AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧವನ್​ನ ಕ್ಯಾಪ್ಟನ್ ಮಾಡಿದ್ದರು…ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ: ದಿಲೀಪ್ ವೆಂಗ್​ಸರ್ಕಾರ್

Team India: ಯುವ ಆಟಗಾರನಿಗೆ ನಾಯಕತ್ವ ನೀಡಿದ್ದರೆ ಭವಿಷ್ಯಕ್ಕಾಗಿ ಒಬ್ಬ ನಾಯಕನನ್ನು ರೂಪಿಸಿಕೊಳ್ಳಬಹುದಿತ್ತು ಎಂದು ವೆಂಗ್​ಸರ್ಕಾರ್ ಅಭಿಪ್ರಾಯಪಟ್ಟಿದ್ದಾರೆ.

ಧವನ್​ನ ಕ್ಯಾಪ್ಟನ್ ಮಾಡಿದ್ದರು...ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವೇ ಇಲ್ಲ: ದಿಲೀಪ್ ವೆಂಗ್​ಸರ್ಕಾರ್
Team India
TV9 Web
| Edited By: |

Updated on: Jun 19, 2023 | 5:23 PM

Share

ಟೀಮ್ ಇಂಡಿಯಾದ (Team India) ಹೀನಾಯ ಪ್ರದರ್ಶನವನ್ನು ಭಾರತ ತಂಡದ ಮಾಜಿ ಆಟಗಾರ ದಿಲೀಪ್ ವೆಂಗ್​ಸರ್ಕಾರ್ (Dilip Vengsarkar) ಕಟುವಾಗಿ ಟೀಕಿಸಿದ್ದಾರೆ. ಕಳೆದೊಂದು ದಶಕದಲ್ಲಿ ಭಾರತ ತಂಡವು ಪ್ರಮುಖ ಟೂರ್ನಿಗಳಲ್ಲಿ ಸೋಲಲು ಮುಖ್ಯ ಕಾರಣ ಆಯ್ಕೆ ಸಮಿತಿ ಎಂದಿದ್ದಾರೆ. ಏಕೆಂದರೆ ಕಳೆದ ಐದಾರು ವರ್ಷಗಳಲ್ಲಿ ಬಂದ ಎಲ್ಲಾ ಆಯ್ಕೆಗಾರರಲ್ಲಿ ದೂರದೃಷ್ಟಿಯ ಕೊರತೆಯಿದೆ. ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ಅವರ ಉದಾಹರಣೆಯನ್ನೇ ತೆಗೆದುಕೊಳ್ಳಿ, ಅವರನ್ನು ಈ ಹಿಂದೆ ಟೀಮ್ ಇಂಡಿಯಾದ ಹಂಗಾಮಿ ನಾಯಕರನ್ನಾಗಿ ಮಾಡಲಾಗಿತ್ತು.

ಇದೇ ವೇಳೆ ಧವನ್ ಬದಲಿಗೆ ಯುವ ಆಟಗಾರನಿಗೆ ಈ ಜವಾಬ್ದಾರಿಯನ್ನು ನೀಡಬೇಕಾಗಿತ್ತು. ಭವಿಷ್ಯದ ದೃಷ್ಟಿಯಲ್ಲಿ ನಾಯಕನನ್ನು ರೂಪಿಸಬೇಕಿತ್ತು. ಆದರೆ ಬಿಸಿಸಿಐ ಆಯ್ಕೆ ಸಮಿತಿಯು ನಿವೃತ್ತಿ ಅಂಚಿನಲ್ಲಿರುವ ಶಿಖರ್ ಧವನ್ ಅವರಿಗೆ ನಾಯಕನ ಪಟ್ಟ ನೀಡಿತ್ತು. ಅದೇ ಯುವ ಆಟಗಾರನಿಗೆ ನಾಯಕತ್ವ ನೀಡಿದ್ದರೆ ಭವಿಷ್ಯಕ್ಕಾಗಿ ಒಬ್ಬ ನಾಯಕನನ್ನು ರೂಪಿಸಿಕೊಳ್ಳಬಹುದಿತ್ತು ಎಂದು ವೆಂಗ್​ಸರ್ಕಾರ್ ಅಭಿಪ್ರಾಯಪಟ್ಟಿದ್ದಾರೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿದೆ. ಇದರೊಂದಿಗೆ ಮತ್ತೊಮ್ಮೆ ಐಸಿಸಿ ಪ್ರಶಸ್ತಿ ಗೆಲ್ಲುವ ತಂಡದ ಕನಸು ಭಗ್ನಗೊಂಡಿದೆ. ಭಾರತ ತಂಡವು ಕಳೆದ 10 ವರ್ಷಗಳಿಂದ ಒಂದೇ ಒಂದು ಐಸಿಸಿ ಪ್ರಶಸ್ತಿಯನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ನಾಕೌಟ್‌ಗಳಲ್ಲಿ ನಿರಂತರವಾಗಿ ಸೋಲುತ್ತಿದೆ. ಇದಕ್ಕೆಲ್ಲಾ ಕಾರಣ ಆಯ್ಕೆಗಾರರು ಎಂದು ವೆಂಗ್​ಸರ್ಕಾರ್ ಆರೋಪಿಸಿದ್ದಾರೆ.

ಇದನ್ನೂ ಓದಿ
Image
Jasprit Bumrah: ಜಸ್​ಪ್ರೀತ್ ಬುಮ್ರಾ ಕಂಬ್ಯಾಕ್​ಗೆ ವೇದಿಕೆ ಸಜ್ಜು..!
Image
KL Rahul: ಕೆಎಲ್ ರಾಹುಲ್ ಕಂಬ್ಯಾಕ್ ಯಾವಾಗ? ಇಲ್ಲಿದೆ ಉತ್ತರ
Image
Cricket Records: ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾಗಿದ್ದು ಯಾರು ಗೊತ್ತಾ?
Image
MLC 2023: ಮೇಜರ್ ಲೀಗ್ ಟೂರ್ನಿಗೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ತಂಡ ಪ್ರಕಟ

ಏಕೆಂದರೆ ಟೀಮ್ ಇಂಡಿಯಾದ ಆಯ್ಕೆಗಾರರಿಗೆ ಕ್ರಿಕೆಟ್ ಬಗ್ಗೆ ಯಾವುದೇ ಜ್ಞಾನ ಇಲ್ಲ. ಹಾಗೆಯೇ ದೂರದೃಷ್ಟಿ ಕೂಡ ಇಲ್ಲ. ಇದೇ ಕಾರಣದಿಂದಾಗಿ ಟೀಮ್ ಇಂಡಿಯಾ ಯಾವುದೇ ಐಸಿಸಿ ಟ್ರೋಫಿ ಗೆಲ್ಲಲು ಸಾಧ್ಯವಾಗುತ್ತಿಲ್ಲ ಎಂದು ದಿಲೀಪ್ ವೆಂಗ್​ಸರ್ಕಾರ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಬಿಸಿಸಿಐ ವಿರುದ್ಧ ಹರಿಹಾಯ್ದ ವೆಂಗ್​ಸರ್ಕಾರ್, ನೀವು ನಮ್ಮದು ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿ ಎಂದು ಮಾತನಾಡುತ್ತೀರಿ. ಆದರೆ ಟೀಮ್ ಇಂಡಿಯಾದ ಬೆಂಚ್ ಸ್ಟ್ರೆಂತ್ ಎಲ್ಲಿದೆ ಹೇಳಿ. ಐಪಿಎಲ್​ನಲ್ಲಿ ಆಡಿ ಮೀಡಿಯಾ ರೈಟ್ಸ್ ಮೂಲಕ ಕೋಟಿಗಟ್ಟಲೆ ಹಣ ಗಳಿಸುವುದೊಂದೇ ಸಾಧನೆಯಾಗಬಾರದು ಎಂದು ವೆಂಗ್​ಸರ್ಕಾರ್ ಹೇಳಿದರು.

ಇದೀಗ ಬಿಸಿಸಿಐ ಆಯ್ಕೆದಾರರ ವಿರುದ್ಧ 1983ರ ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿರುವ ದಿಲೀಪ್ ವೆಂಗ್​ಸರ್ಕಾರ್ ಮಾಡಿರುವ ಆರೋಪಗಳು ಭಾರೀ ವೈರಲ್ ಆಗಿದ್ದು, ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಮಾಜಿ ಆಟಗಾರನ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್