Ashes 2023: ಲಂಡನ್ನ ಕೆನ್ನಿಂಗ್ಟನ್ ಓವಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆ್ಯಶಸ್ ಸರಣಿಯ 5 ಟೆಸ್ಟ್ ಪಂದ್ಯವು ಕುತೂಹಲಘಟ್ಟದತ್ತ ಸಾಗುತ್ತಿದೆ. ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 395 ರನ್ ಪೇರಿಸಿ ಇಂಗ್ಲೆಂಡ್ ತಂಡ ಆಲೌಟ್ ಆಗಿದೆ. ಅದರಂತೆ ಇದೀಗ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 384 ರನ್ಗಳಿಸಿದರೆ ಜಯ ಸಾಧಿಸಬಹುದು. ಇದಕ್ಕೂ ಮುನ್ನ ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವು 283 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ನಲ್ಲಿ ಆಸ್ಟ್ರೇಲಿಯಾ 295 ರನ್ಗಳಿಸಿ ಆಲೌಟ್ ಆಗಿತ್ತು.
12 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಜೋ ರೂಟ್ (91), ಝಾಕ್ ಕ್ರಾಲಿ (71) ಹಾಗೂ ಜಾನಿ ಬೈರ್ಸ್ಟೋವ್ (78) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಮೂಲಕ ದ್ವಿತೀಯ ಇನಿಂಗ್ಸ್ನಲ್ಲಿ ಇಂಗ್ಲೆಂಡ್ ತಂಡವು 395 ರನ್ಗಳಿಸಿ ಆಲೌಟ್ ಆಗಿದೆ.
ಮೊದಲ ಇನಿಂಗ್ಸ್ನಲ್ಲಿ 12 ರನ್ಗಳ ಮುನ್ನಡೆ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್ನಲ್ಲಿ 384 ರನ್ಗಳಿಸಿದರೆ ಜಯ ಸಾಧಿಸಬಹುದು. ಇತ್ತ ಪಂದ್ಯವು ನಾಲ್ಕನೇ ದಿನದಾಟದ ಆರಂಭದ ಹಂತದಲ್ಲಿದೆ. ಹೀಗಾಗಿ 2 ದಿನದಾಟದಲ್ಲಿ ಆಸ್ಟ್ರೇಲಿಯಾಗೆ 384 ಸುಲಭ ಗುರಿ ಎನ್ನಬಹುದು.
ಒಂದು ವೇಳೆ ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಡ್ರಾ ಸಾಧಿಸಿದರೂ ಆ್ಯಶಸ್ ಸರಣಿಯನ್ನು ವಶಪಡಿಸಿಕೊಳ್ಳಬಹುದು. ಏಕೆಂದರೆ 5 ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಗೆಲ್ಲುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿತ್ತು. ಆದರೆ ನಾಲ್ಕನೇ ಪಂದ್ಯ ಡ್ರಾ ಆಗುವುದರೊಂದಿಗೆ ಸರಣಿ ಗೆಲ್ಲುವ ಇಂಗ್ಲೆಂಡ್ ಆಸೆಗೆ ತಣ್ಣೀರೆಚಿತು.
ಇದೀಗ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಹೊಂದಿರುವ ಆಸ್ಟ್ರೇಲಿಯಾ ತಂಡವು ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಅಥವಾ ಡ್ರಾ ಮಾಡಿಕೊಂಡರೆ ಪ್ರತಿಷ್ಠಿತ ಆ್ಯಶಸ್ ಟ್ರೋಫಿಯನ್ನು ಎತ್ತಿ ಹಿಡಿಯಬಹುದು. ಹೀಗಾಗಿ ಆಸ್ಟ್ರೇಲಿಯಾ ಈ ಪಂದ್ಯವನ್ನು ಗೆಲ್ಲಲಿದೆಯಾ ಅಥವಾ ಡ್ರಾ ಮಾಡಿಕೊಳ್ಳಲಿದೆಯಾ ಎಂಬುದೇ ಪ್ರಶ್ನೆ.
ಈ ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸಲು ಈ ಪಂದ್ಯದಲ್ಲಿ ಇಂಗ್ಲೆಂಡ್ಗೆ ಗೆಲುವು ಅನಿವಾರ್ಯ. ಹೀಗಾಗಿ ಆಸ್ಟ್ರೇಲಿಯಾವನ್ನು ಆಲೌಟ್ ಮಾಡಿ ಗೆಲುವು ದಕ್ಕಿಸಿಕೊಳ್ಳಬೇಕಾದ ಅನಿವಾರ್ಯತೆ ಇಂಗ್ಲೆಂಡ್ ಮುಂದಿದೆ. ಹಾಗಾಗಿ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಉಭಯ ತಂಡಗಳಿಂದ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ , ಬೆನ್ ಡಕೆಟ್ , ಮೊಯಿನ್ ಅಲಿ , ಜೋ ರೂಟ್ , ಹ್ಯಾರಿ ಬ್ರೂಕ್ , ಬೆನ್ ಸ್ಟೋಕ್ಸ್ (ನಾಯಕ) , ಜಾನಿ ಬೈರ್ಸ್ಟೋವ್ (ವಿಕೆಟ್ ಕೀಪರ್) , ಕ್ರಿಸ್ ವೋಕ್ಸ್ , ಮಾರ್ಕ್ ವುಡ್ , ಸ್ಟುವರ್ಟ್ ಬ್ರಾಡ್ , ಜೇಮ್ಸ್ ಅ್ಯಂಡರ್ಸನ್.
ಇದನ್ನೂ ಓದಿ: Ben Stokes: ಸಿಕ್ಸರ್ ಕಿಂಗ್…ಹೊಸ ದಾಖಲೆ ಬರೆದ ಬೆನ್ ಸ್ಟೋಕ್ಸ್
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಡೇವಿಡ್ ವಾರ್ನರ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲ್ಯಾಬುಶೇನ್ , ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಮಿಚೆಲ್ ಮಾರ್ಷ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಮಿಚೆಲ್ ಸ್ಟಾರ್ಕ್ , ಪ್ಯಾಟ್ ಕಮಿನ್ಸ್ (ನಾಯಕ) , ಜೋಶ್ ಹ್ಯಾಝಲ್ವುಡ್ , ಟಾಡ್ ಮರ್ಫಿ
Published On - 3:58 pm, Sun, 30 July 23