WTC Points Table: ಗೆದ್ದು ಬೀಗಿದರೂ ಪಾಯಿಂಟ್ಸ್ ಟೇಬಲ್​ನಲ್ಲಿ ಹಿಂದೆ ಉಳಿದ ಇಂಗ್ಲೆಂಡ್..!

The World Test Championship: 2021 ರಿಂದ 2023 ರವರೆಗೆ ನಡೆಯಲಿರುವ ಪ್ರಮುಖ ದೇಶಗಳ ಪಂದ್ಯಗಳ ಫಲಿತಾಂಶದ ಮೇಲೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ನಡೆಯುತ್ತಿದೆ.

WTC Points Table: ಗೆದ್ದು ಬೀಗಿದರೂ ಪಾಯಿಂಟ್ಸ್ ಟೇಬಲ್​ನಲ್ಲಿ ಹಿಂದೆ ಉಳಿದ ಇಂಗ್ಲೆಂಡ್..!
England Vs New Zealand
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 16, 2022 | 12:00 PM

ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಎರಡನೇ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಇಂಗ್ಲೆಂಡ್ (England Vs New Zealand) ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಎರಡು ಗೆಲುವುಗಳ ಬಳಿಕ ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್​ ಟೇಬಲ್​ನಲ್ಲಿ ಇಂಗ್ಲೆಂಡ್ ತಂಡದ ಸ್ಥಾನದಲ್ಲಿ ಮಹತ್ವದ ಬದಲಾವಣೆಯಾಗಿಲ್ಲ ಎಂಬುದು ವಿಶೇಷ. ಅಂದರೆ 2 ಗೆಲುವಿನ ಹೊರತಾಗಿಯೂ ಈಗಲೂ ಇಂಗ್ಲೆಂಡ್ ತಂಡ ಪಾಯಿಂಟ್ಸ್​ ಟೇಬಲ್​ನಲ್ಲಿ 8ನೇ ಸ್ಥಾನದಲ್ಲೇ ಉಳಿದಿದೆ. ಏಕೆಂದರೆ ಈ ಬಾರಿ ಟೆಸ್ಟ್ ಚಾಂಪಿಯನ್​ಶಿಪ್​ನ 15 ಪಂದ್ಯಗಳನ್ನು ಆಡಿರುವ ಇಂಗ್ಲೆಂಡ್ ಗೆದ್ದಿದ್ದು ಕೇವಲ 3 ಪಂದ್ಯಗಳಲ್ಲಿ ಮಾತ್ರ. ಹೀಗಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಹಿಂದೆ ಉಳಿದುಕೊಂಡಿದೆ.

ಸದ್ಯ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಕಳೆದೊಂದು ವರ್ಷದಲ್ಲಿ 8 ಪಂದ್ಯಗಳಲ್ಲಿ 5 ಜಯ, 3 ಡ್ರಾ ಸಾಧಿಸಿರುವ ಆಸ್ಟ್ರೇಲಿಯಾ ತಂಡವು 72 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದರೆ, 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿರುವ ಸೌತ್ ಆಫ್ರಿಕಾ ತಂಡವು 60 ಪಾಯಿಂಟ್ಸ್​ನೊಂದಿಗೆ 2ನೇ ಸ್ಥಾನದಲ್ಲಿದೆ. ಹಾಗೆಯೇ ಮೂರನೇ ಸ್ಥಾನದಲ್ಲಿ ಟೀಮ್ ಇಂಡಿಯಾ ಇದ್ದು, ಭಾರತ ತಂಡವು 12 ಪಂದ್ಯಗಳಲ್ಲಿ 6 ಗೆಲುವು, 2 ಡ್ರಾ ಸಾಧಿಸಿ 77 ಅಂಕ ಪಡೆದುಕೊಂಡಿದೆ.

ಶ್ರೀಲಂಕಾ ತಂಡವು 4ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ್ ತಂಡವು 5ನೇ ಸ್ಥಾನ ಅಲಂಕರಿಸಿದೆ. ಹಾಗೆಯೇ ಆರನೇ ಸ್ಥಾನದಲ್ಲಿ ವೆಸ್ಟ್ ಇಂಡೀಸ್ ಇದ್ದು, 7ನೇ ಸ್ಥಾನದಲ್ಲಿ ಹಾಲಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ವಿನ್ನರ್ ನ್ಯೂಜಿಲೆಂಡ್ ತಂಡವಿದೆ. 8ನೇ ಸ್ಥಾನವನ್ನು ಇಂಗ್ಲೆಂಡ್ ಅಲಂಕರಿಸಿದರೆ, ಕೊನೆಯ ಸ್ಥಾನದಲ್ಲಿ ಬಾಂಗ್ಲಾದೇಶ ತಂಡವಿದೆ.

ಇದನ್ನೂ ಓದಿ
Image
On This Day: ಏಕದಿನ ವಿಶ್ವಕಪ್​: ಕೇವಲ 45 ರನ್​ಗೆ ಆಲೌಟ್..!
Image
Heinrich Klaasen: ಬಡವರ ಧೋನಿ, RCB ಆಟಗಾರ…ಯಾರು ಈ ಹೆನ್ರಿಕ್ ಕ್ಲಾಸೆನ್..?
Image
Hardik Pandya: ದಿನೇಶ್ ಕಾರ್ತಿಕ್ ವಿರುದ್ದ ಸೇಡು ತೀರಿಸಿಕೊಂಡ್ರಾ ಹಾರ್ದಿಕ್ ಪಾಂಡ್ಯ?
Image
Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

ಏನಿದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​?

2021 ರಿಂದ 2023 ರವರೆಗೆ ನಡೆಯಲಿರುವ ಪ್ರಮುಖ ದೇಶಗಳ ಪಂದ್ಯಗಳ ಫಲಿತಾಂಶದ ಮೇಲೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ನಡೆಯುತ್ತಿದೆ. ಇಲ್ಲಿ ಒಟ್ಟು 9 ಟೆಸ್ಟ್ ಆಡುವ ರಾಷ್ಟ್ರಗಳು ಕಾಣಿಸಿಕೊಳ್ಳುತ್ತಿದ್ದು, ಅದರಂತೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಎರಡು ಸ್ಥಾನ ಪಡೆಯುವ ತಂಡಗಳು ಫೈನಲ್ ಆಡಲಿದೆ. ಆದರೆ ಇಲ್ಲಿ ಗೆಲುವಿನ ಶೇಕಡಾವಾರು (ಪರ್ಸಂಟೇಜ್) ಮೇಲೆ ಪಾಯಿಂಟ್ಸ್​ ಟೇಬಲ್​ನಲ್ಲಿ ಸ್ಥಾನ ನಿಗದಿಯಾಗಲಿದೆ. ಅದರಂತೆ ಗೆಲುವುಗಳ ಸಂಖ್ಯೆ, ಡ್ರಾ ಪಂದ್ಯಗಳ ಸಂಖ್ಯೆ ಕೂಡ ಇಲ್ಲಿ ಗಣನೆಗೆ ಬರಲಿದೆ. ಇದರಿಂದ ಹೆಚ್ಚು ಪಂದ್ಯ ಗೆದ್ದ ತಂಡ ಅಧಿಕ ಪಾಯಿಂಟ್ ಪಡೆದರೂ, ಗೆಲುವು ಹಾಗೂ ಡ್ರಾ ಸಾಧಿಸಿದ ತಂಡ ಪಾಯಿಂಟ್ ಟೇಬಲ್​ನಲ್ಲಿ ಮೇಲೇರಬಹುದು.

ಅಂದರೆ ಇಲ್ಲಿ ಪ್ರತಿ ಪಂದ್ಯಕ್ಕೆ 12 ಅಂಕ ನಿಗದಿಪಡಿಸಲಾಗಿದೆ. ಹಾಗೆಯೇ ಪಂದ್ಯ ಟೈ ಆದರೆ 6 ಅಂಕ ಹಾಗೂ ಪಂದ್ಯ ಡ್ರಾ ಆದರೆ 4 ಅಂಕ ನೀಡಲಾಗುತ್ತದೆ. ಇದರಿಂದ ಸರಣಿಗಳ ಪಂದ್ಯಾವಳಿಯ ಲೆಕ್ಕಚಾರ ಸಮಗೊಳ್ಳಲಿದೆ. ಇಲ್ಲಿ ಗೆದ್ದ ಪಂದ್ಯಗಳಿಗೆ ಮತ್ತು ಡ್ರಾ ಪಂದ್ಯಗಳಿಗೆ ಅನುಸಾರವಾಗಿ ಶೇಕಡಾವಾರಿನಂತೆ ತಂಡಗಳು ಪಾಯಿಂಟ್ಸ್​ ಟೇಬಲ್​ನಲ್ಲಿ ರ್‍ಯಾಂಕ್ ಪಡೆದುಕೊಳ್ಳುತ್ತವೆ. ಇದರಿಂದ ಪಂದ್ಯಗಳಿಗೆ ಅಥವಾ ಸರಣಿಗೆ ಅನುಸಾರವಾಗಿ ಶ್ರೇಯಾಂಕ ಪಟ್ಟಿ ಬದಲಾಗಬಹುದು. ಅಲ್ಲದೆ ಪಾಯಿಂಟ್ ಟೇಬಲ್​ನಲ್ಲೂ ಪಂದ್ಯಕ್ಕನುಸಾರವಾಗಿ ಪೈಪೋಟಿ ಕಂಡು ಬರಲಿದೆ. ಅಂತಿಮವಾಗಿ ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆಯುವ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯವಾಡಲಿದೆ.

ಎಷ್ಟು ಪಂದ್ಯ ನಡೆಯಲಿದೆ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ 2021 ರಿಂದ 2023 ರ ಒಳಗೆ ಒಂದು ತಂಡವು ಒಟ್ಟು 6 ಟೆಸ್ಟ್​ ಸರಣಿಗಳನ್ನು ಆಡಲಿದೆ. ಇದರಲ್ಲಿ ಮೂರು ಟೆಸ್ಟ್ ಸರಣಿ ತವರಿನಲ್ಲಿ ನಡೆದರೆ ಮತ್ತು ಮೂರು ವಿದೇಶಿ ಸರಣಿಗಳನ್ನು ಆಡಲಿದೆ. ಭಾರತ ತಂಡವು ನ್ಯೂಜಿಲೆಂಡ್, ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ತಂಡಗಳನ್ನು ತಮ್ಮ ಮನೆಯಲ್ಲಿ ಎದುರಿಸಲಿದೆ. ಹಾಗೆಯೇ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಪ್ರವಾಸ ಸರಣಿ ಆಡಲಿದೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.