Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ನನ್ನ ಸ್ಟೈಲ್… ಕ್ಷಮೆಯಾಚಿಸಿದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್

India vs Pakistan: ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ 241 ರನ್​ ಕಲೆಹಾಕಿದರೆ, ಭಾರತ ತಂಡವು ಈ ಗುರಿಯನ್ನು ಕೇವಲ 42.3 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಗೆಲುವು ದಾಖಲಿಸಿತ್ತು. ಈ ಪಂದ್ಯದಲ್ಲಿ ಗಿಲ್ ಅವರನ್ನು ಔಟ್ ಮಾಡಿ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್ ವಿಚಿತ್ರವಾಗಿ ಸಂಭ್ರಮಿಸಿದ್ದರು.

ಅದು ನನ್ನ ಸ್ಟೈಲ್... ಕ್ಷಮೆಯಾಚಿಸಿದ ಪಾಕ್ ಸ್ಪಿನ್ನರ್ ಅಬ್ರಾರ್ ಅಹ್ಮದ್
Abrar Ahmed
Follow us
ಝಾಹಿರ್ ಯೂಸುಫ್
|

Updated on:Mar 08, 2025 | 1:05 PM

ಭಾರತ ಮತ್ತು ಪಾಕಿಸ್ತಾನ್ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಸಖತ್ ಸುದ್ದಿಯಾಗಿದ್ದು ಇಬ್ಬರೇ… ಒಬ್ಬರು ವಿರಾಟ್ ಕೊಹ್ಲಿ. ಮತ್ತೊಬ್ಬರು ಅಬ್ರಾರ್ ಅಹ್ಮದ್. ಕಿಂಗ್ ಕೊಹ್ಲಿ ಸೆಂಚುರಿ ಸಿಡಿಸಿ ಸುದ್ದಿಯಾದರೆ, ಅಬ್ರಾರ್ ಅಹ್ಮದ್ ವಿಚಿತ್ರ ಶೈಲಿಯ ಸಂಭ್ರಮದೊಂದಿಗೆ ಎಲ್ಲರ ಗಮನ ಸೆಳೆದಿದ್ದರು. ಆದರೆ ಈ ಸಂಭ್ರಮವೇ ಅವರ ಪಾಲಿಗೆ ಮುಳುವಾಗಿ ಮಾರ್ಪಟ್ಟಿತ್ತು.

ಶುಭ್​ಮನ್ ಗಿಲ್ ಅವರನ್ನು ಕ್ಲೀನ್ ಬೌಲ್ಡ್ ಮಾಡಿದ ಬಳಿಕ ಅಬ್ರಾರ್ ಅಹ್ಮದ್, ಹೋಯ್ತಾ ಇರು ಎಂಬಾರ್ಥದಲ್ಲಿ ಕಣ್ಸನ್ನೆ ಮಾಡಿ ಸಂಭ್ರಮಿಸಿದ್ದರು. ಆದರೆ ಈ ಸಂಭ್ರಮಕ್ಕೆ ಪಾಕಿಸ್ತಾನದ ಮಾಜಿ ಆಟಗಾರರು ಸೇರಿದಂತೆ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು.

ಅದರಲ್ಲೂ ಸೋಷಿಯಲ್ ಮೀಡಿಯಾದಲ್ಲಿ ವಿಪರೀತ ಟ್ರೋಲ್​ಗೆ ಒಳಗಾಗಿದ್ದ ಅಬ್ರಾರ್ ಅಹ್ಮದ್ ಇದೀಗ ತಮ್ಮ ನಡೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನನ್ನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಖಾಸಗಿ ಚಾನೆಲ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಬ್ರಾರ್ ಅಹ್ಮದ್, ಶುಭ್​ಮನ್ ಗಿಲ್ ಅವರನ್ನು ಔಟ್ ಮಾಡಿ ನಾನು ಸಂಭ್ರಮಿಸಿದ್ದು ನನ್ನ ಶೈಲಿಯಾಗಿತ್ತು. ಅಂದರೆ ನಾನು ವಿಕೆಟ್ ಸಿಕ್ಕಾಗ ಸಂಭ್ರಮಿಸುವುದೇ ಹಾಗೆ. ಆದರೆ ಇದರಿಂದ ಯಾರಿಗಾದರೂ ನೋವುಂಟಾಗಿದ್ದರೆ, ಅದಕ್ಕಾಗಿ ನಾನು ವಿಷಾದಿಸುತ್ತೇನೆ. ಯಾರನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ಹೀಗಾಗಿ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ಪಾಕಿಸ್ತಾನ್ ಸ್ಪಿನ್ನರ್ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಅಬ್ರಾರ್ ಅಹ್ಮದ್ 10 ಓವರ್​ಗಳಲ್ಲಿ ಕೇವಲ 28 ರನ್ ನೀಡಿ 1 ವಿಕೆಟ್ ಕಬಳಿಸಿ ಮಿಂಚಿದ್ದರು. ಅಬ್ರಾರ್ ಅವರ ಹತ್ತು ಓವರ್ ಪೂರ್ಣಗೊಳ್ಳುತ್ತಿದ್ದಂತೆ ಪಾಕ್ ಸ್ಪಿನ್ನರ್​ನ ಬಳಿ ತೆರಳಿದ ವಿರಾಟ್ ಕೊಹ್ಲಿ ಶ್ಲಾಘನೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: IPL 2026: ಐಪಿಎಲ್​ಗೆ ಪಾಕಿಸ್ತಾನ್ ವೇಗಿ ಮೊಹಮ್ಮದ್ ಅಮೀರ್

ಈ ಬಗ್ಗೆ ಮಾತನಾಡಿದ ಅಬ್ರಾರ್, ನಾನು ಅಂಡರ್-19 ಆಡುವಾಗಿಂದಲೇ ವಿರಾಟ್ ಕೊಹ್ಲಿಗೆ ಬೌಲಿಂಗ್ ಮಾಡಬೇಕೆಂಬ ಕನಸು ಕಟ್ಟಿಕೊಂಡಿದೆ. ಅದು ಈಗ ನೆರವೇರಿದೆ. ಅದರಲ್ಲೂ ಅವರೇ ಉತ್ತಮವಾಗಿ ಬೌಲಿಂಗ್ ಮಾಡಿದ್ದೀಯಾ ಎಂದಿರುವುದು ನನ್ನ ಸಂತಸವನ್ನು ದುಪ್ಪಟ್ಟುಗೊಳಿಸಿತು ಎಂದು ತಿಳಿಸಿದ್ದಾರೆ.

Published On - 1:03 pm, Sat, 8 March 25

ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
ತೆಲಂಗಾಣದಲ್ಲಿ ನಿರ್ಮಾಣ ಹಂತದ ಆರು ಅಂತಸ್ತಿನ ಕಟ್ಟಡ ಕುಸಿತ
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Devotional: ಪೂಜೆ ಮಾಡುವಾಗ ದೇವರ ಮನೆಯಲ್ಲಿ ಹೂ ಬಿದ್ರೆ ಏನರ್ಥ?
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್