ಅಭ್ಯಾಸಕ್ಕೆ ಆಗಮಿಸಿದ ವಿರಾಟ್ ಕೊಹ್ಲಿಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ..!
India vs England, 2nd ODI: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯವು ಇಂದು (ಫೆ.9) ಬಾರಾಬತಿ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ಗಳ ಜಯ ಸಾಧಿಸಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ವಶಪಡಿಸಿಕೊಳ್ಳಬಹುದು.

ಭಾರತ ಮತ್ತು ಇಂಗ್ಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯವು ಇಂದು (ಫೆ.9) ನಡೆಯಲಿದೆ. ಕಟಕ್ನ ಬಾರಾಬತಿ ಕ್ರೀಡಾಂಗಣದಲ್ಲಿ ಜರುಗಲಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಮೊಣಕಾಲು ನೋವಿನ ಕಾರಣ ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ಕೊಹ್ಲಿ ಇದೀಗ ಸಂಪೂರ್ಣ ಫಿಟ್ನೆಸ್ ಸಾಧಿಸಿದ್ದು, ಅದರಂತೆ ಶನಿವಾರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.
ಹೀಗೆ ಅಭ್ಯಾಸಕ್ಕೆ ಆಗಮಿಸಿದ ಕಿಂಗ್ ಕೊಹ್ಲಿಯನ್ನು ಅಭಿಮಾನಿಗಳು ಹರ್ಷೋದ್ಘಾರದೊಂದಿಗೆ ಸ್ವಾಗತಿಸಿದ್ದು ವಿಶೇಷವಾಗಿತ್ತು. ಬಾರಾಬತಿ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಅಭ್ಯಾಸ ನಡೆಸುತ್ತಿರುವುದನ್ನು ವೀಕ್ಷಿಸಲು ಕೆಲ ಗೇಟ್ಗಳನ್ನು ಓಪನ್ ಮಾಡಲಾಗಿತ್ತು.
ಇತ್ತ ಭಾರತೀಯ ಆಟಗಾರರ ಕಸರತ್ತನ್ನು ವೀಕ್ಷಿಸಲು ಸ್ಟೇಡಿಯಂಗೆ ಅಭಿಮಾನಿಗಳ ದಂಡೇ ಆಗಮಿಸಿದೆ. ಅದರಲ್ಲೂ ಕಿಂಗ್ ಕೊಹ್ಲಿಯ ಫ್ಯಾನ್ಸ್ ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಇದಾಗ್ಯೂ ವಿರಾಟ್ ಕೊಹ್ಲಿ ಶನಿವಾರ ಅಭ್ಯಾಸ ಮಾಡಲಿದ್ದಾರಾ ಎಂಬುದರ ಬಗ್ಗೆ ಯಾವುದೇ ಖಚಿತತೆ ಇರಲಿಲ್ಲ.
ಹೀಗಾಗಿ ವಿರಾಟ್ ಕೊಹ್ಲಿ ಆಗಮನಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದರು. ಈ ಕಾಯುವಿಕೆಗೆ ನಿರಾಸೆಯಾಗಲಿಲ್ಲ. ಟೀಮ್ ಇಂಡಿಯಾ ಅಭ್ಯಾಸ ಆರಂಭಿಸಿದ ಕೆಲ ಹೊತ್ತಿನ ಬಳಿಕ ಕಿಂಗ್ ಕೊಹ್ಲಿಯ ಎಂಟ್ರಿಯಾಗಿದೆ. ಇತ್ತ ವಿರಾಟ್ ಕೊಹ್ಲಿ ಆಗಮಿಸುತ್ತಿದ್ದಂತೆ ಅಭಿಮಾನಿಗಳು ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಇದೀಗ ವಿರಾಟ್ ಕೊಹ್ಲಿ ಅಭಿಮಾನಿಗಳ ಭರ್ಜರಿ ಸ್ವಾಗತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ವಿರಾಟ್ ಕೊಹ್ಲಿಯ ಕ್ರೇಝ್:
The Roar for Virat Kohli when entered in the stadium for practice in Cuttack today.🔥
– THE CRAZE OF KING KOHLI..!!!! 🐐 pic.twitter.com/kdFc7uqfDH
— Tanuj Singh (@ImTanujSingh) February 8, 2025
ಎಷ್ಟು ಗಂಟೆಗೆ ಪಂದ್ಯ?
ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಏಕದಿನ ಪಂದ್ಯವು ಮಧ್ಯಾಹ್ನ 1.30 ಕ್ಕೆ ಶುರುವಾಗಲಿದೆ. ಅದಕ್ಕೂ ಮುನ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ಜರುಗಲಿದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ಹಾಗೂ ಡಿಸ್ನಿ ಹಾಟ್ಸ್ಟಾರ್ ಆ್ಯಪ್ ಮತ್ತು ವೆಬ್ಸೈಟ್ನಲ್ಲಿ ಲೈವ್ ವೀಕ್ಷಿಸಬಹುದು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.
ಇದನ್ನೂ ಓದಿ: ಭಾರತದಲ್ಲಿ ಇತಿಹಾಸ ನಿರ್ಮಿಸಿದ ಜೇಕಬ್ ಬೆಥೆಲ್
ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಜೇಕೊಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಬೆನ್ ಡಕೆಟ್, ಜೇಮೀ ಓವರ್ಟನ್, ಜಾಮಿ ಸ್ಮಿತ್, ಲಿಯಾಮ್ ಲಿವಿಂಗ್ಸ್ಟೋನ್, ಆದಿಲ್ ರಶೀದ್, ಜೋ ರೂಟ್, ಸಾಕಿಬ್ ಮಹಮೂದ್, ಫಿಲ್ ಸಾಲ್ಟ್, ಮಾರ್ಕ್ ವುಡ್.
Published On - 7:53 am, Sun, 9 February 25