Duleep Trophy 2024: ದುಲೀಪ್ ಟ್ರೋಫಿಯಿಂದ ಹಲವು ಸ್ಟಾರ್ ಆಟಗಾರರಿಗೆ ಕೋಕ್ ನೀಡಿದ ಬಿಸಿಸಿಐ

Duleep Trophy 2024: ದುಲೀಪ್ ಟ್ರೋಫಿಯಿಂದ ಟೀಂ ಇಂಡಿಯಾದ ಮಾಜಿ ಹಾಗೂ ಹಾಲಿ ಆಟಗಾರನನ್ನು ಹೊರಗಿಡಲಾಗಿದೆ. ಅವರಲ್ಲಿ ಅಜಿಂಕ್ಯ ರಹಾನೆ, ಅಭಿಷೇಕ್ ಶರ್ಮಾ, ವೆಂಕಟೇಶ್ ಅಯ್ಯರ್, ಪೃಥ್ವಿ ಶಾ, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಮತ್ತು ರಿಂಕು ಸಿಂಗ್ ಅವರಂತಹ ಸ್ಟಾರ್ ಬ್ಯಾಟ್ಸ್‌ಮನ್‌ಗಳೂ ಸೇರಿದ್ದಾರೆ.

Duleep Trophy 2024: ದುಲೀಪ್ ಟ್ರೋಫಿಯಿಂದ ಹಲವು ಸ್ಟಾರ್ ಆಟಗಾರರಿಗೆ ಕೋಕ್ ನೀಡಿದ ಬಿಸಿಸಿಐ
ಟೀಂ ಇಂಡಿಯಾ ಕ್ರಿಕೆಟಿಗರು
Follow us
ಪೃಥ್ವಿಶಂಕರ
|

Updated on: Aug 16, 2024 | 10:39 PM

ಭಾರತದ ದೇಶೀಯ ಟೂರ್ನಿ ದುಲೀಪ್ ಟ್ರೋಫಿ ಇದೇ ಸೆಪ್ಟೆಂಬರ್‌ 5 ರಿಂದ ಪ್ರಾರಂಭವಾಗಲಿದೆ. ದುಲೀಪ್ ಟ್ರೋಫಿಗೆ ಈಗಾಗಲೇ ನಾಲ್ಕು ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ. ಈ ಬಾರಿ ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಶುಭ್​ಮನ್ ಗಿಲ್, ಕುಲ್​ದೀಪ್ ಯಾದವ್ ಅವರಂತಹ ಸ್ಟಾರ್ ಆಟಗಾರರು ಕೂಡ ಈ ಟೂರ್ನಿಯಲ್ಲಿ ಆಡುವುದನ್ನು ಕಾಣಬಹುದಾಗಿದೆ. ಇವರಲ್ಲದೇ ಹಲವು ಯುವ ಆಟಗಾರರಿಗೂ ಅವಕಾಶ ಸಿಕ್ಕಿದೆ. ಆದರೆ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ ಅವರಂತಹ ಯುವ ಹಾಗೂ ಅನುಭವಿ ಆಟಗಾರರಿಗೆ ಈ ಟೂರ್ನಿಯಲ್ಲಿ ಅವಕಾಶ ಸಿಗದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹಿರಿಯ ಆಟಗಾರರಿಗೆ ವಿಶ್ರಾಂತಿ

ವಾಸ್ತವವಾಗಿ ದುಲೀಪ್ ಟ್ರೋಫಿಯಿಂದ ಟೀಂ ಇಂಡಿಯಾದ ಹಲವು ಅನುಭವಿ ಆಟಗಾರರಿಗೆ ಬಿಸಿಸಿಐ ವಿಶ್ರಾಂತಿ ನೀಡಿದೆ. ಇವರಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಆರ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಆಟಗಾರರು ಸೇರಿದ್ದಾರೆ. ಟೀಂ ಇಂಡಿಯಾ ಮುಂದಿನ ಕೆಲವು ತಿಂಗಳುಗಳಲ್ಲಿ 10 ಟೆಸ್ಟ್ ಪಂದ್ಯಗಳನ್ನು ಆಡಬೇಕಿದೆ. ಈ ಅವಧಿಯಲ್ಲಿ ಟೀಂ ಇಂಡಿಯಾ, ಆಸ್ಟ್ರೇಲಿಯಾ ಪ್ರವಾಸವನ್ನೂ ಕೈಗೊಳ್ಳಬೇಕಿದೆ. ಹೀಗಾಗಿ ಈ ಅನುಭವಿಗಳನ್ನು ಇಂಜುರಿಯಿಂದ ದೂರವಿಡಲು ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿದೆ. ಆದರೆ ಇವರ ಹೊರತಾಗಿಯೂ ಇನ್ನು ಕೆಲವು ಆಟಗಾರನನ್ನು ಈ ಟೂರ್ನಿಯಿಂದ ಹೊರಗಿಡಲಾಗಿದೆ.

ಹಲವು ಸ್ಟಾರ್ ಆಟಗಾರರಿಗೆ ಅವಕಾಶ ಸಿಗಲಿಲ್ಲ

ಮೇಲೆ ಹೇಳಿದಂತೆ ಈ ದೇಶೀ ಟೂರ್ನಿಯಿಂದ ಟೀಂ ಇಂಡಿಯಾದ ಮಾಜಿ ಹಾಗೂ ಹಾಲಿ ಆಟಗಾರನನ್ನು ಹೊರಗಿಡಲಾಗಿದೆ. ಅವರಲ್ಲಿ ಅಜಿಂಕ್ಯ ರಹಾನೆ, ಅಭಿಷೇಕ್ ಶರ್ಮಾ, ವೆಂಕಟೇಶ್ ಅಯ್ಯರ್, ಪೃಥ್ವಿ ಶಾ, ಚೇತೇಶ್ವರ ಪೂಜಾರ, ಹನುಮ ವಿಹಾರಿ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) ಮತ್ತು ರಿಂಕು ಸಿಂಗ್ ಅವರಂತಹ ಸ್ಟಾರ್ ಬ್ಯಾಟ್ಸ್‌ಮನ್‌ಗಳೂ ಸೇರಿದ್ದಾರೆ. ಇನ್ನು ಮುಂದೆ ರಹಾನೆ ಮತ್ತು ಪೂಜಾರರನ್ನು ತಮ್ಮ ಭವಿಷ್ಯದ ಯೋಜನೆಗಳಲ್ಲಿ ನೋಡುವುದಿಲ್ಲ ಎಂದು ಆಯ್ಕೆಗಾರರು ಈಗಾಗಲೇ ಸೂಚಿಸಿದ್ದಾರೆ. ಆದರೆ, ರಿಂಕು ಸಿಂಗ್ ಹಾಗೂ ಸಂಜು ಸ್ಯಾಮ್ಸನ್ ಗೆ ಅವಕಾಶ ಸಿಗದಿರುವುದು ಅಚ್ಚರಿ ಮೂಡಿಸಿದೆ.

ರಿಂಕು ಸಿಂಗ್ 47 ಪ್ರಥಮ ದರ್ಜೆ ಪಂದ್ಯಗಳಲ್ಲಿ 54.70 ಸರಾಸರಿಯಲ್ಲಿ 3173 ರನ್ ಗಳಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ಲಯನ್ಸ್ ವಿರುದ್ಧದ ನಾಲ್ಕು ದಿನಗಳ ಪಂದ್ಯಕ್ಕಾಗಿ ಅವರನ್ನು ಭಾರತ ಎ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಸಂಜು ಸ್ಯಾಮ್ಸನ್ ಬಗ್ಗೆ ಮಾತನಾಡುವುದಾದರೆ, ಅವರು 62 ಪ್ರಥಮ ದರ್ಜೆ ಪಂದ್ಯಗಳಲ್ಲಿ 38.54 ಸರಾಸರಿಯಲ್ಲಿ 3623 ರನ್ ಗಳಿಸಿದ್ದಾರೆ.

ಇನ್ನು ಪೃಥ್ವಿ ಶಾ ಬಗ್ಗೆ ಮಾತನಾಡುವುದಾದರೆ, ಅವರು ಪ್ರಸ್ತುತ ಇಂಗ್ಲೆಂಡ್‌ನ ನಾರ್ಥಾಂಪ್ಟನ್‌ಶೈರ್ ಕ್ಲಬ್‌ ಪರ ಆಡುತ್ತಿದ್ದಾರೆ. ವೆಂಕಟೇಶ್ ಅಯ್ಯರ್ ಕೂಡ ಏಕದಿನ ಕಪ್​ನಲ್ಲಿ ಆಡುತ್ತಿದ್ದಾರೆ. ಬಿಸಿಸಿಐ ಪ್ರಸ್ತುತ ಶಿವಂ ದುಬೆ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರನ್ನು ಭವಿಷ್ಯದ ಆಲ್‌ರೌಂಡರ್‌ಗಳಾಗಿ ಸಿದ್ಧಪಡಿಸಲು ಬಯಸಿದೆ. ಹಾಗಿದ್ದರೂ ಈ ಎಲ್ಲಾ ಆಟಗಾರರಿಗೆ ದೇಶೀ ಟೂರ್ನಿಯಲ್ಲಿ ಅವಕಾಶ ನೀಡಲಾಗಿಲ್ಲ.

ಈ ಬೌಲರ್‌ಗಳಿಗೂ ಅವಕಾಶ ಸಿಕ್ಕಿಲ್ಲ

ಹಿರಿಯ ಬೌಲರ್‌ಗಳಾದ ಉಮೇಶ್ ಯಾದವ್, ಜಯಂತ್ ಯಾದವ್, ನವದೀಪ್ ಸೈನಿ ಮತ್ತು ಜಯದೇವ್ ಉನದ್ಕಟ್ ಅವರಿಗೂ ದುಲೀಪ್ ಟ್ರೋಫಿಯಲ್ಲಿ ಅವಕಾಶ ಸಿಕ್ಕಿಲ್ಲ. ಜಯಂತ್ ಕೊನೆಯ ಬಾರಿಗೆ 2021 ರಲ್ಲಿ ಭಾರತದ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದರು. ರಣಜಿಯಲ್ಲೂ ಅವರ ಪ್ರದರ್ಶನ ಉತ್ತಮವಾಗಿತ್ತು. ಇದಾದ ಬಳಿಕವೂ ಅವರಿಗೆ ಅವಕಾಶ ಸಿಕ್ಕಿಲ್ಲ. ಇತ್ತ ರಣಜಿ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಉಮೇಶ್ ಅವರನ್ನು ಕಡೆಗಣಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ