Champions Trophy 2025: ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂ. ಘೋಷಿಸಿದ ಐಸಿಸಿ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಭಾರತ ತಂಡ ಪಾಕ್​ಗೆ ತೆರಳಲಿದೆಯಾ ಎಂಬುದೇ ಈಗ ಪ್ರಶ್ನೆ.

Champions Trophy 2025: ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂ. ಘೋಷಿಸಿದ ಐಸಿಸಿ
Champions Trophy 2025
Follow us
|

Updated on: Aug 04, 2024 | 8:00 AM

2025ರ ಚಾಂಪಿಯನ್ಸ್ ಟ್ರೋಫಿಗಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) 544 ಕೋಟಿ ರೂ. ($ 65 ಮಿಲಿಯನ್) ಮೊತ್ತದ ಬಜೆಟ್ ಅನ್ನು ಅನುಮೋದಿಸಿದೆ ಎಂದು ಕ್ರಿಕ್​ಬಝ್ ವರದಿ ಮಾಡಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಈ ಟೂರ್ನಿಯ ಸಿದ್ಧತೆಗಳಿಗಾಗಿ ಹಾಗೂ ಪ್ರಶಸ್ತಿಗಳಿಗಾಗಿ ಈ ಮೊತ್ತವನ್ನು ವಿನಿಯೋಗಿಸಲಾಗುತ್ತದೆ.

ಕೊಲಂಬೊದಲ್ಲಿ ನಡೆದ ಐಸಿಸಿಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅನುಮೋದಿಸಲಾದ ಬಜೆಟ್​ನಲ್ಲಿ, ಪಂದ್ಯಾವಳಿಯ ಕಾರ್ಯಾಚರಣೆಗಳಿಗಾಗಿ ₹292 ಕೋಟಿ ರೂ. ($35 ಮಿಲಿಯನ್), ಬಹುಮಾನ ಮೊತ್ತಕ್ಕಾಗಿ ₹167 ಕೋಟಿ ರೂ. ($20 ಮಿಲಿಯನ್) ಮತ್ತು ಉತ್ಪಾದನಾ ವೆಚ್ಚಕ್ಕಾಗಿ ₹83 ಕೋಟಿ ರೂ. ($10 ಮಿಲಿಯನ್) ನಿಗದಿ ಮಾಡಲಾಗಿದೆ. ಅದರಂತೆ 544 ಕೋಟಿ ರೂ. ಬಜೆಟ್​ನಲ್ಲಿ ಮುಂಬರುವ ಚಾಂಪಿಯನ್ಸ್ ಟ್ರೋಫಿ ಜರುಗಲಿದೆ.

ಚಾಂಪಿಯನ್ಸ್ ಟ್ರೋಫಿ ಯಾವಾಗ ಶುರು?

ಚಾಂಪಿಯನ್ಸ್​ ಟ್ರೋಫಿ ಟೂರ್ನಿಗಾಗಿ ತಾತ್ಕಾಲಿಕ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮುಂದಿನ ವರ್ಷ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಆದರೆ ಈ ಟೂರ್ನಿಯಲ್ಲಿ ಭಾರತ ತಂಡ ಪಾಲ್ಗೊಳ್ಳಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ ಈ ಟೂರ್ನಿ ಪಾಕಿಸ್ತಾನದಲ್ಲಿ ನಡೆಯಲಿದ್ದು, ಪಾಕ್​ನಲ್ಲಿ ಟೂರ್ನಿ ಆಯೋಜನೆಗೊಳ್ಳುವುದಾದರೆ ಭಾರತ ತಂಡವು ಹಿಂದೆ ಸರಿಯುವ ಸಾಧ್ಯತೆಯಿದೆ.

ಭಾರತ ತಂಡ ಪಾಕ್​ಗೆ ತೆರಳಲಿದೆಯಾ?

2006 ರ ಬಳಿಕ ಭಾರತ ತಂಡವು ಪಾಕಿಸ್ತಾನಕ್ಕೆ ತೆರಳಿಲ್ಲ. ಆದರೆ ಮುಂದಿನ ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯಲಿರುವುದರಿಂದ ಇದೀಗ ಭಾರತ ತಂಡ ಪಾಕ್​ಗೆ ತೆರೆಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಐಸಿಸಿ ಟೂರ್ನಿಗಳನ್ನು ಸ್ಥಳಾಂತರಿಸಬೇಕಿದ್ದರೆ ನಿರ್ದಿಷ್ಠ ಕಾರಣಗಳಿರಬೇಕಾಗುತ್ತದೆ.

ಇಲ್ಲಿ ಬಿಸಿಸಿಐ ಟೂರ್ನಿಯನ್ನು ಸ್ಥಳಾಂತರಿಸಲು ಸುರಕ್ಷತೆಯ ಕಾರಣಗಳನ್ನು ನೀಡಿದರೂ, ಅದಕ್ಕೆ ಇತರೆ ಕ್ರಿಕೆಟ್ ಮಂಡಳಿಗಳೂ ಕೂಡ ಕೈ ಜೋಡಿಸಬೇಕಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಾಂಗ್ಲಾದೇಶ್, ಶ್ರೀಲಂಕಾ, ಅಫ್ಘಾನಿಸ್ತಾನ್, ಇಂಗ್ಲೆಂಡ್, ನ್ಯೂಝಿಲೆಂಡ್​ ತಂಡಗಳು ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಿದೆ.

ಇತ್ತ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿಯನ್ನು ಆಯೋಜಿಸಿದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿಗೆ ಹೆಚ್ಚಿನ ನಷ್ಟಯುಂಟಾಗುವ ಸಾಧ್ಯತೆಯಿದೆ. ಏಕೆಂದರೆ ಭಾರತದ ಪ್ರತಿ ಪಂದ್ಯಗಳಿಗೆ ಇತರೆ ತಂಡಗಳನ್ನು ಯುಎಇ ಅಥವಾ ಶ್ರೀಲಂಕಾಗೆ ಕಳುಹಿಸಬೇಕಾಗುತ್ತದೆ. ಈ ಸಮಸ್ಯೆಯನ್ನು ಪಾಕ್ ಕ್ರಿಕೆಟ್ ಮಂಡಳಿ ಐಸಿಸಿಯ ಮುಂದಿಡಲಿದೆ.

ಇದನ್ನೂ ಓದಿ: ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಇದರ ನಡುವೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಲಾಹೋರ್​ ಅನ್ನು ಕೇಂದ್ರೀಕರಿಸಿ ಭಾರತದ ಪಂದ್ಯಗಳನ್ನು ಆಯೋಜಿಸಲು ಪ್ಲ್ಯಾನ್ ರೂಪಿಸಿದೆ. ಈ ಮೂಲಕ ಟೀಮ್ ಇಂಡಿಯಾಗೆ ಎಲ್ಲಾ ರೀತಿಯ ಸುರಕ್ಷತೆಯನ್ನು ಒದಗಿಸಲಿದ್ದೇವೆ ಎಂಬ ವಾದವನ್ನು ಐಸಿಸಿ ಮುಂದಿಡಲಿದ್ದಾರೆ. ಹೀಗಾಗಿ 2025 ರ ಚಾಂಪಿಯನ್ಸ್ ಟ್ರೋಫಿಯನ್ನು ಸ್ಥಳಾಂತರಿಸಲು ಬಿಸಿಸಿಐ ಯಾವ ಕಾರಣಗಳನ್ನು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ