India vs New Zealand 1st Test: ಇಂದು ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಆರಂಭ: ಶ್ರೇಯಸ್ ಅಯ್ಯರ್ ಪದಾರ್ಪಣೆ

India vs New Zealand: ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದಿನಿಂದ ಕಾನ್ಪುರದ ಗ್ರೀನ್ ಪಾರ್ಕ್​ನಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ಅಜಿಂಕ್ಯಾ ರಹಾನೆ ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು, ಶ್ರೇಯಸ್ ಅಯ್ಯರ್ ಟೆಸ್ಟ್​ಗೆ ಪದಾರ್ಪಣೆ ಮಾಡಲಿದ್ದಾರೆ.

India vs New Zealand 1st Test: ಇಂದು ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ ಆರಂಭ: ಶ್ರೇಯಸ್ ಅಯ್ಯರ್ ಪದಾರ್ಪಣೆ
India vs New Zealand
Follow us
TV9 Web
| Updated By: Vinay Bhat

Updated on: Nov 25, 2021 | 7:26 AM

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿದ್ದ ಭಾರತ ತಂಡ ಇದೀಗ ಟೆಸ್ಟ್ ಸರಣಿ (Test Series) ಮೇಲೆ ಕಣ್ಣಿಟ್ಟಿದೆ. ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಇಂದಿನಿಂದ ಕಾನ್ಪುರದ (Kanpur Test) ಗ್ರೀನ್ ಪಾರ್ಕ್​ನಲ್ಲಿ ಮೊದಲ ಪಂದ್ಯ ಆರಂಭವಾಗಲಿದೆ. ಈಗಾಗಲೇ ತಿಳಿದಿರುವಂತೆ ಪ್ರಮುಖ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ (Team India) ಕಿವೀಸ್ ವಿರುದ್ಧ ಕಣಕ್ಕಿಳಿಯುತ್ತಿದೆ. ಅಜಿಂಕ್ಯಾ ರಹಾನೆ (Ajinkya Rahane) ನಾಯಕನಾಗಿ ತಂಡವನ್ನು ಮುನ್ನಡೆಸುತ್ತಿದ್ದು, ಶ್ರೇಯಸ್ ಅಯ್ಯರ್ (Shreyas Iyer) ಟೆಸ್ಟ್​ಗೆ ಪದಾರ್ಪಣೆ ಮಾಡಲಿದ್ದಾರೆ. ಉಭಯ ತಂಡಗಳಿಗೆ ಇದೊಂದು ಸೇಡಿನ ಪಂದ್ಯವಾಗಿದೆ. ನ್ಯೂಜಿಲೆಂಡ್ ತಂಡ ಟಿ20 ಸರಣಿಯಲ್ಲಿ ಅನುಭವಿಸಿದ ಮುಖಭಂಗಕ್ಕೆ ಸೇಡು ತೀರಿಸಿಕೊಳ್ಳುವ ಕಾತುರದಲ್ಲಿದ್ದರೆ, ಇತ್ತ ಭಾರತ ಐಸಿಸಿ ಟೆಸ್ಟ್ ಚಾಂಪಿಯನ್​ಶಿಪ್ (ICC World Test Championship) ಫೈನಲ್​ನಲ್ಲಿ ಸೋತಿದ್ದಕ್ಕೆ ತಕ್ಕ ಉತ್ತರ ನೀಡಲು ತಯಾರಾಗಿದೆ. ಹೀಗಾಗಿ ಕಾನ್ಪುರ ಟೆಸ್ಟ್ ಸಾಕಷ್ಟು ಕುತೂಹಲ ಕೆರಳಿಸಿದೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಮತ್ತು ಗಾಯಗೊಂಡಿರುವ ಕೆಎಲ್. ರಾಹುಲ್ ಅವರಿಲ್ಲದೇ ಕಣಕ್ಕಿಳಿಯುತ್ತಿರುವ ತಂಡದಲ್ಲಿ ಯುವ ಆಟಗಾರರಿಗೆ ಮಿಂಚಲು ಅವಕಾಶ ಲಭಿಸಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಜೊತೆ ಶುಭ್ಮನ್ ಗಿಲ್ ಇನಿಂಗ್ಸ್ ಆರಂಭಿಸುವರು. ಕೊಹ್ಲಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಆಡುವುದು ಖಚಿತವಾಗಿದೆ. ಮೂರನೇ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಕ್ರೀಸ್‌ಗೆ ಬರುವುದು ಖಚಿತ. ಸುಮಾರು ಒಂದು ವರ್ಷದಿಂದ ಶತಕದ ಬರ ಎದುರಿಸುತ್ತಿರುವ ಪೂಜಾರ ಇಲ್ಲಿ ಮತ್ತೆ ಲಯಕ್ಕೆ ಮರಳುವ ನಿರೀಕ್ಷೆ ಇದೆ.

ಅನುಭವಿ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಮತ್ತು ಯುವ ಆಟಗಾರ ಕೆ.ಎಸ್. ಭರತ್ ತಂಡದಲ್ಲಿದ್ದಾರೆ. ಸಹಾ ಅವರೇ ಕೀಪಿಂಗ್ ಹೊಣೆ ನಿಭಾಯಿಸುವುದು ಬಹುತೇಕ ಖಚಿತ. ಪಂದ್ಯ ಆರಂಭಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ನಾಯಕ ರಹಾನೆ ಬೌಲಿಂಗ್ ಕಾಂಬಿನೇಷನ್ ಬಗ್ಗೆ ರಹಾನೆ ಸ್ಪಷ್ಟತೆ ನೀಡಿಲ್ಲ. ಆದರೆ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ 27 ವಿಕೆಟ್ ಕಬಳಿಸಿ ಮಿಂಚಿದ್ದ ಅಕ್ಷರ್ ಪಟೇಲ್ 3ನೇ ಸ್ಪಿನ್ನರ್ ಆಗಿ ಆಡುವ ನಿರೀಕ್ಷೆ ಇದೆ. ಇದರಿಂದ ಸೂರ್ಯಕುಮಾರ್, ಜಯಂತ್ ಯಾದವ್ ಹೊರಗುಳಿಯಲಿದ್ದಾರೆ. ರವೀಂದ್ರ ಜಡೇಜಾ ಸ್ಥಾನ ಭದ್ರವಾಗಿದ್ದು, ರವಿಚಂದ್ರನ್ ಅಶ್ವಿನ್ ಅವರನ್ನೂ ಕಣಕ್ಕಿಳಿಸಿ ಮೂವರು ಸ್ಪಿನ್ನರ್​ಗಳನ್ನು ಆಡಿಸಿದರೂ ಅಚ್ಚರಿಯಿಲ್ಲ.

ಇತ್ತ ಭಾರತದಲ್ಲಿ ಕೇವಲ ಎರಡೇ ಟೆಸ್ಟ್ ಗೆದ್ದಿರುವ ಇತಿಹಾಸ, ಕಳೆದ 33 ವರ್ಷಗಳಿಂದ ಭಾರತದಲ್ಲಿ ಟೆಸ್ಟ್ ಗೆಲ್ಲದ ಕೊರಗು, ಕಳೆದೆರಡು ಪ್ರವಾಸಗಳಲ್ಲಿ ಎಲ್ಲ ಟೆಸ್ಟ್‌ಗಳಲ್ಲಿ ಸೋತ ಹಿನ್ನಡೆಯ ನಡುವೆ ಪ್ರವಾಸಿ ನ್ಯೂಜಿಲೆಂಡ್ ತಂಡವೀಗ ‘ಟೆಸ್ಟ್ ವಿಶ್ವ ಚಾಂಪಿಯನ್’ ಪಟ್ಟಕ್ಕೆ ತಕ್ಕ ನಿರ್ವಹಣೆ ತೋರುವ ಛಲದಲ್ಲಿದೆ. ವಿಶ್ರಾಂತಿ ಬಯಸಿದ ಅನುಭವಿ ವೇಗಿ ಟ್ರೆಂಟ್ ಬೌಲ್ಟ್ ಮತ್ತು ಗಾಯಗೊಂಡ ಡೆವೊನ್ ಕಾನ್‌ವೇ ಬಿಟ್ಟರೆ ಕಿವೀಸ್ ಸರಣಿಗೆ ಪೂರ್ಣಬಲದ ತಂಡವನ್ನು ಹೊಂದಿದ್ದು, ಸ್ಪಿನ್ ಪಿಚ್ ಸಹಿತ ಎಲ್ಲ ರೀತಿಯ ವಾತಾವರಣದಲ್ಲೂ ತಾನು ಚಾಂಪಿಯನ್ ಆಟವಾಡಬಲ್ಲೆ ಎಂದು ನಿರೂಪಿಸಲು ಬಯಸಿದೆ.

ನಾಯಕ ವಿಲಿಯಮ್ಸನ್, ರಾಸ್ ಟೇಲರ್, ಟಾಮ್ ಲಥಾಮ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್‌ ಮತ್ತು ಟಾಮ್ ಬ್ಲಂಡೆಲ್ ತಂಡದ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಗ್ರಿನ್ ಪಾರ್ಕ್ ಪಿಚ್‌ ಅವಲೋಕಿಸಿರುವ ಕೋಚ್ ಗ್ಯಾರಿ, ಸ್ಪಿನ್ನರ್‌ಗಳಾದ ಮಿಚೆಲ್ ಸ್ಯಾಂಟನರ್, ಎಜಾಜ್ ಪಟೇಲ್ ಮತ್ತು ವಿಲ್ ಸೊಮರ್ ವಿಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

ಭಾರತ ತಂಡ ಕಾನ್ಪುರದಲ್ಲಿ ಇದುವರೆಗೆ 22 ಟೆಸ್ಟ್ ಆಡಿದ್ದು, 7ರಲ್ಲಿ ಗೆದ್ದು, 3ರಲ್ಲಿ ಸೋತಿದೆ. 12 ಟೆಸ್ಟ್ ಡ್ರಾಗೊಂಡಿದೆ. ನ್ಯೂಜಿಲೆಂಡ್ ತಂಡ ಕಾನ್ಪುರದಲ್ಲಿ ಇದುವರೆಗೆ 3 ಟೆಸ್ಟ್ ಆಡಿದ್ದು, 2ರಲ್ಲಿ ಸೋತು, 1ರಲ್ಲಿ ಡ್ರಾ ಸಾಧಿಸಿದೆ. ಪಂದ್ಯ ಬೆಳಗ್ಗೆ 9:30ಕ್ಕೆ ಆರಂಭವಾಗಲಿದ್ದು, 9 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ