AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ ಸನ್​ರೈಸರ್ಸ್​

The Hundred 2025: ದಿ ಹಂಡ್ರೆಡ್ ಲೀಗ್ ಶುರುವಾಗಿದ್ದು 2021 ರಲ್ಲಿ. ಇದು 100 ಎಸೆತಗಳ ಪಂದ್ಯ ಎಂಬುದು ವಿಶೇಷ. ಅಂದರೆ ಟಿ20 ಬದಲಿಗೆ ಇಲ್ಲಿ ಪ್ರತಿ ಇನಿಂಗ್ಸ್​ಗೆ 100 ಎಸೆತಗಳನ್ನು ಎಸೆಯಲಾಗುತ್ತದೆ. ಹಾಗೆಯೇ ಒಂದು ಓವರ್​ನಲ್ಲಿ 5 ಎಸೆತಗಳು ಇರಲಿವೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂದರೆ ಒಬ್ಬ ಬೌಲರ್ ಸತತ 2 ಓವರ್ ಅಥವಾ 10 ಎಸೆತಗಳನ್ನು ಎಸೆಯಬಹುದು. ಹೀಗೆ ಹಲವು ರೀತಿಯಲ್ಲಿ ವಿಭಿನ್ನವಾಗಿ ಟೂರ್ನಿಗೆ ಇದೀಗ ಐಪಿಎಲ್ ಫ್ರಾಂಚೈಸಿಗಳು ಎಂಟ್ರಿ ಕೊಟ್ಟಿದ್ದಾರೆ.

ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟ ಸನ್​ರೈಸರ್ಸ್​
Sunrisers Leeds
ಝಾಹಿರ್ ಯೂಸುಫ್
|

Updated on: Nov 05, 2025 | 11:25 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಫ್ರಾಂಚೈಸಿಗಳು ಇದೀಗ ಇಂಗ್ಲೆಂಡ್ ಕ್ರಿಕೆಟ್ ಲೀಗ್​ನತ್ತ ಮುಖ ಮಾಡಿದ್ದಾರೆ. ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್​ನಲ್ಲಿ (The Hundred League) ಐಪಿಎಲ್​ನ ನಾಲ್ಕು ಫ್ರಾಂಚೈಸಿಗಳು ತಂಡಗಳನ್ನು ಖರೀದಿಸಿದ್ದಾರೆ. ಇದೀಗ ಈ ತಂಡಗಳ ಹೆಸರುಗಳ ಬದಲಾವಣೆಗೆ ಚಾಲನೆ ನೀಡಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದ ನಾರ್ದರ್ನ್ ಸೂಪರ್​ಚಾರ್ಜರ್ಸ್ ತಂಡದ ಹೆಸರನ್ನು ಬದಲಿಸಲಾಗಿದ್ದು, ಮುಂದಿನ ಸೀಸನ್​ನಿಂದ ಸೂಪರ್​​ಚಾರ್ಜಸ್​ ತಂಡವು ಸನ್​ರೈಸರ್ಸ್ ಲೀಡ್ಸ್​ ಹೆಸರಿನಲ್ಲಿ ಕಣಕ್ಕಿಳಿಯಲಿದೆ.

ಯಾರ್ಕ್‌ಷೈರ್ ಒಡೆತನದಲ್ಲಿದ್ದ ನಾರ್ದರ್ನ್ ಸೂಪರ್‌ಚಾರ್ಜರ್ಸ್‌ನ ಸಂಪೂರ್ಣ ಪಾಲನ್ನು ಸನ್​ ಗ್ರೂಪ್ ಖರೀದಿಸಿತ್ತು. ಹೀಗಾಗಿ ಇದೀಗ ಫ್ರಾಂಚೈಸಿಯ ಹೆಸರನ್ನು ಬದಲಿಸಿದೆ. ಅದರಂತೆ ದಿ ಹಂಡ್ರೆಡ್ ಲೀಗ್​ನಲ್ಲೂ ಸನ್​ರೈಸರ್ಸ್ ಫ್ರಾಂಚೈಸಿಯ ಫ್ಲಾಗ್ ರಾರಾಜಿಸಲಿದೆ.

ಸನ್​ರೈಸರ್ಸ್ ಹೈದರಾಬಾದ್ ಅಲ್ಲದೆ, ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಓವಲ್ ಇನ್ವಿನ್ಸಿಬಲ್ ತಂಡದ ಶೇ. 49 ರಷ್ಟು ಪಾಲನ್ನು ಖರೀದಿಸಿದೆ. ಈ ಮೂಲಕ ರಿಲಯನ್ಸ್ ಒಡೆತನದ ಇಂಡಿಯಾವಿನ್ ಸ್ಪೋರ್ಟ್ಸ್ ಪ್ರೈ. ಲಿಮಿಟೆಡ್ 100 ಎಸೆತಗಳ ಟೂರ್ನಿಗೆ ಕಾಲಿಟ್ಟಿದೆ. ಅಲ್ಲದೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಎಂಐ ಓವಲ್ ಹೆಸರಿನಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ತಂಡವನ್ನು ಖರೀದಿಸಿದ್ದು, ಮ್ಯಾಂಚೆಸ್ಟರ್ ಒರಿಜಿನಲ್ಸ್ ಫ್ರಾಂಚೈಸಿಯ ಶೇ.70 ರಷ್ಟು ಪಾಲನ್ನು ತನ್ನದಾಗಿಸಿಕೊಂಡಿದೆ. ಹೀಗಾಗಿ ದಿ ಹಂಡ್ರೆಡ್ ಲೀಗ್​ನಲ್ಲೂ ಇನ್ಮುಂದೆ ಸೂಪರ್ ಜೈಂಟ್ಸ್ ತಂಡ ಕಾಣಿಸಿಕೊಳ್ಳಲಿದೆ.

ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ತಂಡದ  ಸಹ-ಮಾಲೀಕರಾದ ಜಿಎಂಆರ್ ಗ್ರೂಪ್ ಕೂಡ ದಿ ಹಂಡ್ರೆಡ್ ಲೀಗ್​ಗೆ ಕಾಲಿಟ್ಟಿದ್ದು, ಸದರ್ನ್ ಬ್ರೇವ್‌ ಫ್ರಾಂಚೈಸಿಯ ಶೇಕಡಾ 49 ರಷ್ಟು ಪಾಲನ್ನು ಖರೀದಿಸಿದೆ. ಹೀಗಾಗಿ ಮುಂಬರುವ ಸೀಸನ್​ನಲ್ಲಿ ಕ್ಯಾಪಿಟಲ್ಸ್ ಪಡೆ ಕೂಡ ದಿ ಹಂಡ್ರೆಡ್ ಲೀಗ್​ನಲ್ಲಿ ಕಾಣಿಸಿಕೊಳ್ಳಲಿದೆ.

ಇದನ್ನೂ ಓದಿ: ಮಿಲಿಂದ್ ಆರ್ಭಟಕ್ಕೆ ವಿರಾಟ್ ಕೊಹ್ಲಿಯ ವಿಶ್ವ ದಾಖಲೆ ಉಡೀಸ್

ಸನ್​ರೈಸರ್ಸ್​ ಫ್ರಾಂಚೈಸಿಯ 3ನೇ ತಂಡ:

ಸನ್​ನೆಟ್​ವರ್ಕ್ ಗ್ರೂಪ್​ನ ಒಡೆತನದಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ಈಗಾಗಲೇ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ತಂಡವೊಂದನ್ನು ಹೊಂದಿದೆ. ಎಸ್​ಎ20 ಲೀಗ್​ನಲ್ಲಿ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ಹೆಸರಿನಲ್ಲಿ ತಂಡವೊಂದು ಕಣಕ್ಕಿಳಿಯುತ್ತಿದ್ದು, ಇದೀಗ ಇಂಗ್ಲೆಂಡ್​ನಲ್ಲಿ ಸನ್​ರೈಸರ್ಸ್​ ಲೀಡ್ಸ್​ ಹೆಸರಿನಲ್ಲಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದೆ. ಸನ್​ರೈಸರ್ಸ್​ ಹೆಸರಿನಲ್ಲಿರುವ ಮೂರು ತಂಡಗಳು…

  • ಸನ್​ರೈಸರ್ಸ್ ಹೈದರಾಬಾದ್ (ಇಂಡಿಯನ್ ಪ್ರೀಮಿಯರ್ ಲೀಗ್)
  • ಸನ್​ರೈಸರ್ಸ್ ಈಸ್ಟರ್ನ್​ ಕೇಪ್ (ಸೌತ್ ಆಫ್ರಿಕಾ ಟಿ20 ಲೀಗ್)
  • ಸನ್​ರೈಸರ್ಸ್ ಲೀಡ್ಸ್ ( ದಿ ಹಂಡ್ರೆಡ್ ಲೀಗ್, ಇಂಗ್ಲೆಂಡ್)

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ