AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅತ್ಯಾದ್ಭುತ ಸ್ವಿಮ್ಮಿಂಗ್ ಕ್ಯಾಚ್ ಪ್ರೇಕ್ಷಕರನ್ನು ನಿಬ್ಬೆರಗಾಗಿಸಿದ ವೈಟ್ಲಿ

The Hundred: ವೇಲ್ಶ್ ಫೈರ್ ತಂಡವು ನಿಗದಿತ 100 ಎಸೆತಗಲಲ್ಲಿ 8 ವಿಕೆಟ್ ನಷ್ಟಕ್ಕೆ 129 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿದರು. ಈ ಸುಲಭ ಸವಾಲನ್ನು ಬೆನ್ನತ್ತಿದ ಸದರ್ನ್​ ಬ್ರೇವ್ ತಂಡವು 82 ಎಸೆತಗಳಲ್ಲಿ 1 ವಿಕೆಟ್ ನಷ್ಟಕ್ಕೆ 132 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

Viral Video: ಅತ್ಯಾದ್ಭುತ ಸ್ವಿಮ್ಮಿಂಗ್ ಕ್ಯಾಚ್ ಪ್ರೇಕ್ಷಕರನ್ನು ನಿಬ್ಬೆರಗಾಗಿಸಿದ ವೈಟ್ಲಿ
ರಾಸ್ ವೈಟ್ಲಿ
TV9 Web
| Updated By: ಝಾಹಿರ್ ಯೂಸುಫ್|

Updated on: Aug 23, 2022 | 12:55 PM

Share

ಕ್ರಿಕೆಟ್​ನಲ್ಲಿ ಕ್ಯಾಚಸ್ ವಿನ್ ಮ್ಯಾಚಸ್ ಎಂಬ ಮಾತಿದೆ. ಅದರಲ್ಲೂ ಚುಟುಕು ಕ್ರಿಕೆಟ್​ನಲ್ಲಿ ಒಂದು ಕ್ಯಾಚ್ ಇಡೀ ಪಂದ್ಯದ ಚಿತ್ರಣ ಬದಲಿಸಬಲ್ಲದು. ಹೀಗಾಗಿಯೇ ಫೀಲ್ಡರ್​ಗಳು ಕ್ಯಾಚ್​ಗಳನ್ನು ಹಿಡಿಯಲು ಇನ್ನಿಲ್ಲದ ಪ್ರಯತ್ನ ಮಾಡುತ್ತಾರೆ. ಅಂತಹದೊಂದು ಅದ್ಭುತ ಕ್ಯಾಚ್ ಹಿಡಿದು ಎಲ್ಲರ ಗಮನ ಸೆಳೆದಿದ್ದಾರೆ ರಾಸ್ ವೈಟ್ಲಿ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನ 22ನೇ ಪಂದ್ಯದಲ್ಲಿ ಸದರ್ನ್ ಬ್ರೇವ್ ಹಾಗೂ ವೆಲ್ಶ್​ ಫೈರ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಲ್ಶ್ ಫೈರ್ ತಂಡವು ಒಂದು ಹಂತದಲ್ಲಿ ಉತ್ತಮವಾಗಿ ಬ್ಯಾಟ್ ಬೀಸಿತ್ತು.

ಆದರೆ ಕೊನೆಯ ಹಂತದಲ್ಲಿ ಕಂಬ್ಯಾಕ್ ಮಾಡಿದ ಸದರ್ನ್​ ಬೌಲರ್​ಗಳು ರನ್​ ಗತಿಯನ್ನು ನಿಯಂತ್ರಿಸಿದರು. ಅದರಲ್ಲೂ ಸೌತ್ ಆಫ್ರಿಕಾ ಆಟಗಾರ ಡ್ವೇನ್ ಪ್ರಿಟೊರಿಯಸ್ ವಿಕೆಟ್ ಪಡೆಯುವ ಮೂಲಕ ಬೃಹತ್ ಮೊತ್ತವನ್ನು ಪೇರಿಸುವುದನ್ನು ತಡೆದರು. 7 ಎಸೆತಗಳಲ್ಲಿ 15 ರನ್ ಬಾರಿಸಿ ಕೊನೆಯ ಹಂತದಲ್ಲಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಪ್ರಿಟೊರಿಯಸ್ ಮೈಕೆಲ್ ಹೊಗನ್ ಎಸೆತದಲ್ಲಿ ಭರ್ಜರಿ ಹೊಡೆತ ಬಾರಿಸಿದ್ದರು.

ಇದನ್ನೂ ಓದಿ
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Team India: ಟೀಮ್ ಇಂಡಿಯಾದ ಸರ್ವಶ್ರೇಷ್ಠ ಆರಂಭಿಕ ಆಟಗಾರ ಯಾರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಅತ್ತ ಬೌಂಡರಿ ಲೈನ್​ನಲ್ಲಿ ಫೀಲ್ಡಿಂಗ್​ನಲ್ಲಿದ್ದ ರಾಸ್ ವೈಟ್ಲಿ ಕಡೆಗೆ ರಾಕೆಟ್ ವೇಗದಲ್ಲಿ ಚೆಂಡು ತೂರಿ ಬಂತು. ಇನ್ನೇನು ಬಾಲ್ ನೆಲಕ್ಕೆ ಬೀಳಲಿದೆ ಅನ್ನುವಷ್ಟರಲ್ಲಿ ವೈಟ್ಲಿ ಅದ್ಭುತವಾಗಿ ಸ್ವಿಮ್ಮಿಂಗ್ ಡೈವ್ ಹೊಡೆದರು. ಕಡಿಮೆ ಸಮಯದಲ್ಲಿ ಹಿಡಿದ ಈ ಪರಿಪೂರ್ಣ ಕ್ಯಾಚ್​ನೊಂದಿಗೆ ಡ್ವೇನ್ ಪ್ರಿಟ್ರೊರಿಯಸ್ ಇನಿಂಗ್ಸ್ ಅಂತ್ಯವಾಯಿತು.  ರಾಸ್ ವೈಟ್ಲಿ ಹಿಡಿದ ಈ ಅದ್ಭುತ ಕ್ಯಾಚ್​ಗೆ ಪ್ರೇಕ್ಷಕರು ತಲೆದೂಗಿದರು.

View this post on Instagram

A post shared by The Hundred (@thehundred)

ಈ ಉತ್ತಮ ಕ್ಯಾಚ್ ಪರಿಣಾಮ ವೇಲ್ಶ್ ಫೈರ್ ತಂಡವು ನಿಗದಿತ 100 ಎಸೆತಗಲಲ್ಲಿ 8 ವಿಕೆಟ್ ನಷ್ಟಕ್ಕೆ 129 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿದರು. ಈ ಸುಲಭ ಸವಾಲನ್ನು ಬೆನ್ನತ್ತಿದ ಸದರ್ನ್​ ಬ್ರೇವ್ ತಂಡವು 82 ಎಸೆತಗಳಲ್ಲಿ 1 ವಿಕೆಟ್ ನಷ್ಟಕ್ಕೆ 132 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ