The Hundred 2024: ಇಂದಿನಿಂದ ದಿ ಹಂಡ್ರೆಡ್ ಲೀಗ್ ಶುರು: ಈ ಟೂರ್ನಿಯ ನಿಯಮಗಳೇನು?

The Hundred 2024: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಈವರೆಗೆ ಮೂರು ಸೀಸನ್ ಆಡಲಾಗಿದೆ. ಮೊದಲ ಸೀಸನ್​ನಲ್ಲಿ ಸದರ್ನ್ ಬ್ರೇವ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ದ್ವಿತೀಯ ಸೀಸನ್​ನಲ್ಲಿ ಟ್ರೆಂಟ್ ರಾಕೆಟ್ಸ್ ಕಿರೀಟ ಮುಡಿಗೇರಿಸಿಕೊಂಡಿತ್ತು. ಇನ್ನು ಕಳೆದ ಸೀಸನ್​ನಲ್ಲಿ ಓವಲ್ ಇನ್ವಿನ್ಸಿಬಲ್ಸ್ ತಂಡ ಚಾಂಪಿಯನ್ ಪಟ್ಟಕ್ಕೇರಿತ್ತು. ಇದೀಗ ದಿ ಹಂಡ್ರೆಡ್ ಲೀಗ್​ನ 4ನೇ ಸೀಸನ್​ಗಾಗಿ ಇಂಗ್ಲೆಂಡ್​ನ ಕ್ರಿಕೆಟ್ ಮೈದಾನಗಳು ಸಜ್ಜಾಗಿ ನಿಂತಿವೆ.

The Hundred 2024: ಇಂದಿನಿಂದ ದಿ ಹಂಡ್ರೆಡ್ ಲೀಗ್ ಶುರು: ಈ ಟೂರ್ನಿಯ ನಿಯಮಗಳೇನು?
The Hundred
Follow us
|

Updated on: Jul 23, 2024 | 11:59 AM

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಇಂದಿನಿಂದ (ಜುಲೈ 23) ಶುರುವಾಗಲಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದ್ದು, ಮೊದಲ ಸುತ್ತಿನಲ್ಲಿ ಪ್ರತಿ ತಂಡಗಳು 8 ಪಂದ್ಯಗಳನ್ನಾಡಲಿದೆ. ಈ ಎಂಟು ಪಂದ್ಯಗಳಲ್ಲಿ ನಾಲ್ಕು ಪಂದ್ಯಗಳನ್ನು ಹೋಮ್​​ಗ್ರೌಂಡ್​ನಲ್ಲಿ ಮತ್ತು ನಾಲ್ಕು ಪಂದ್ಯಗಳನ್ನು ಅವೇ ಗ್ರೌಂಡ್​ನಲ್ಲಿ (ಎದುರಾಳಿ ತಂಡದ ಹೋಮ್​ಗ್ರೌಂಡ್) ಆಡಲಾಗುತ್ತದೆ. ಇನ್ನು ಟೂರ್ನಿಯು ಟಿ20 ಸ್ವರೂಪವನ್ನು ಹೋಲುತ್ತಿದ್ದರೂ, ನಿಯಮಗಳಲ್ಲಿ ಹಲವು ಬದಲಾವಣೆಗಳಿರುವುದು ವಿಶೇಷ.

ಏನಿದು ಹಂಡ್ರೆಡ್ ಲೀಗ್?

ದಿ ಹಂಡ್ರೆಡ್ ಲೀಗ್ ಎಂಬುದು ಟಿ20 ಮಾದರಿಯಲ್ಲೇ ಆಯೋಜಿಸಲಾಗುವ ಚುಟುಕು ಟೂರ್ನಿ. ಆದರೆ ಇಲ್ಲಿ 20 ಓವರ್​ಗಳಿರುವುದಿಲ್ಲ ಎಂಬುದಷ್ಟೇ ವ್ಯತ್ಯಾಸ. ಬದಲಾಗಿ 100 ಎಸೆತಗಳ ಪಂದ್ಯವಾಗಿರಲಿದೆ. ಹೀಗಾಗಿಯೇ ಈ ಟೂರ್ನಿಗೆ ದಿ ಹಂಡ್ರೆಡ್ ಎಂದು ಹೆಸರಿಡಲಾಗಿದೆ.

ದಿ ಹಂಡ್ರೆಡ್ ಲೀಗ್​ನ ನಿಯಮಗಳು:

  • – ದಿ ಹಂಡ್ರೆಡ್ ಲೀಗ್​ನಲ್ಲಿ ಒಂದು ಇನ್ನಿಂಗ್ಸ್​ನಲ್ಲಿ 100 ಎಸೆತಗಳನ್ನು ಬೌಲಿಂಗ್ ಮಾಡಲಾಗುತ್ತದೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ 20 ಓವರ್​ನಂತೆ 120 ಎಸೆತಗಳಾದರೆ ಇಲ್ಲಿ ತಲಾ 100 ಎಸೆತಗಳಿರಲಿವೆ.
  • – ಈ ಲೀಗ್​ನಲ್ಲಿ ಬೌಲರ್​ ಸತತ 5 ಅಥವಾ 10 ಬೌಲ್​ಗಳನ್ನು ಮಾಡಬಹುದು. ಅಂದರೆ ಇಲ್ಲಿ ಓವರ್​ ಲೆಕ್ಕಚಾರವು 5 ಎಸೆತಗಳಿಗೆ ಸೀಮಿತವಾಗಿರುತ್ತದೆ. ಆದರೆ ಇಲ್ಲಿ ಸತತ 10 ಎಸೆತಗಳನ್ನು ಎಸೆಯುವ ಅವಕಾಶ ಇರುವುದು ವಿಶೇಷ.
  • – ಒಂದು ಇನಿಂಗ್ಸ್​ನಲ್ಲಿ ಒಬ್ಬ ಬೌಲರ್​ಗೆ 20 ಎಸೆತಗಳು ಮಾತ್ರ ಇರಲಿದೆ.
  • – ಈ ಇಪ್ಪತ್ತು ಎಸೆತಗಳನ್ನು 2 ಬಾರಿ ಬೌಲಿಂಗ್ ಮಾಡಿ ಮುಗಿಸಬಹುದು. ಅಂದರೆ ಮೊದಲ ಓವರ್​ನಲ್ಲಿ ಸತತ 10 ಎಸೆತ ಹಾಗೂ 2ನೇ ಓವರ್​ನಲ್ಲಿ ಸತತ 10 ಎಸೆತ ಎಸೆಯಬಹುದು. ಇದರ ಹೊರತಾಗಿ ಓವರ್​ ಲೆಕ್ಕಚಾರದಲ್ಲಿ 5 ಎಸೆತಗಳಂತೆ ನಾಲ್ಕು ಓವರ್ ಮಾಡಬಹುದು.
  • – ಸಾಮಾನ್ಯವಾಗಿ ಕ್ರಿಕೆಟ್​ನಲ್ಲಿ ಒಂದು ಓವರ್​ ಬಳಿಕ ಬ್ಯಾಟ್ಸ್​ಮನ್​ ಸ್ಟ್ರೈಕ್ ಬದಲಿಸಬೇಕು. ಆದರೆ ದಿ ಹಂಡ್ರೆಡ್ ಲೀಗ್​ನಲ್ಲಿ 10 ಎಸೆತಗಳ ಬಳಿಕ ಸ್ಟ್ರೈಕ್ ಬದಲಿಸಿಕೊಳ್ಳಲಾಗುತ್ತದೆ.
  • – ಪ್ರತಿ ತಂಡಕ್ಕೆ ಪ್ರಾರಂಭದಲ್ಲಿ 25 ಎಸೆತಗಳ ಪವರ್‌ಪ್ಲೇ ನೀಡಲಾಗುತ್ತದೆ. ಈ ವೇಳೆ 30 ಯಾರ್ಡ್ ಹೊರಗೆ ಇಬ್ಬರು ಫೀಲ್ಡರ್​ಗಳಿಗೆ ಮಾತ್ರ ಅವಕಾಶ ಇರಲಿದೆ.
  • – ದಿ ಹಂಡ್ರೆಡ್ ಲೀಗ್​ನಲ್ಲಿ ಒಟ್ಟು 8 ತಂಡಗಳು ಪಾಲ್ಗೊಳ್ಳುತ್ತಿದ್ದು, ಒಂದು ತಂಡದಲ್ಲಿ 15 ಮಂದಿಗೆ ಮಾತ್ರ ಅವಕಾಶ ಇರಲಿದೆ.
  • – 8 ತಂಡಗಳಲ್ಲಿ ಟಾಪ್ 3 ಬರುವ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಅಂದರೆ ಟಾಪ್ 1 ತಂಡದ ಜೊತೆ ಆಡಲು 2ನೇ ಮತ್ತು 3ನೇ ತಂಡ ಎಲಿಮಿನೇಟರ್ ಪಂದ್ಯವನ್ನಾಡಲಿದೆ. ಇದರಲ್ಲಿ ಗೆದ್ದ ತಂಡ ಫೈನಲ್ ಆಡಲಿದೆ.

ದಿ ಹಂಡ್ರೆಡ್ ಲೀಗ್​ನಲ್ಲಿ ಕಣಕ್ಕಿಳಿಯುವ ತಂಡಗಳು:

  1. ಓವಲ್ ಇನ್ವಿನ್ಸಿಬಲ್ಸ್
  2. ಮ್ಯಾಂಚೆಸ್ಟರ್ ಒರಿಜಿನಲ್ಸ್
  3. ನಾರ್ಥನ್ ಸೂಪರ್​ ಚಾರ್ಜರ್ಸ್
  4. ಲಂಡನ್ ಸ್ಪಿರಿಟ್
  5. ಬರ್ಮಿಂಗ್ಹ್ಯಾಮ್ ಫೀನಿಕ್ಸ್
  6. ಸದರ್ನ್ ಬ್ರೇವ್
  7. ಟ್ರೆಂಟ್ ರಾಕೆಟ್ಸ್
  8. ವೆಲ್ಷ್ ಫೈರ್

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಜುಲೈ 23 ರಿಂದ ಆಗಸ್ಟ್ 18 ರವರೆಗೆ ದಿ ಹಂಡ್ರೆಡ್ ಲೀಗ್ ನಡೆಯಲಿದ್ದು, ಹೊಸ ಲೀಗ್​ನಲ್ಲಿ ಇಂಗ್ಲೆಂಡ್, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ, ವೆಸ್ಟ್ ಇಂಡೀಸ್ ತಂಡಗಳ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುತ್ತಿದ್ದಾರೆ.

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ