ಸರ್ಫರಾಝ್ ಖಾನ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ, ರಿಷಭ್ ಪಂತ್

ಸರ್ಫರಾಝ್ ಖಾನ್ ಹಿಡಿದ ಕ್ಯಾಚ್ ನೋಡಿ ಬಿದ್ದು ಬಿದ್ದು ನಕ್ಕಿದ ವಿರಾಟ್ ಕೊಹ್ಲಿ, ರಿಷಭ್ ಪಂತ್

ಝಾಹಿರ್ ಯೂಸುಫ್
|

Updated on:Nov 20, 2024 | 8:21 AM

Border-Gavaskar Trophy 2024: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳು ನಡೆಯಲಿದೆ. ವಿಶೇಷ ಎಂದರೆ ಈ ಸರಣಿಯಲ್ಲಿ 4-0 ಅಂತರದಿಂದ ಗೆದ್ದರೆ ಮಾತ್ರ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಭಾರತೀಯ ಆಟಗಾರರು ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲೂ ಮಂಗಳವಾರ ಕೆಲ ಆಟಗಾರರು ಫೀಲ್ಡಿಂಗ್ ಅಭ್ಯಾಸ ನಡೆಸಿದ್ದರು. ಇದೇ ವೇಳೆ ವಿಕೆಟ್ ಕೀಪರ್ ರಿಷಭ್ ಪಂತ್ ಜೊತೆ ವಿರಾಟ್ ಕೊಹ್ಲಿ, ಧ್ರುವ್ ಜುರೇಲ್ ಹಾಗೂ ಸರ್ಫರಾಝ್ ಖಾನ್ ಸ್ಲಿಪ್ ಫೀಲ್ಡಿಂಗ್​ ಅಭ್ಯಾಸ ನಡೆಸುತ್ತಿರುವುದು ಕಂಡು ಬಂದಿದೆ. ಇದರ ನಡುವೆ ಸರ್ಫರಾಝ್ ಖಾನ್ ಹಿಡಿದ ಕ್ಯಾಚ್ ನೋಡಿ ಸಹ ಆಟಗಾರರಿಗೆ ನಗು ತಡೆಯಲಾಗಲಿಲ್ಲ.

ಮೇಲ್ಮುಖವಾಗಿ ಸಾಗಿ ಬಂದ ಚೆಂಡನ್ನು ಸರ್ಫರಾಝ್ ಖಾನ್ ವಿಚಿತ್ರವಾಗಿ ಹಿಡಿದರು. ಇದನ್ನು ನೋಡುತ್ತಿದ್ದಂತೆ ವಿಕೆಟ್ ಕೀಪರ್ ರಿಷಭ್ ಪಂತ್ ಬಿದ್ದು ಬಿದ್ದು ನಗಲಾರಂಭಿಸಿದರು. ಅತ್ತ ವಿರಾಟ್ ಕೊಹ್ಲಿ ಹಾಗೂ ಧ್ರುವ್ ಜುರೇಲ್ ಕೂಡ ನಗು ತಡೆಯಲಾಗಲಿಲ್ಲ. ಇದೀಗ ಈ ಕ್ಯಾಚ್ ವಿಡಿಯೋ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಅಂದಹಾಗೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದೆ. ಈ ಸರಣಿ ಮೊದಲ ಪಂದ್ಯವು ನವೆಂಬರ್ 22 ರಿಂದ ಪರ್ತ್​ನಲ್ಲಿ ಆರಂಭವಾದರೆ, ಡಿಸೆಂಬರ್ 6 ರಿಂದ ಶುರುವಾಗಲಿರುವ 2ನೇ ಪಂದ್ಯ ಅಡಿಲೇಡ್ ನಲ್ಲಿ ನಡೆಯಲಿದೆ. ಹಾಗೆಯೇ 3ನೇ ಪಂದ್ಯ ಡಿಸೆಂಬರ್ 14 ರಿಂದ ಬ್ರಿಸ್ಬೇನ್ ನಲ್ಲಿ ಜರುಗಲಿದೆ. ಡಿಸೆಂಬರ್ 26 ರಿಂದ ಮೆಲ್ಬೋರ್ನ್​ನಲ್ಲಿ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದ್ದು, ಸಿಡ್ನಿಯಲ್ಲಿ ಜರುಗಲಿರುವ ಕೊನೆಯ ಟೆಸ್ಟ್ ಪಂದ್ಯ ಜನವರಿ 3 ರಿಂದ ಆರಂಭವಾಗಲಿದೆ.

ಇನ್ನು ಈ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಸರಣಿಯಲ್ಲಿ 4-0 ಅಂತರದಿಂದ ಗೆದ್ದರೆ ಮಾತ್ರ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ನೇರವಾಗಿ ಫೈನಲ್​ಗೇರಬಹುದು. ಹೀಗಾಗಿಯೇ ಈ ಬಾರಿಯ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಯಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

 

 

Published on: Nov 20, 2024 07:53 AM