IPL 2024: ಕಳೆದ ವರ್ಷ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಈ 3 ಆಟಗಾರರು ಈ ವರ್ಷ ಹೀರೋ

3 Players Whose Career saved by IPL 2024: ಕಳೆದ ಸೀಸನ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿ ಇನ್ನೇನು ಇವರ ಕೆರಿಯರ್ ಅಂತ್ಯವಾಗುತ್ತೆ ಎಂದು ಹೇಳಲಾಗುತ್ತಿದ್ದ ಈ ಮೂವರು ಆಟಗಾರರು ಐಪಿಎಲ್ 2024 ರಲ್ಲಿ ಬೊಂಬಾಟ್ ಪ್ರದರ್ಶನ ತೋರಿ ಕಮ್​ಬ್ಯಾಕ್ ಮಾಡಿದ್ದಾರೆ.

IPL 2024: ಕಳೆದ ವರ್ಷ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಈ 3 ಆಟಗಾರರು ಈ ವರ್ಷ ಹೀರೋ
Yash Dayal, Parag and Khaleel
Follow us
Vinay Bhat
|

Updated on:May 21, 2024 | 8:01 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) 17ನೇ ಆವೃತ್ತಿ ಅಂತಿಮ ಹಂತಕ್ಕೆ ಬಂದು ನಿಂತಿದೆ. ಪ್ಲೇ ಆಫ್ ಪಂದ್ಯಗಳಿಗೆ ಇಂದು ಚಾಲನೆ ಸಿಗಲಿದ್ದು, ಮೊದಲ ಕ್ವಾಲಿಫೈಯರ್​ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿ ಆಗಲಿವೆ. ಈ ಬಾರಿಯ ಐಪಿಎಲ್​ನಲ್ಲಿ ಹೆಚ್ಚಿನ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅದರಲ್ಲೂ ಕೆಲವು ಹೊಸ ಆಟಗಾರರು ಅದ್ಭುತ ಪ್ರದರ್ಶನ ನೀಡಿದರೆ, ಕೆಲವು ಹಿರಿಯ ಆಟಗಾರರು ಕೂಡ ಮಿಂಚಿದ್ದಾರೆ. ಮುಖ್ಯವಾಗಿ ಕಳೆದ ಸೀಸನ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿ ಇನ್ನೇನು ಇವರ ಕೆರಿಯರ್ ಅಂತ್ಯವಾಗುತ್ತೆ ಎಂದು ಹೇಳಲಾಗುತ್ತಿದ್ದ ಈ ಮೂವರು ಆಟಗಾರರು ಐಪಿಎಲ್ 2024 ರಲ್ಲಿ ಬೊಂಬಾಟ್ ಪ್ರದರ್ಶನ ತೋರಿ ಕಮ್​ಬ್ಯಾಕ್ ಮಾಡಿದ್ದಾರೆ.

ಯಶ್ ದಯಾಳ್

ಯಶ್ ದಯಾಳ್ ಐಪಿಎಲ್ 2023 ರಲ್ಲಿ ಕೆಕೆಆರ್ ವಿರುದ್ಧ ಒಂದೇ ಓವರ್‌ನಲ್ಲಿ 5 ಸಿಕ್ಸರ್ ಬಿಟ್ಟುಕೊಟ್ಟರು. ರಿಂಕು ಸಿಂಗ್ ಇವರ ಒಂದೇ ಓವರ್‌ನಲ್ಲಿ 5 ಸಿಕ್ಸರ್ ಸಿಡಿಸಿದ್ದರು. ಆ ನಂತರ ಯಶ್ ದಯಾಳ್‌ಗೆ ಆ ಸೀಸನ್‌ನಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಅವರ ವೃತ್ತಿಜೀವನ ಬಹುತೇಕ ಮುಗಿಯಿತು ಎನ್ನಲಾಗಿತ್ತು. ಆದಾಗ್ಯೂ, ಐಪಿಎಲ್ 2024 ರ ಹರಾಜಿನಲ್ಲಿ, ಆರ್​ಸಿಬಿ ಯಶ್ ದಯಾಲ್ ಅವರನ್ನು ಖರೀದಿಸಿತು. ನಂತರ ಅವರು ಹಿಂತಿರುಗಿ ನೋಡಲೇ ಇಲ್ಲ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೊನೆಯ ಓವರ್‌ನಲ್ಲಿ 17 ರನ್‌ಗಳನ್ನು ರಕ್ಷಿಸಿದ ಅವರು ಆರ್‌ಸಿಬಿಯನ್ನು ಗೆಲುವಿನತ್ತ ಮುನ್ನಡೆಸಿದರು. ಮಾತ್ರವಲ್ಲದೆ ಪ್ಲೇಆಫ್‌ ಪ್ರವೇಶಕ್ಕೆ ಪ್ರಮುಖ ಪಾತ್ರವಹಿಸಿದರು. ಒಟ್ಟಾರೆ ಇದುವರೆಗೆ 13 ಪಂದ್ಯಗಳನ್ನಾಡಿದ್ದು, 15 ವಿಕೆಟ್ ಪಡೆದಿದ್ದಾರೆ.

ಪ್ಲೇ ಆಫ್ ಪಂದ್ಯಗಳಿಗೆ ವರುಣನ ಕಾಟ: ಮಳೆ ಬಂದರೆ ಏನು ನಿಯಮ?, ಇಲ್ಲಿದೆ ಸಂಪೂರ್ಣ ಮಾಹಿತಿ

ರಿಯಾನ್ ಪರಾಗ್

ರಿಯಾನ್ ಪರಾಗ್ ಹಲವು ಋತುಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಭಾಗವಾಗಿದ್ದಾರೆ. ಆದರೆ, ಅವರು ನಿರಂತರವಾಗಿ ವಿಫಲರಾದರು. ಆದಾಗ್ಯೂ, ಐಪಿಎಲ್ 2024 ರ ಋತುವು ಇವರಿಗೆ ಸಂಪೂರ್ಣವಾಗಿ ವಿಭಿನ್ನವಾಗಿದೆ. ಇದುವರೆಗೆ 13 ಪಂದ್ಯಗಳನ್ನಾಡಿದ್ದು 531 ರನ್ ಗಳಿಸಿದ್ದಾರೆ. ಅವರ ಸರಾಸರಿ 59 ಮತ್ತು ಸ್ಟ್ರೈಕ್ ರೇಟ್ 152.59. ರಾಜಸ್ಥಾನ್ ರಾಯಲ್ಸ್ ಪರ ಪರಾಗ್ ಅತ್ಯುತ್ತಮ ಇನ್ನಿಂಗ್ಸ್ ಆಡಿದ್ದಾರೆ. ಇದರಿಂದಾಗಿ ಟಿ20 ವಿಶ್ವಕಪ್ ತಂಡದಲ್ಲಿ ಅವರ ಆಯ್ಕೆ ಬಗ್ಗೆ ಚರ್ಚೆ ಕೂಡ ನಡೆದಿವೆ.

ನೀತಾ ಅಂಬಾನಿ ಜೊತೆ ರೋಹಿತ್ ಶರ್ಮಾ ಸುದೀರ್ಘ ಮಾತುಕತೆ: ಆರ್​ಸಿಬಿ ಸೇರುವುದು ಬಹುತೇಕ ಖಚಿತ?

ಖಲೀಲ್ ಅಹ್ಮದ್

ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಖಲೀಲ್ ಒಂದು ಕಾಲದಲ್ಲಿ ಭಾರತ ತಂಡದ ಭಾಗವಾಗಿದ್ದರು. ಆದರೆ, ಕಳಪೆ ಪ್ರದರ್ಶನದಿಂದಾಗಿ ಅವರನ್ನು ಕೈಬಿಡಬೇಕಾಯಿತು. ಆದರೆ, ಐಪಿಎಲ್ 2024 ರಲ್ಲಿ ಇವರು ಕಮ್​ಬ್ಯಾಕ್ ಮಾಡಿದ ರೀತಿ ಅದ್ಭುತವಾಗಿತ್ತು. ಜೊತೆಗೆ ಇವರು ಪುನಃ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಟಿ20 ವಿಶ್ವಕಪ್‌ಗಾಗಿ ಭಾರತ ತಂಡದ ಮೀಸಲು ಆಟಗಾರರ ಪಟ್ಟಿಯಲ್ಲಿ ಅವರನ್ನು ಸೇರಿಸಲಾಗಿದೆ. ಖಲೀಲ್ ಅಹ್ಮದ್ ಐಪಿಎಲ್ 2024 ರಲ್ಲಿ 14 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿದ್ದಾರೆ.

ಹೆಚ್ಚಿನ ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:57 am, Tue, 21 May 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ