AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಕೆಳಗಾದ ಲೆಕ್ಕಾಚಾರ… ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್

T20 World Cup 2026: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 255 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡವು 19 ಓವರ್​ಗಳಲ್ಲಿ 159 ರನ್​ ಬಾರಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 96 ರನ್​ಗಳ ಅಮೋಘ ಗೆಲುವು ದಾಖಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ತಲೆಕೆಳಗಾದ ಲೆಕ್ಕಾಚಾರ... ನನ್ನ ಮನೆಗೇನು ತರಲ್ಲ ಎಂದು ಕಿಡಿಕಾರಿದ ಅಮೀರ್
Mohammad Amir
ಝಾಹಿರ್ ಯೂಸುಫ್
|

Updated on: Mar 09, 2026 | 12:58 PM

Share

T20 World Cup 2026: ಟಿ20 ವಿಶ್ವಕಪ್​ನ ಆರಂಭದಿಂದಲೂ ಈ ಬಾರಿ ಭಾರತ ತಂಡ ಚಾಂಪಿಯನ್ ಪಟ್ಟಕ್ಕೇರಲ್ಲ ಎಂದು ಭವಿಷ್ಯ ನುಡಿಯುತ್ತಾ ಬಂದಿದ್ದ ಪಾಕಿಸ್ತಾನ್ ಕ್ರಿಕೆಟಿಗ ಮೊಹಮ್ಮದ್ ಅಮಿರ್ ಇದೀಗ ಪೇಚಿಗೆ ಸಿಲುಕಿದ್ದಾರೆ. ಅದರಲ್ಲೂ ಸೆಮಿಫೈನಲ್​​ ತಲುಪಲ್ಲ ಎಂದಿದ್ದ ಅಮಿರ್ ಲೆಕ್ಕಾಚಾರವನ್ನು ಟೀಮ್ ಇಂಡಿಯಾ ತಲೆ ಕೆಳಗೆ ಮಾಡಿತ್ತು.

ಇದಾಗ್ಯೂ ಸೆಮಿಫೈನಲ್​ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಗೆದ್ದೇ ಗೆಲ್ಲುತ್ತೆ ಎಂದು ಮೊಹಮ್ಮದ್ ಅಮಿರ್ ಖಾಸಗಿ ಚಾನೆಲ್​ನಲ್ಲಿ ಹೇಳಿಕೊಂಡಿದ್ದರು. ಆದರೆ ಅಲ್ಲೂ ಕೂಡ ಅವರ ಲೆಕ್ಕಾಚಾರ ತಲೆಕೆಳಗಾಯಿತು. ಇಂಗ್ಲೆಂಡ್ ವಿರುದ್ಧ 7 ರನ್​ಗಳ ಜಯದೊಂದಿಗೆ ಟೀಮ್ ಇಂಡಿಯಾ ಫೈನಲ್​ಗೇರಿತು.

ಇನ್ನು ಫೈನಲ್ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡ ಯಾವುದು ಎಂಬ ಪ್ರಶ್ನೆಗೂ ಮೊಹಮ್ಮದ್ ಅಮಿರ್ ಕಡೆಯಿಂದ ಬಂದಂತಹ ಉತ್ತರ ನ್ಯೂಝಿಲೆಂಡ್. ಭಾರತ ತಂಡವನ್ನು ನ್ಯೂಝಿಲೆಂಡ್ ಸೋಲಿಸಿಯೇ ಸೋಲಿಸುತ್ತದೆ ಎಂದು ಪಾಕ್ ಕ್ರಿಕೆಟಿಗ ಭವಿಷ್ಯ ನುಡಿದಿದ್ದರು. ಈ ಭವಿಷ್ಯವನ್ನು ಕೂಡ ಟೀಮ್ ಇಂಡಿಯಾ ಸುಳ್ಳಾಗಿಸಿದೆ.

ಅಹಮದಾಬಾದ್​ನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಫೈನಲ್ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 255 ರನ್​ಗಳು. ಈ ಮೂಲಕ ಭಾರತ ತಂಡ ಗೆಲುವನ್ನು ಮೊದಲ ಇನಿಂಗ್ಸ್​ನಲ್ಲೇ ಖಚಿತಪಡಿಸಿಕೊಂಡಿದ್ದರು.

ಇನ್ನು ಈ ಬೃಹತ್ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ ತಂಡ 19 ಓವರ್​ಗಳಲ್ಲಿ ಕೇವಲ 159 ರನ್​ಗಳಿಸಿ ಆಲೌಟ್ ಆಗಿತ್ತು. ಈ ಮೂಲಕ ಟೀಮ್ ಇಂಡಿಯಾ 96 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನ ಬೆನ್ನಲ್ಲೇ ಖಾಸಗಿ ಚಾನೆಲ್​ನ ಕಾರ್ಯಕ್ರಮದ ನಡುವೆ ಮೊಹಮ್ಮದ್ ಅಮಿರ್ ಜೊತೆ ವ್ಯಕ್ತಿಯೋರ್ವರು ಪಂದ್ಯದ ಫಲಿತಾಂಶದ ಬಗ್ಗೆ ಕೇಳಿದ್ದಾರೆ.

ನಿಮ್ಮ ಭವಿಷ್ಯ ಸುಳ್ಳಾಗಿದೆ, ಭಾರತ ತಂಡ ಗೆಲುವು ದಾಖಲಿಸಿದೆ. ಈ ಬಗ್ಗೆ ಈಗ ನೀವೇನು ಹೇಳುತ್ತೀರಾ ಎಂಬ ಪ್ರಶ್ನೆಯನ್ನು ಅಮಿರ್ ಮುಂದಿಡಲಾಗಿತ್ತು.

ಈ ಸರಳ ಪ್ರಶ್ನೆಗೆ ಕುಪಿತಗೊಂಡ ಮೊಹಮ್ಮದ್ ಅಮಿರ್, “ಅವರು (ಭಾರತ) ಗೆದ್ದರೆ ಟ್ರೋಫಿಯನ್ನು ನನ್ನ ಮನೆಗೆ ತರುವುದಿಲ್ಲ, ಅವರ ಮನೆಗೆ ತೆಗೆದುಕೊಂಡು ಹೋಗುತ್ತಾರೆ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಅಷ್ಟೆ,” ಎಂದು ಕಿಡಿಕಾರಿದ್ದಾರೆ.

ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು. ಇದೀಗ ಮೊಹಮ್ಮದ್ ಅಮಿರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR