AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನ್ ದಾಳಿಗೆ ಮೂವರು ಅಫ್ಘಾನಿಸ್ತಾನ್ ಕ್ರಿಕೆಟಿಗರು ಮೃತ್ಯು..!

Pakistan vs Afghanistan: ಪಾಕಿಸ್ತಾನ್ ಸೇನೆ ನಡೆಸಿದ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ. ಈ ದಾಳಿಗೆ ಅಫ್ಘಾನಿಸ್ತಾನ್ ಆಟಗಾರರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದೊಂದು ಹೇಡಿಗಳ ಕೃತ್ಯ ಎಂದು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ (ACB) ಈ ದಾಳಿಯನ್ನು​ ಖಂಡಿಸಿದೆ.

ಪಾಕಿಸ್ತಾನ್ ದಾಳಿಗೆ ಮೂವರು ಅಫ್ಘಾನಿಸ್ತಾನ್ ಕ್ರಿಕೆಟಿಗರು ಮೃತ್ಯು..!
Afghanistan
ಝಾಹಿರ್ ಯೂಸುಫ್
|

Updated on:Oct 18, 2025 | 9:27 AM

Share

ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ನಡುವಣ ಸೇನಾ ಸಂಘರ್ಷ ಮುಂದುವರೆದಿದೆ. ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ್ ಡುರಾಂಡ್ ಲೈನ್ ಬಾರ್ಡರ್​​ನಲ್ಲಿ 12 ಪಾಕಿಸ್ತಾನ್ ಸೈನಿಕರನ್ನು ಹತ್ಯೆ ಮಾಡಿದ್ದರು. ಇದೀಗ ಮತ್ತೊಮ್ಮೆ ಪಾಕ್ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಮೃತಪಟ್ಟಿದ್ದಾರೆ.

ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ದಾಳಿ ನಡೆದಿದ್ದು, ಇದರಿಂದ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪಾಕ್ ದಾಳಿಯಿಂದಾಗಿ ಸಾವನ್ಯಪ್ಪಿದ ಕ್ರಿಕೆಟಿಗರನ್ನು ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ. ಇದೀಗ ಈ ದಾಳಿ ವಿರುದ್ಧ ಅಫ್ಘಾನಿಸ್ತಾನ್ ಕ್ರಿಕೆಟಿಗರು ಧ್ವನಿಯೆತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದು ಅಫ್ಘಾನಿಸ್ತಾನದ ಕ್ರೀಡಾ ಸಮುದಾಯ,  ಕ್ರಿಕೆಟ್ ಕುಟುಂಬಕ್ಕೆ ದೊಡ್ಡ ನಷ್ಟ. ದುಃಖಿತ ಕುಟುಂಬಗಳಿಗೆ ಸಂತಾಪ ಮತ್ತು ಅವರೊಂದಿಗೆ ನಾವು ಇರಲಿದ್ದೇವೆ ಎಂದು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಈ ದಬ್ಬಾಳಿಕೆಗಾರರು ಮುಗ್ಧ ನಾಗರಿಕರು ಮತ್ತು ನಮ್ಮ ದೇಶೀಯ ಕ್ರಿಕೆಟ್ ಆಟಗಾರರ ಹತ್ಯೆ ಮಾಡಿದ್ದು ಘೋರ, ಕ್ಷಮಿಸಲಾಗದ ಅಪರಾಧ ಎಂದು ಅಫ್ಘಾನ್ ಅಂತಾರಾಷ್ಟ್ರೀಯ ಕ್ರಿಕೆಟಿಗ ಫಜಲ್ಹಕ್ ಫಾರೂಕಿ ಫೇಸ್‌ಬುಕ್‌ನಲ್ಲಿ ಬರೆದಿದ್ದಾರೆ.

ಈ ಘಟನೆ ಪಕ್ತಿಕಾಗೆ (ಅಫ್ಘಾನಿಸ್ತಾನ್ ಊರು) ಮಾತ್ರವಲ್ಲದೆ, ಇಡೀ ಅಫ್ಘಾನಿಸ್ತಾನ್ ಕ್ರಿಕೆಟ್ ಕುಟುಂಬ ಮತ್ತು ಇಡೀ ರಾಷ್ಟ್ರಕ್ಕೆ ದುಃಖಕರ ವಿಷಯ ಎಂದು ಮತ್ತೊಬ್ಬ ಅಂತರರಾಷ್ಟ್ರೀಯ ಆಟಗಾರ ಮೊಹಮ್ಮದ್ ನಬಿ, ಪಾಕ್ ದಾಳಿಯನ್ನು ಖಂಡಿಸಿ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ  ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 6,6,4,6,4,6,6,4: ಒಂದೇ ಓವರ್​ನಲ್ಲಿ 45 ರನ್ ಚಚ್ಚಿದ ಅಫ್ಘಾನಿಸ್ತಾನ್ ಬ್ಯಾಟರ್

ಇತ್ತ ಪಾಕಿಸ್ತಾನ್ ದಾಳಿಗೆ ಅಫ್ಘಾನಿಸ್ತಾನ್ ಕ್ರಿಕೆಟಿಗರು ಆಕ್ರೋಶ ಹೊರಹಾಕಿರುವ ಕಾರಣ ಪಾಕ್ ವಿರುದ್ಧದ ಮುಂದಿನ ಸರಣಿಯಲ್ಲಿ ಅಫ್ಘಾನಿಸ್ತಾನ್ ಕಾಣಿಸಿಕೊಳ್ಳುವುದು ಅನುಮಾನ. ಇದಕ್ಕೂ ಮುನ್ನ ಕಾಬೂಲ್ ದಾಳಿ ಬಳಿಕ ಉಭಯ ದೇಶಗಳ ನಡುವೆ ಪಂದ್ಯಗಳು ನಡೆಯುವುದು ಅನುಮಾನ ಎನ್ನಲಾಗಿತ್ತು. ಇದೀಗ ಮೂವರ ಕ್ರಿಕೆಟಿಗರ ಹತ್ಯೆ ಬೆನ್ನಲ್ಲೇ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ.

Published On - 7:53 am, Sat, 18 October 25

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ