AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಗೆಳೆಯ, ಇದು ಅತ್ಯದ್ಭುತ ಇನಿಂಗ್ಸ್​…ಕೊಹ್ಲಿ ಬಗ್ಗೆ ಎಬಿಡಿ ಹೇಳಿದ್ದೇನು ಗೊತ್ತಾ?

India vs Pakistan: ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು.

Virat Kohli: ಗೆಳೆಯ, ಇದು ಅತ್ಯದ್ಭುತ ಇನಿಂಗ್ಸ್​...ಕೊಹ್ಲಿ ಬಗ್ಗೆ ಎಬಿಡಿ ಹೇಳಿದ್ದೇನು ಗೊತ್ತಾ?
AB De Villiers - Virat Kohli
TV9 Web
| Edited By: |

Updated on: Oct 24, 2022 | 5:31 PM

Share

T20 World Cup 2022: ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲೇ ಬಲಿಷ್ಠ ಪಾಕಿಸ್ತಾನ್ (India vs Pakistan) ತಂಡವನ್ನು ಬಗ್ಗು ಬಡಿದು ಟೀಮ್ ಇಂಡಿಯಾ (Team India) ಶುಭಾರಂಭ ಮಾಡಿದೆ. ಇಂತಹದೊಂದು ಭರ್ಜರಿ ಗೆಲುವಿನ ಕಾರಣಕರ್ತ ಕಿಂಗ್ ಕೊಹ್ಲಿ. ಏಕೆಂದರೆ ಪಾಕಿಸ್ತಾನ್ ನೀಡಿದ 160 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 31 ರನ್​ಗಳಿಗೆ ಕೆಎಲ್ ರಾಹುಲ್, ರೋಹಿತ್ ಶರ್ಮಾ, ಅಕ್ಷರ್ ಪಟೇಲ್ ಹಾಗೂ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಹಾರ್ದಿಕ್ ಪಾಂಡ್ಯ 113 ರನ್​ಗಳ ಜೊತೆಯಾಟವಾಡಿದರು. ಈ ಉತ್ತಮ ಜೊತೆಯಾಟದ ಪರಿಣಾಮ ಟೀಂ್ ಇಂಡಿಯಾಗೆ ಅಂತಿಮ 3 ಓವರ್​ಗಳ ವೇಳೆ 48 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ಅಕ್ಷರಶಃ ವಿರಾಟ್ ಕೊಹ್ಲಿ ಅಬ್ಬರಿಸಲಾರಂಭಿಸಿದರು.

ಶಾಹೀನ್ ಅಫ್ರಿದಿ ಎಸೆದ 18ನೇ ಓವರ್​ನಲ್ಲಿ ಕೊಹ್ಲಿ ಮೂರು ಭರ್ಜರಿ ಬೌಂಡರಿ ಬಾರಿಸಿದರು. ಅಲ್ಲದೆ ಆ ಓವರ್​ನಲ್ಲಿ 17 ರನ್ ಕಲೆಹಾಕಿದರು. ಅಂತಿಮ 12 ಎಸೆತಗಳಲ್ಲಿ 31 ರನ್ ಗಳಿಸಬೇಕಿತ್ತು. ಪಾಕ್ ವೇಗಿ ಹ್ಯಾರಿಸ್ ರೌಫ್ ಎಸೆದ 19ನೇ ಓವರ್​ನಲ್ಲಿ ಭರ್ಜರಿ 2 ಸಿಕ್ಸ್ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಪಂದ್ಯ ಗೆಲ್ಲಿಸಿಕೊಡುವ ಭರವಸೆ ಮೂಡಿಸಿದರು. ಹಾಗೆಯೇ ಕೊನೆಯ ಓವರ್​ನಲ್ಲಿ 16 ರನ್​ಗಳ ಗುರಿಯೊಂದಿಗೆ ಬ್ಯಾಟ್ ಬೀಸಿದ ಕೊಹ್ಲಿ ಬೌಲರ್​ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಅದರಲ್ಲೂ ಮೊಹಮ್ಮದ್ ನವಾಜ್ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿ ಗೆಲುವನ್ನು ಖಚಿತಪಡಿಸಿದರು. ಅಂತಿಮವಾಗಿ ಕೊನೆಯ ಎಸೆತದಲ್ಲಿ ಅಶ್ವಿನ್ 1 ರನ್ ಕಲೆಹಾಕುವ ಮೂಲಕ ಟೀಮ್ ಇಂಡಿಯಾ 4 ವಿಕೆಟ್​ಗಳ ಜಯ ಸಾಧಿಸಿತು.

ಇತ್ತ 53 ಎಸೆತಗಳಲ್ಲಿ ಅಜೇಯ 82 ರನ್ ಬಾರಿಸುವ ಮೂಲಕ ಅಜೇಯರಾಗಿ ಉಳಿದ ವಿರಾಟ್ ಕೊಹ್ಲಿಯ ಇನಿಂಗ್ಸ್​ಗೆ ಇದೀಗ ಬಹುಪರಾಕ್ ಕೇಳಿ ಬರುತ್ತಿದೆ. ಅದರಲ್ಲೂ ದೇಶ-ವಿದೇಶದ ಸ್ಟಾರ್ ಕ್ರಿಕೆಟಿಗರು ಕೂಡ ಕೊಹ್ಲಿ ಬ್ಯಾಟಿಂಗ್​ಗೆ ಮೆಚ್ಚುಗೆಗಳ ಸುರಿಮಳೆ ಸುರಿಸಿದ್ದಾರೆ. ಮುಖ್ಯವಾಗಿ ಎಬಿ ಡಿವಿಲಿಯರ್ಸ್ ವಿಶೇಷವಾಗಿ ಟ್ವೀಟ್ ಮಾಡಿ ಗೆಳೆಯನನ್ನು ಹಾಡಿಹೊಗಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಬಿ ಡಿವಿಲಿಯರ್ಸ್, ಗೆಳೆಯಾ, ಈ ಇನಿಂಗ್ಸ್​ ಅತ್ಯದ್ಭುತವಾಗಿತ್ತು. ಇದು ಶ್ರೇಷ್ಠ ಇನಿಂಗ್ಸ್​ಗಳಲ್ಲೇ ಅತೀ ಶ್ರೇಷ್ಠ ಇನಿಂಗ್ಸ್​ ಎಂದು ಕಿಂಗ್ ಕೊಹ್ಲಿಯ ಬ್ಯಾಟಿಂಗ್​ಗೆ ಮಿಸ್ಟರ್ 360 ಡಿಗ್ರಿ ಬಹುಪರಾಕ್ ಅಂದಿದ್ದಾರೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ

ಇದೀಗ ಎಬಿಡಿಯ ಈ ಟ್ವೀಟ್ ವೈರಲ್ ಆಗಿದ್ದು, ಅಭಿಮಾನಿಗಳು ಇಬ್ಬರ ಗೆಳೆತನವನ್ನೂ ಕೂಡ ಹಾಡಿಹೊಗಳುತ್ತಿದ್ದಾರೆ. ಜೊತೆಯಾಗಿ ಆರ್​ಸಿಬಿ ಪರ ಆಡಿದ್ದ ಕಿಂಗ್ ಕೊಹ್ಲಿ-ಎಬಿಡಿ ಹಲವು ಅದ್ಭುತ ಇನಿಂಗ್ಸ್​ಗಳನ್ನು ಆಡಿದ್ದರು. ಇದೀಗ ವಿರಾಟ್ ಕೊಹ್ಲಿ ಏಕಾಂಗಿಯಾಗಿ ಆಡಿರುವ ಇನಿಂಗ್ಸ್​ಗೆ ಎಬಿಡಿ ಮೆಚ್ಚುಗೆಗಳನ್ನು ಸೂಚಿಸಿರುವುದು ವಿಶೇಷ.

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್