The Ashes: ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ ಪ್ರಕಟ

ashes 2021: ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಬಿಡುಗಡೆ ಮಾಡಿರುವ 12 ಸದಸ್ಯರ ಪಟ್ಟಿಯಲ್ಲಿ ಬೌಲರುಗಳಾಗಿ ಸ್ಟುವರ್ಟ್ ಬ್ರಾಡ್ ಹೊರತಾಗಿ ಕ್ರಿಸ್ ವೋಕ್ಸ್, ಒಲಿ ರಾಬಿನ್ಸನ್ ಮತ್ತು ಮಾರ್ಕ್ ವುಡ್ ಸ್ಥಾನ ಪಡೆದಿದ್ದಾರೆ.

The Ashes: ಪ್ರತಿಷ್ಠಿತ ಆ್ಯಶಸ್ ಸರಣಿಯ ಮೊದಲ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್ ಪ್ರಕಟ
The Ashes
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 07, 2021 | 5:47 PM

ಟೆಸ್ಟ್​ ಅಂಗಳದ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಆಸ್ಟ್ರೇಲಿಯಾ-ಇಂಗ್ಲೆಂಡ್​ ನಡುವಣ ಆ್ಯಶಸ್ ಸರಣಿ ಡಿಸೆಂಬರ್ 8 ರಿಂದ ಶುರುವಾಗಲಿದೆ. ಬ್ರಿಸ್ಬೇನ್‌ನಲ್ಲಿ ನಡೆಯಲಿರುವ ಮೊದಲ ಟೆಸ್ಟ್​ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತಂಡವು ಈಗಾಗಲೇ ಪ್ಲೇಯಿಂಗ್​ ಇಲೆವೆನ್​ ಅನ್ನು ಘೋಷಿಸಿದೆ. ಇನ್ನೊಂದೆಡೆ ಇಂಗ್ಲೆಂಡ್ ತಂಡ ಕೂಡ ಅಂತಿಮ 12 ಮಂದಿಯ ತಂಡವನ್ನು ಪ್ರಕಟಿಸಿದೆ. ಮೊದಲ ಟೆಸ್ಟ್‌ನಿಂದ ಇಂಗ್ಲೆಂಡ್ ತಂಡದ ಪ್ರಮುಖ ವೇಗಿ ಜೇಮ್ಸ್ ಆಂಡರ್ಸನ್‌ಗೆ ವಿಶ್ರಾಂತಿ ನೀಡಲಾಗಿದೆ. ಅವರ ಸ್ಥಾನದಲ್ಲಿ ಕ್ರಿಸ್ ವೋಕ್ಸ್ ಸ್ಥಾನ ಪಡೆದಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್ ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಬಿಡುಗಡೆ ಮಾಡಿರುವ 12 ಸದಸ್ಯರ ಪಟ್ಟಿಯಲ್ಲಿ ಬೌಲರುಗಳಾಗಿ ಸ್ಟುವರ್ಟ್ ಬ್ರಾಡ್ ಹೊರತಾಗಿ ಕ್ರಿಸ್ ವೋಕ್ಸ್, ಒಲಿ ರಾಬಿನ್ಸನ್ ಮತ್ತು ಮಾರ್ಕ್ ವುಡ್ ಸ್ಥಾನ ಪಡೆದಿದ್ದಾರೆ. ಹೀಗಾಗಿ ಇವರಲ್ಲಿ ಒಬ್ಬ ಬೌಲರ್‌ ಹೊರಗುಳಿಯುವುದು ಬಹುತೇಕ ಖಚಿತ ಎನ್ನಬಹುದು. ಇನ್ನು ಎಡಗೈ ಸ್ಪಿನ್ನರ್ ಜಾಕ್ ಲೀಚ್ ಕೂಡ ತಂಡದಲ್ಲಿದ್ದಾರೆ. ಆದರೆ ತಂಡದಲ್ಲಿರುವ ಏಕೈಕ ಸ್ಪಿನ್ನರ್ ಅವರಾಗಿರುವ ಕಾರಣ ಆಡುವ ಬಳಗದಲ್ಲಿ ಸ್ಥಾನ ಪಡೆಯುವುದು ಖಚಿತ ಎನ್ನಬಹುದು. ಇನ್ನು 12 ಸದಸ್ಯರ ತಂಡದಲ್ಲಿ ಜಾನಿ ಬೈರ್‌ಸ್ಟೋ ಕೂಡ ಸ್ಥಾನ ಪಡೆದಿಲ್ಲ.

ಈ ಬಾರಿ ಆಸ್ಟ್ರೇಲಿಯಾ ತಂಡವನ್ನು ಪ್ಯಾಟ್ ಕಮಿನ್ಸ್​ ಮುನ್ನಡೆಸುತ್ತಿರುವುದು ವಿಶೇಷ. ಏಕೆಂದರೆ ಸರಣಿಗೂ ಮುನ್ನ ನಾಯಕ ಟಿಮ್ ಪೈನ್ ರಾಜೀನಾಮೆ ನೀಡಿದ್ದರು. ಇದೀಗ ಆಸ್ಟ್ರೇಲಿಯಾ ಕಮಿನ್ಸ್​ ನೇತೃತ್ವದಲ್ಲಿ ಕಣಕ್ಕಿಳಿಯಲಿದೆ. ಅಂದಹಾಗೆ ಈ ಬಾರಿಯ ಆ್ಯಶಸ್ ಸರಣಿ ಬ್ರಿಸ್ಬೇನ್ ಮೈದಾನದಿಂದ ಶುರುವಾಗುತ್ತಿರುವುದು ಮತ್ತೊಂದು ವಿಶೇಷ. ಏಕೆಂದರೆ ಈ ಮೈದಾನದಲ್ಲಿ 1986 ರ ಬಳಿಕ ಇಂಗ್ಲೆಂಡ್​ ತಂಡವು ಗೆಲುವು ಸಾಧಿಸಿಲ್ಲ ಎಂಬುದು ವಿಶೇಷ. ಹೀಗಾಗಿ ಮೊದಲ ಪಂದ್ಯದ ಜಯ ಇಂಗ್ಲೆಂಡ್ ಪಾಲಿಗೆ ಐತಿಹಾಸಿಕವಾಗಲಿದೆ.

ಉಭಯ ತಂಡಗಳು ಈ ಕೆಳಗಿನಂತಿವೆ ಇಂಗ್ಲೆಂಡ್ 12 ಸದಸ್ಯರ ಬಳಗ: ಜೋ ರೂಟ್, ಸ್ಟುವರ್ಟ್ ಬ್ರಾಡ್, ರೋರಿ ಬರ್ನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಹಸೀಬ್ ಹಮೀದ್, ಜಾಕ್ ಲೀಚ್, ಡೇವಿಡ್ ಮಲಾನ್, ಒಲಿ ಪೋಪ್, ಒಲಿ ರಾಬಿನ್ಸನ್, ಬೆನ್ ಸ್ಟೋಕ್ಸ್, ಕ್ರಿಸ್ ವೋಕ್ಸ್, ಮಾರ್ಕ್ ವುಡ್.

ಆಸ್ಟ್ರೇಲಿಯಾದ ಪ್ಲೇಯಿಂಗ್ 11: ಡೇವಿಡ್ ವಾರ್ನರ್, ಮಾರ್ಕಸ್ ಹ್ಯಾರಿಸ್, ಮಾರ್ನಸ್ ಲ್ಯಾಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಝಲ್‌ವುಡ್.

ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್​: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ಇದನ್ನೂ ಓದಿ: Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!

ಇದನ್ನೂ ಓದಿ: IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

(The Ashes: England Announce 12-Man Squad)

Published On - 3:07 pm, Tue, 7 December 21

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ