
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ (Australia vs Bangladesh) ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ ಕೇವಲ 64 ರನ್‌ಗಳಿಗೆ ಆಲೌಟ್ ಆಗಿದೆ. ಮೊದಲ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿದ್ದ ಬಾಂಗ್ಲಾದೇಶಕ್ಕೆ ಎರಡನೇ ಟೆಸ್ಟ್‌ನಲ್ಲಿ 100 ರನ್‌ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ಕೊನೆಯ ವಿಕೆಟ್ಗೆ 25 ರನ್‌ಗಳ ಜೊತೆಯಾಟ ಮೂಡಿಬರಲಿಲ್ಲ ಎಂದಿದ್ದರೆ ಬಾಂಗ್ಲಾದೇಶ 40 ರನ್‌ಗಳ ಗಡಿ ದಾಟಲು ಸಾಧ್ಯವಾಗುತ್ತಿರಲಿಲ್ಲ. ಈ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್ನ ಇನ್ನಿಂಗ್ಸ್ ಒಂದರಲ್ಲಿ ಅತ್ಯಲ್ಪ ಮೊತ್ತ ದಾಖಲಿಸಿದ ತಂಡಗಳ ಪಟ್ಟಿಗೆ ಸೇರ್ಪಡೆಗೊಂಡಿತು. ಆದಾಗ್ಯೂ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಮೊತ್ತ ಕಲೆಹಾಕಿದ ತಂಡ ಬಾಂಗ್ಲಾದೇಶವಲ್ಲ. ಬಾಂಗ್ಲಾಕ್ಕೂ ಮೊದಲು ಹಲವು ತಂಡಗಳು 50 ರನ್‌ಗಳ ಗಡಿ ದಾಟುವುದಕ್ಕೂ ವಿಫಲವಾಗಿವೆ. ಇದರಲ್ಲಿ ಟೀಂ ಇಂಡಿಯಾವೂ ಸೇರಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಅತಿ ಕಡಿಮೆ ಸ್ಕೋರ್ ಗಳಿಸಿದ ಬೇಡದ ದಾಖಲೆ ನ್ಯೂಜಿಲೆಂಡ್ ಹೆಸರಿನಲ್ಲಿದೆ. ಮಾರ್ಚ್ 25, 1955 ರಂದು, ಆಕ್ಲೆಂಡ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ಕೇವಲ 26 ರನ್‌ಗಳಿಗೆ ಆಲೌಟ್ ಆಗಿತ್ತು. ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ದಾಖಲಾದ ಅತ್ಯಂತ ಕಡಿಮೆ ತಂಡದ ಸ್ಕೋರ್ ಆಗಿದೆ.
ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡ ಎರಡನೇ ಸ್ಥಾನದಲ್ಲಿದ್ದು, ಜುಲೈ 2025 ರಲ್ಲಿ ಕಿಂಗ್ಸ್ಟನ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ಕೇವಲ 27 ರನ್‌ಗಳಿಗೆ ಆಲೌಟ್ ಆಗಿತ್ತು. ಆಸ್ಟ್ರೇಲಿಯಾದ ವೇಗಿಗಳ ದಾಳಿಗೆ ತತ್ತರಿಸಿದ ವಿಂಡೀಸ್ ತಂಡದ ಯಾವುದೇ ಬ್ಯಾಟ್ಸ್ಮನ್ ಎರಡಂಕಿ ದಾಟಲು ಸಾಧ್ಯವಾಗಿರಲಿಲ್ಲ.
ದಕ್ಷಿಣ ಆಫ್ರಿಕಾ ತಂಡ ಕೂಡ ಈ ಪಟ್ಟಿಯಲ್ಲಿ ಹಲವಾರು ಬಾರಿ ಕಾಣಿಸಿಕೊಂಡಿದ್ದು, 1896 ರಲ್ಲಿ ಗೆಬೆಹಾದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 30 ರನ್ ಮತ್ತು 1924 ರಲ್ಲಿ ಬರ್ಮಿಂಗ್ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ 30 ರನ್‌ಗಳಿಗೆ ಆಲೌಟ್ ಆಗಿತ್ತು. ಇದಲ್ಲದೆ 1899 ರಲ್ಲಿ ಇಂಗ್ಲೆಂಡ್ ವಿರುದ್ಧ ಕೇಪ್ಟೌನ್ನಲ್ಲಿ 35 ರನ್ ಮತ್ತು 1932 ರಲ್ಲಿ ಮೆಲ್ಬೋರ್ನ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 36 ರನ್‌ಗಳಿಗೆ ಆಲೌಟ್ ಆಗಿತ್ತು.
ಇನ್ನು ಟೀಂ ಇಂಡಿಯಾದ ಬಗ್ಗೆ ಹೇಳುವುದಾದರೆ.. 2020 ರಲ್ಲಿ ಅಡಿಲೇಡ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಹಗಲು-ರಾತ್ರಿ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಕೇವಲ 36 ರನ್‌ಗಳಿಗೆ ಆಲೌಟ್ ಆಗಿತ್ತು. ಇದು ಭಾರತೀಯ ಟೆಸ್ಟ್ ಇತಿಹಾಸದಲ್ಲಿ ಅತ್ಯಂತ ಕಡಿಮೆ ಸ್ಕೋರ್ ಆಗಿದೆ. ಇದಕ್ಕೂ ಮೊದಲು, 1974 ರಲ್ಲಿ ಲಾರ್ಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ 42 ರನ್‌ಗಳಿಗೆ ಆಲೌಟ್ ಆಗಿತ್ತು.
IND vs SL: 2ನೇ ಟೆಸ್ಟ್ಗೂ ಮುನ್ನ ಶ್ರೀಲಂಕಾ ತಂಡದಲ್ಲಿ 2 ಬದಲಾವಣೆ
Published On - 3:17 pm, Sat, 22 August 26