India vs South Africa: ಇಂದಿನಿಂದ ಬಹು ನಿರೀಕ್ಷೆಯ ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಆರಂಭ

IND vs SA: ಭಾರತದ ಪ್ಲೇಯಿಂಗ್ ಇಲೆವೆನ್ ಕಟ್ಟುವುದೇ ತಲೆನೋವಾಗಿ ಪರಿಣಮಿಸಿದೆ. ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಮತ್ತು ಹನುಮಾ ವಿಹಾರಿ ಪೈಕಿ ಯಾರಿಗೆ ಸ್ಥಾನ ನೀಡುವುದು ಎಂಬ ಗೊಂದಲ ಟೀಮ್ ಇಂಡಿಯಾದಲ್ಲಿ ಉಂಟಾಗಿದೆ.

India vs South Africa: ಇಂದಿನಿಂದ ಬಹು ನಿರೀಕ್ಷೆಯ ಭಾರತ- ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ ಆರಂಭ
India vs South Africa 1st Test
Follow us
TV9 Web
| Updated By: Vinay Bhat

Updated on: Dec 26, 2021 | 8:37 AM

ಇಂದಿನಿಂದ ಟೀಮ್ ಇಂಡಿಯಾ (Team India) ಅಧಿಕೃತವಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಆರಂಭಿಸಲಿದ್ದು, ಸೂಪರ್‌ಸ್ಪೋರ್ಟ್ ಪಾಕ್ ಮೈದಾನದಲ್ಲಿ ಮೊದಲ ಟೆಸ್ಟ್ ಶುರುವಾಗಲಿದೆ. ಹರಿಣಗಳ ನಾಡಿನಲ್ಲಿ ಈವರೆಗೆ ಒಂದೇ ಒಂದು ಟೆಸ್ಟ್ ಸರಣಿ ಗೆಲ್ಲದ ಭಾರತ (India vs South Africa) ಇದೀಗ ಹೊಸ ಕೋಚ್ ರಾಹುಲ್ ದ್ರಾವಿಡ್ (Rahul Dravid) ಸಾರಥ್ಯದಲ್ಲಿ ಐತಿಹಾಸಿಕ ಸಾಧನೆ ಮಾಡುತ್ತಾ ಎಂಬುದು ನೋಡಬೇಕಿದೆ. ಹೀಗಾಗಿ ಕ್ರಿಸ್ಮಸ್ ಸಂಭ್ರಮದ ಮರುದಿನ ಆರಂಭಗೊಳ್ಳುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್ (Boxing Day Test) ಹಣಾಹಣಿ ಕುತೂಹಲ ಮೂಡಿಸಿದೆ. ಆಫ್ರಿಕಾದ ಬೌನ್ಸಿ ಟ್ರ್ಯಾಕ್‌ಗಳಲ್ಲಿ ಆತಿಥೇಯ ತಂಡವನ್ನು ಎದುರಿಸುವುದು ಅಷ್ಟು ಸುಲಭವಲ್ಲ. ಹರಿಣಗಳ ನಾಡಿನಲ್ಲಿ ಭಾರತಕ್ಕೂ ಇದು ಸ್ಪಷ್ಟವಾಗಿ ಅರಿವಿಗೆ ಬಂದಿದೆ. ಇದಕ್ಕೆ ಹಿಂದಿನ ಟೆಸ್ಟ್‌ ಸರಣಿ ದಾಖಲೆಗಳೇ ಸಾಕ್ಷಿ. 2010ರಲ್ಲಿ ಧೋನಿ ಪಡೆ ಸರಣಿಯನ್ನು 1-1ರಿಂದ ಡ್ರಾಗೊಳಿಸಿದ್ದೇ ನಮ್ಮವರ ಅತ್ಯುತ್ತಮ ಸಾಧನೆ. ಕಳೆದ ಸಲ ಕೊಹ್ಲಿ (Virat Kohli) ಪಡೆ 1-0 ಮುನ್ನಡೆ ಸಾಧಿಸಿತಾದರೂ ಉಳಿದೆರಡು ಟೆಸ್ಟ್‌ಗಳನ್ನು ಸೋತು ಸರಣಿಯನ್ನು ಒಪ್ಪಿಸಿ ಬಂದಿತ್ತು.

ಭಾರತ ತಂಡದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರಿಗೆ ಇದು ಅತ್ಯಂತ ಮಹತ್ವದ ಸರಣಿಯಾಗಿದೆ. ದ್ರಾವಿಡ್‌ ಮಾರ್ಗದರ್ಶನದಲ್ಲಿ ಭಾರತ ತಂಡ ತಾಯ್ನಾಡಿನಲ್ಲಿ ನ್ಯೂಜಿಲೆಂಡ್‌ ಎದುರು ಟೆಸ್ಟ್‌ ಮತ್ತು ಟಿ20 ಕ್ರಿಕೆಟ್‌ ಸರಣಿಯನ್ನು ಗೆದ್ದಾಗಿದೆ. ಈಗ ನೂತನ ಕೋಚ್‌ ಅಡಿ ವಿದೇಶದಲ್ಲಿ ಮೊದಲ ಸರಣಿಯನ್ನಾಡುತ್ತಿದ್ದು, ಭಾರತ ತಂಡಕ್ಕೆ ಯಶಸ್ಸು ತಂದುಕೊಡುವ ಜವಾಬ್ದಾರಿ ದ್ರಾವಿಡ್‌ ಮೇಲಿದೆ.

ಇದರ ನಡುಗೆ ಭಾರತದ ಪ್ಲೇಯಿಂಗ್ ಇಲೆವೆನ್ ಕಟ್ಟುವುದೇ ತಲೆನೋವಾಗಿ ಪರಿಣಮಿಸಿದೆ. ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್, ಶಾರ್ದೂಲ್ ಠಾಕೂರ್ ಮತ್ತು ಹನುಮಾ ವಿಹಾರಿ ಪೈಕಿ ಯಾರಿಗೆ ಸ್ಥಾನ ನೀಡುವುದು ಎಂಬ ಗೊಂದಲ ಟೀಮ್ ಇಂಡಿಯಾದಲ್ಲಿ ಉಂಟಾಗಿದೆ. ಇದರ ನಡುವೆ ದ್ರಾವಿಡ್ ಅವರು, ರಹಾನೆ ಅವರೊಂದಿಗೆ ಸಂಭಾಷಣೆ ಸಕಾರಾತ್ಮಕವಾಗಿದೆ. ಅವರು ಕಳೆದ ಒಂದು ವಾರದಿಂದಲೂ ಕಠಿಣ ಪರಿಶ್ರಮ ಪಡುತ್ತಿದ್ದಾರೆಂದು ಹೇಳಿದ್ದಾರೆ. ಈ ಮೂಲಕ ಪ್ಲೇಯಿಂಗ್ ಇಲೆವೆನ್​ನಲ್ಲಿ ರಹಾನೆಯನ್ನು ಆಡಿಸುವ ಸೂಚನೆ ನೀಡಿದ್ದಾರೆ.

ಉಪನಾಯಕ ಕೆಎಲ್ ರಾಹುಲ್ ಶುಕ್ರವಾರ ಹಂಚಿಕೊಂಡಿರುವ ಮಾಹಿತಿ ಅನ್ವಯ ಐವರು ಬೌಲರ್‌ಗಳಿಗೆ ಸ್ಥಾನ ಸಿಗುವುದು ಪಕ್ಕಾಗಿದೆ. ವೇಗಿಗಳಿಗೆ ಪಿಚ್ ನೆರವಾಗುವ ಹಿನ್ನೆಲೆಯಲ್ಲಿ ಶಾರ್ದೂಲ್ ಠಾಕೂರ್‌ಗೆ ಮಣೆ ಹಾಕಬಹುದು. ಶಾರ್ದೂಲ್ ಅಗತ್ಯ ವೇಳೆ ಬ್ಯಾಟಿಂಗ್‌ನಲ್ಲೂ ತಂಡಕ್ಕೆ ನೆರವಾಗಬಲ್ಲರು. ಬ್ಯಾಟಿಂಗಿಗೆ ಹೋಲಿಸಿದರೆ ಭಾರತದ ಬೌಲಿಂಗ್‌ ವಿಭಾಗವೇ ಹೆಚ್ಚು ಬಲಿಷ್ಠ ಹಾಗೂ ವೈವಿಧ್ಯಮಯ ಎನ್ನಲಡ್ಡಿಯಿಲ್ಲ. ವೇಗದ ವಿಭಾಗದಲ್ಲಿ ಒಂದು ಸುದೀರ್ಘ‌ ವಿಶ್ರಾಂತಿ ಪಡೆದು ಫ್ರೆಶ್‌ ಆಗಿ ಬಂದಿರುವ ಬುಮ್ರಾ ಜತೆಗೆ ಶಮಿ, ಸಿರಾಜ್‌, ಠಾಕೂರ್‌, ಇಶಾಂತ್‌ ಇದ್ದಾರೆ. ಸ್ಪಿನ್ನಿಗೆ ಅಶ್ವಿ‌ನ್‌ ಇದ್ದಾರೆ.

ಕಗಿಸೊ ರಬಾಡ, ಲುಂಗಿ ಎನ್‌ಗಿಡಿ ಹಾಗೂ ಡುವಾನ್ನೆ ಒಲಿವೀರ್ ಒಳಗೊಂಡ ವೇಗಿಗಳ ಪಡೆ ಪ್ರವಾಸಿ ಭಾರತ ತಂಡಕ್ಕೆ ಆಘಾತ ನೀಡುವ ಸಾಮರ್ಥ್ಯ ಹೊಂದಿದೆ. ಎಡಗೈ ಸ್ಪಿನ್ನರ್ ಕೇಶವ್ ಮಹಾರಾಜ್ ಕೂಡ ಅಪಾಯಕಾರಿಯಾದರೂ ಅಚ್ಚರಿಯಿಲ್ಲ. ರಬಾಡ ಹಾಗೂ ಒಲಿವೀರ್ ಜೋಡಿ ಭಾರತದ ಬ್ಯಾಟಿಂಗ್ ಪಡೆಗೆ ದೊಡ್ಡ ಸವಾಲಾಗಲಿದೆ. ಡೀನ್ ಎಲ್ಗರ್, ಕ್ವಿಂಟನ್ ಡಿಕಾಕ್, ಮಾರ್ಕ್ರಮ್ ಒಳಗೊಂಡ ಬ್ಯಾಟಿಂಗ್ ಪಡೆ ಭಾರತದ ಸವಾಲಾಗಿದೆ ಸಜ್ಜಾಗಿದೆ.

ಭಾರತದ ಸಂಭಾವ್ಯ ಪ್ಲೇಯಿಂಗ್ XI: ಕೆಎಲ್ ರಾಹುಲ್ (ಉಪ ನಾಯಕ), ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಶ್ರೇಯಸ್ ಅಯ್ಯರ್/ಅಜಿಂಕ್ಯಾ ರಹಾನೆ, ರಿಷಭ್ ಪಂತ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್/ಹನುಮಾ ವಿಹಾರಿ, ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಪಂದ್ಯ ಆರಂಭ:ಮಧ್ಯಾಹ್ನ 1.30ಕ್ಕೆ

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್

IND vs SA: ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತ ಟೆಸ್ಟ್ ಸರಣಿ ಗೆಲ್ಲುವುದು ಕಷ್ಟಕಷ್ಟ; ಆಕಾಶವಾಣಿ

(The first Test between South Africa vs India will start today at the SuperSport Park Cricket Stadium Centurion)

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM