ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್

ಬೌಂಡರಿ ಲೈನ್​ನಲ್ಲಿ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದ ಮಿಚೆಲ್ ಸ್ಯಾಂಟ್ನರ್

ಝಾಹಿರ್ ಯೂಸುಫ್
|

Updated on: Aug 03, 2024 | 12:06 PM

The Hundred 2024: ದಿ ಹಂಡ್ರೆಡ್ ಲೀಗ್​ನ 12ನೇ ಪಂದ್ಯದಲ್ಲಿ ನ್ಯೂಝಿಲೆಂಡ್​ ಕ್ರಿಕೆಟಿಗ ಮಿಚೆಲ್ ಸ್ಯಾಂಟ್ನರ್ ಅದ್ಭುತ ಕ್ಯಾಚ್ ಹಿಡಿದು ಸಂಚಲನ ಸೃಷ್ಟಿಸಿದ್ದಾರೆ. ಓವಲ್ ಇನ್ವಿನ್ಸಿಬಲ್ಸ್ ವಿರುದ್ಧದ ಈ ಪಂದ್ಯದಲ್ಲಿ ನಾರ್ಥನ್ ಸೂಪರ್ ಚಾರ್ಜರ್ಸ್ ಪರ ಕಣಕ್ಕಿಳಿದ ಸ್ಯಾಂಟ್ನರ್ ಅತ್ಯುತ್ತಮ ಫೀಲ್ಡಿಂಗ್​ನೊಂದಿಗೆ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದು ಮಿಚೆಲ್ ಸ್ಯಾಂಟ್ನರ್ ಎಲ್ಲರನ್ನು ನಿಬ್ಬೆರಗಾಗಿಸಿದ್ದಾರೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ಮತ್ತು ನಾರ್ಥನ್ ಸೂಪರ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿತ್ತು. ಮೊದಲು ಬ್ಯಾಟ್ ಮಾಡಿದ ನಾರ್ಥನ್ ಸೂಪರ್ ಚಾರ್ಜಸ್ ತಂಡವು 100 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 145 ರನ್ ಪೇರಿಸಿತು.

ಈ ಗುರಿಯನ್ನು ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ 53 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕಣಕ್ಕಿಳಿದ ಸ್ಯಾಮ್ ಕರನ್, ಮ್ಯಾಥ್ಯೂ ಶಾರ್ಟ್ ಎಸೆತದಲ್ಲಿ ಲಾಂಗ್ ಆನ್​ನತ್ತ ಭರ್ಜರಿ ಹೊಡೆತ ಬಾರಿಸಿದ್ದರು. ಇನ್ನೇನು ಚೆಂಡು ಬೌಂಡರಿ ಲೈನ್ ದಾಟಲಿದೆ ಎನ್ನುವಷ್ಟರಲ್ಲಿ ಮಿಂಚಿನ ವೇಗದಲ್ಲಿ ಬಂದ ಮಿಚೆಲ್ ಸ್ಯಾಂಟ್ನರ್ ಅದ್ಭುತ ಡೈವಿಂಗ್ ಕ್ಯಾಚ್ ಹಿಡಿದರು. ಇದೀಗ ಈ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನ್ಯೂಝಿಲೆಂಡ್​ನ ಕ್ರಿಕೆಟಿಗ ಮಿಂಚಿನ ಫೀಲ್ಡಿಂಗ್​ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಈ ಪಂದ್ಯದಲ್ಲಿ ನಾರ್ಥನ್ ಸೂಪರ್ ಚಾರ್ಜರ್ಸ್ ನೀಡಿದ 146 ರನ್​ಗಳ ಗುರಿಯನ್ನು ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ ತಂಡವು 100 ಎಸೆತಗಳಲ್ಲಿ 9 ವಿಕೆಟ್ ಕಳೆದುಕೊಂಡು 129 ರನ್​ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಹ್ಯಾರಿ ಬ್ರೂಕ್ ನಾಯಕತ್ವದ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡವು 19 ರನ್​ಗಳ ಭರ್ಜರಿ ಜಯ ಸಾಧಿಸಿದೆ.