಟೀಮ್ ಇಂಡಿಯಾ ಮುಂದಿದ್ದರೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆರಿಸಿಕೊಂಡಿದ್ದೇ ಅಚ್ಚರಿ. ಈ ಅಚ್ಚರಿಯ ನಿರ್ಧಾರವೇ ಭಾರತ ತಂಡದ ಸೋಲಿಗೂ ಕಾರಣವಾಯಿತು ಎಂದರೆ ತಪ್ಪಾಗಲಾರದು.
ಗೆದ್ದು ಬೀಗಿದ ಕಿವೀಸ್ ಪಡೆ:
ಭಾರತದ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಝಿಲೆಂಡ್ ತಂಡ ಗೆಲುವಿನೊಂದಿಗೆ ಆರಂಭಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ ಕೇವಲ 46 ರನ್ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ನ್ಯೂಝಿಲೆಂಡ್ 402 ರನ್ ಕಲೆಹಾಕಿತು.
ಇದನ್ನೂ ಓದಿ: RCB ಉಳಿಸಿಕೊಂಡ ಆರು ಆಟಗಾರರು ಯಾರೆಲ್ಲಾ ಗೊತ್ತಾ?
ಇನ್ನು 356 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ 462 ರನ್ಗಳಿಸಿ ಆಲೌಟ್ ಆಯಿತು. ಅತ್ತ ಮೊದಲ ಇನಿಂಗ್ಸ್ ಮುನ್ನಡೆಯೊಂದಿಗೆ 107 ರನ್ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡವು ಐದನೇ ದಿನದಾಟದಲ್ಲಿ 2 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿದೆ. ಈ ಮೂಲಕ 8 ವಿಕೆಟ್ಗಳ ಭರ್ಜರಿ ಜಯದೊಂದಿಗೆ ಟೆಸ್ಟ್ ಸರಣಿಯಲ್ಲಿ ಶುಭಾರಂಭ ಮಾಡಿದೆ.