AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Hundred 2026: ಫೈನಲ್‌ನಲ್ಲಿ ಸೋತ ಸನ್‌ರೈಸರ್ಸ್; ಕಾವ್ಯ ಮಾರನ್ ಕನಸು ನುಚ್ಚು ನೂರು

Women's The Hundred 2026 Final: ಐತಿಹಾಸಿಕ ಲಾರ್ಡ್ಸ್‌ನಲ್ಲಿ ನಡೆದ ಮಹಿಳಾ ದಿ ಹಂಡ್ರೆಡ್ 2026 ಫೈನಲ್‌ನಲ್ಲಿ ಕಾವ್ಯ ಮಾರನ್ ಒಡೆತನದ ಸನ್‌ರೈಸರ್ಸ್ ಲೀಡ್ಸ್ ತಂಡ ಹೀನಾಯ ಸೋಲು ಅನುಭವಿಸಿತು. ಟ್ರೆಂಟ್ ರಾಕೆಟ್ಸ್ 8 ವಿಕೆಟ್‌ಗಳಿಂದ ಸನ್‌ರೈಸರ್ಸ್ ಅನ್ನು ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಸನ್‌ರೈಸರ್ಸ್ ಕೇವಲ 91 ರನ್‌ಗಳಿಗೆ ಆಲೌಟ್ ಆಗಿ, ಸುಲಭ ಗುರಿಯನ್ನು ಟ್ರೆಂಟ್ ರಾಕೆಟ್ಸ್‌ಗೆ ನೀಡಿತು. ಸನ್‌ರೈಸರ್ಸ್ ಬ್ಯಾಟಿಂಗ್ ವೈಫಲ್ಯವೇ ಸೋಲಿಗೆ ಕಾರಣವಾಯಿತು.

The Hundred 2026: ಫೈನಲ್‌ನಲ್ಲಿ ಸೋತ ಸನ್‌ರೈಸರ್ಸ್; ಕಾವ್ಯ ಮಾರನ್ ಕನಸು ನುಚ್ಚು ನೂರು
Kavya Maran
ಪೃಥ್ವಿಶಂಕರ
|

Updated on:Aug 16, 2026 | 10:01 PM

Share

ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಮಹಿಳಾ ದಿ ಹಂಡ್ರೆಡ್ 2026 ಫೈನಲ್‌ನಲ್ಲಿ (Women’s The Hundred 2026 Final) ಕಾವ್ಯ ಮಾರನ್ ( Kavya Maran ) ಒಡೆತನದ ಸನ್‌ರೈಸರ್ಸ್ ಲೀಡ್ಸ್ ತಂಡವು ಹೀನಾಯ ಸೋಲು ಅನುಭವಿಸಿತು. ಟ್ರೆಂಟ್ ರಾಕೆಟ್ಸ್ ಇಡೀ ಪಂದ್ಯದಲ್ಲಿ ಪ್ರಾಬಲ್ಯ ಸಾಧಿಸಿ, ಸನ್‌ರೈಸರ್ಸ್ ತಂಡವನ್ನು (Trent Rockets vs Sunrisers Leeds) 8 ವಿಕೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಪ್ರಶಸ್ತಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಕೇವಲ 91 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಟ್ರೆಂಟ್ ರಾಕೆಟ್ಸ್ 46 ಎಸೆತಗಳು ಬಾಕಿ ಇರುವಂತೆಯೇ ಕೇವಲ 2 ವಿಕೆಟ್‌ಗಳನ್ನು ಕಳೆದುಕೊಂಡು 92 ರನ್‌ಗಳ ಗುರಿಯನ್ನು ಸುಲಭವಾಗಿ ತಲುಪಿತು. ಈ ಮೂಲಕ ಈ ಸೀಸನ್ ಆರಂಭಕ್ಕೂ ಮುನ್ನ ಕಳೆದ ಬಾರಿಯ ಚಾಂಪಿಯನ್‌ ನಾರ್ದರ್ನ್ ಸೂಪರ್‌ಚಾರ್ಜರ್ಸ್ ತಂಡವನ್ನು ಖರೀದಿಸಿ ಸನ್‌ರೈಸರ್ಸ್ ಲೀಡ್ಸ್ ಎಂಬ ಹೆಸರಿನೊಂದಿಗೆ ಪ್ರಶಸ್ತಿ ಉಳಿಸಿಕೊಳ್ಳುವ ಇರಾದೆಯೊಂದಿಗೆ ಕಣಕ್ಕಿಳಿದಿದ್ದ ಕಾವ್ಯ ಮಾರನ್ ತಂಡಕ್ಕೆ ಸೋಲಿನ ಆಘಾತ ಎದುರಾಗಿದೆ.

ಸನ್‌ರೈಸರ್ಸ್ ಬ್ಯಾಟಿಂಗ್‌ ವೈಫಲ್ಯ

ಟಾಸ್ ಸೋತು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಸನ್‌ರೈಸರ್ಸ್ ಲೀಡ್ಸ್ ತಂಡ ಕಳಪೆ ಆರಂಭ ಪಡೆಯಿತು. ಫೋಬೆ ಲಿಚ್‌ಫೀಲ್ಡ್ ಉತ್ತಮ ಆರಂಭ ಒದಗಿಸಿಕೊಡಲು ಪ್ರಯತ್ನಿಸಿದರಾದರೂ ಕಿಮ್ ಗಾರ್ತ್ ಮತ್ತು ಜಾರ್ಜಿಯಾ ಆಡಮ್ಸ್ ಅವರ ತಂತ್ರಗಳ ಮುಂದೆ ಸನ್‌ರೈಸರ್ಸ್ ತಂಡದ ಬ್ಯಾಟಿಂಗ್‌ ವಿಭಾಗ ಸಂಪೂರ್ಣ ಕುಸಿಯಿತು. ಇದರ ಪರಿಣಾಮವಾಗಿ ಸನ್‌ರೈಸರ್ಸ್ ಲೀಡ್ಸ್ ಕೇವಲ 26 ರನ್‌ಗಳಿಗೆ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.

ಆ ನಂತರ ಬಂದ ದೀಪ್ತಿ ಶರ್ಮಾ 12 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಅನ್ನಾಬೆಲ್ಲೆ ಸದರ್ಲ್ಯಾಂಡ್ ಕೂಡ ಬೇಗನೇ ಇನ್ನಿಂಗ್ಸ್ ಮುಗಿಸಿದರು. ಅಂತಿಮವಾಗಿ ತಂಡವು 91 ರನ್‌ಗಳಿಗೆ ಆಲೌಟ್ ಆಯಿತು. ಇತ್ತ ಟ್ರೆಂಟ್ ರಾಕೆಟ್ಸ್ ಪರ ಕಿಮ್ ಗಾರ್ತ್, ಸಮಂತಾ ಬೇಟ್ಸ್, ಚಾರ್ಲಿ ಫಿಲಿಪ್ಸ್ ಮತ್ತು ಜಾರ್ಜಿಯಾ ಆಡಮ್ಸ್ ತಲಾ ಎರಡು ವಿಕೆಟ್ ಪಡೆದರು.

ಟ್ರೆಂಟ್ ರಾಕೆಟ್ಸ್ ಚಾಂಪಿಯನ್

92 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಟ್ರೆಂಟ್ ರಾಕೆಟ್ಸ್ ತಂಡಕ್ಕೆ ಸೋಫಿಯಾ ಡಂಕ್ಲಿ ಮತ್ತು ಬೆತ್ ಮೂನಿ ಭರ್ಜರಿ ಆರಂಭ ನೀಡಿದರು. ಆರಂಭಿಕರಾದ ಇಬ್ಬರೂ ಕೇವಲ 40 ಎಸೆತಗಳಲ್ಲಿ 69 ರನ್‌ಗಳ ಭರ್ಜರಿ ಜೊತೆಯಾಟ ನಡೆಸಿ, ಸನ್‌ರೈಸರ್ಸ್ ತಂಡದ ಗೆಲುವಿನ ನಿರೀಕ್ಷೆಯನ್ನು ಕೊನೆಗೊಳಿಸಿದರು. ಸೋಫಿಯಾ ಡಂಕ್ಲಿ 23 ಎಸೆತಗಳಲ್ಲಿ 41 ರನ್ ಗಳಿಸಿದರೆ, ಬೆತ್ ಮೂನಿ ಔಟಾಗದೆ 31 ರನ್ ಗಳಿಸಿದರು. ನಾಯಕಿ ಆಶ್ಲೀ ಗಾರ್ಡ್ನರ್ ಗೆಲುವಿನ ಬೌಂಡರಿ ಬಾರಿಸಿ ತಂಡಕ್ಕೆ ಎಂಟು ವಿಕೆಟ್‌ಗಳ ಐತಿಹಾಸಿಕ ಜಯ ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 pm, Sun, 16 August 26

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್