Shoaib Akhtar: ದರಿದ್ರ…ಒಬ್ಬನಿಗೂ ಮೆದುಳಿಲ್ಲ..ಪಾಕ್ ತಂಡದ ವಿರುದ್ಧ ಅಖ್ತರ್ ವಾಗ್ದಾಳಿ

T20 World Cup 2022: ಜಿಂಬಾಬ್ವೆ ವಿರುದ್ಧದ ಸೋಲಿನ ಬಗ್ಗೆ ನಿರಾಶೆ ವ್ಯಕ್ತಪಡಿಸಿರುವ ಅಖ್ತರ್, ಒಂದು ಸಾಧಾರಣ ತಂಡದ ವಿರುದ್ಧ ನಾವು ಸೋತಿದ್ದೇವೆ ಎಂದರೆ ಪಾಕ್ ತಂಡ ಹಳ್ಳ ಹಿಡೀತಿದೆ ಎಂದೇ ಅರ್ಥ.

Shoaib Akhtar: ದರಿದ್ರ...ಒಬ್ಬನಿಗೂ ಮೆದುಳಿಲ್ಲ..ಪಾಕ್ ತಂಡದ ವಿರುದ್ಧ ಅಖ್ತರ್ ವಾಗ್ದಾಳಿ
Shoaib Akhtar
Follow us
TV9 Web
| Updated By: ಝಾಹಿರ್ ಯೂಸುಫ್

Updated on:Oct 30, 2022 | 2:24 PM

T20 World Cup 2022:  ಟಿ20 ವಿಶ್ವಕಪ್​ನಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋತಿರುವ ಪಾಕಿಸ್ತಾನ್ (Pakistan) ತಂಡದ ವಿರುದ್ಧ ವಾಗ್ದಾಳಿ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ವಿರುದ್ಧ ರಣರೋಚಕವಾಗಿ ಪಂದ್ಯವಾಡಿದ್ದ ಪಾಕಿಸ್ತಾನ್, 2ನೇ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸೋಲನುಭವಿಸಿದೆ. ಇದರೊಂದಿಗೆ ಪಾಕ್ ತಂಡದ ಸೆಮಿಫೈನಲ್ ಕನಸು ಬಹುತೇಕ ಕಮರಿದೆ. ಇತ್ತ ಪಾಕ್ ತಂಡ ಸೋಲುತ್ತಿದ್ದಂತೆ ಅತ್ತ ಶೊಯೇಬ್ ಅಖ್ತರ್ ಟೀಮ್ ಆಯ್ಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮೊದಲೇ ಹೇಳಿದ್ದೇನೆ. ಪಾಕಿಸ್ತಾನ್ ತಂಡವು ಸೆಮಿಫೈನಲ್ ಪ್ರವೇಶಿಸುವುದಿಲ್ಲ ಎಂದು. ಏಕೆಂದರೆ ಅದು ಅತ್ಯಂತ ಕಳಪೆ ತಂಡ. ನಮ್ಮ ಮಧ್ಯಮ ಕ್ರಮಾಂಕವು ಬಲಿಷ್ಠವಾಗಿಲ್ಲ ಎಂಬುದನ್ನು ಈ ಹಿಂದೆ ಹೇಳಿದ್ದೇನೆ. ಇದೀಗ ಅದರ ಫಲಿತಾಂಶವನ್ನು ನೋಡುತ್ತಿದ್ದೇವೆ ಎಂದು ಅಖ್ತರ್ ಹೇಳಿದ್ದಾರೆ.

ಒಂದು ತಂಡವು ಕೇವಲ ಆರಂಭಿಕರು ಮತ್ತು ಮಧ್ಯಮ ಕ್ರಮಾಂಕದ ಆಟಗಾರರಿಂದ ಗೆಲ್ಲುವುದು ಅಸಾಧ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಪಾಕ್ ತಂಡದ ನಾಯಕ ಬಾಬರ್ ಆಜಂ 3ನೇ ಕ್ರಮಾಂಕದಲ್ಲಿ ಆಡಬೇಕು. ಆದರೆ ಈ ಮಾತನ್ನು ಆತ ಕೇಳುವುದೇ ಇಲ್ಲ ಎಂದು ಅಖ್ತರ್ ಬಾಬರ್ ವಿರುದ್ಧ ಕೂಡ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ
Image
Virat Kohli: ಒಂದಲ್ಲ, ಎರಡಲ್ಲ…ಹಲವು ವಿಶ್ವ ದಾಖಲೆಗಳನ್ನು ಉಡೀಸ್ ಮಾಡಿದ ಕಿಂಗ್ ಕೊಹ್ಲಿ
Image
India vs Pakistan: ಪಾಕ್​ನ ಬಗ್ಗು ಬಡಿದು ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
IND vs PAK: ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ರೋಹಿತ್ ಶರ್ಮಾ
Image
India vs Pakistan: ಹೊಸ ದಾಖಲೆ ನಿರ್ಮಿಸಿದ ದಿನೇಶ್ ಕಾರ್ತಿಕ್

ಇನ್ನು ಜಿಂಬಾಬ್ವೆ ವಿರುದ್ಧದ ಸೋಲಿನ ಬಗ್ಗೆ ನಿರಾಶೆ ವ್ಯಕ್ತಪಡಿಸಿರುವ ಅಖ್ತರ್, ಒಂದು ಸಾಧಾರಣ ತಂಡದ ವಿರುದ್ಧ ನಾವು ಸೋತಿದ್ದೇವೆ ಎಂದರೆ ಪಾಕ್ ತಂಡ ಹಳ್ಳ ಹಿಡೀತಿದೆ ಎಂದೇ ಅರ್ಥ. ಹೀಗಾಗಿ ಹುಷಾರಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಇಂತಹದೊಂದು ಕಳಪೆ ತಂಡವನ್ನು ಆಯ್ಕೆ ಮಾಡಿರುವ ಪಾಕಿಸ್ತಾನ್ ಕ್ರಿಕೆಟ್​ ಬೋರ್ಡ್​ನಲ್ಲಿರುವ ಯಾರಿಗೂ ಮೆದುಳೇ ಇಲ್ಲ. ದರಿದ್ರ ಆಯ್ಕೆ. ಇಂತಹ ಕಳಪೆ ಟೀಮ್ ಅನ್ನು ಆಯ್ಕೆ ಮಾಡಿದರ ಬಗ್ಗೆ ಇನ್ನೇನು ಹೇಳಲು ಸಾಧ್ಯ ಎಂದು ಶೊಯೇಬ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಟ್ಟಿನಲ್ಲಿ ಟೀಮ್ ಇಂಡಿಯಾ ವಿರುದ್ಧದ ಸೋಲಿಗಿಂತ, ಜಿಂಬಾಬ್ವೆ ವಿರುದ್ಧದ ಪಾಕ್ ತಂಡದ ಸೋಲಿಗೆ ಇದೀಗ ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಆಯ್ಕೆ ಸಮಿತಿ ವಿರುದ್ಧ ಕೂಡ ಟೀಕೆಗಳು ಕೇಳಿ ಬರುತ್ತಿದ್ದು, ಹೀಗಾಗಿ ಟಿ20 ವಿಶ್ವಕಪ್ ಬಳಿಕ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬಂದರೂ ಅಚ್ಚರಿಪಡಬೇಕಿಲ್ಲ.

Published On - 2:24 pm, Sun, 30 October 22

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ