AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್​ನಲ್ಲಿ ಭಾರತದ 6ನೇ ಶತಕ; ಚೊಚ್ಚಲ ಕೌಂಟಿ ಪಂದ್ಯದಲ್ಲಿ ಶತಕ ಬಾರಿಸಿದ ತಿಲಕ್ ವರ್ಮಾ

Tilak Varma's Century Debut: ತಿಲಕ್ ವರ್ಮಾ ಅವರು ಇಂಗ್ಲೆಂಡ್‌ನ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಶತಕ ಸಿಡಿಸಿ ಸುದ್ದಿಯಾಗಿದ್ದಾರೆ. ಹ್ಯಾಂಪ್‌ಶೈರ್ ತಂಡದ ಪರ ಆಡುತ್ತಿರುವ ಅವರು ಎಸೆಕ್ಸ್ ವಿರುದ್ಧ 11 ಬೌಂಡರಿ ಮತ್ತು 3 ಸಿಕ್ಸ್‌ಗಳೊಂದಿಗೆ ಅಮೋಘ ಪ್ರದರ್ಶನ ನೀಡಿದರು. ಇದು ಭಾರತದ ಟೆಸ್ಟ್ ತಂಡಕ್ಕೆ ಭರವಸೆಯ ಸೂಚನೆ ನೀಡುತ್ತದೆ.

ಇಂಗ್ಲೆಂಡ್​ನಲ್ಲಿ ಭಾರತದ 6ನೇ ಶತಕ; ಚೊಚ್ಚಲ ಕೌಂಟಿ ಪಂದ್ಯದಲ್ಲಿ ಶತಕ ಬಾರಿಸಿದ ತಿಲಕ್ ವರ್ಮಾ
Tilak Varma
ಪೃಥ್ವಿಶಂಕರ
|

Updated on:Jun 24, 2025 | 5:12 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್​ಗಳು ಅಮೋಘ ಪ್ರದರ್ಶನ ನೀಡಿದ್ದು, ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ. ಅದೇ ಸಮಯದಲ್ಲಿ, ಮತ್ತೊಬ್ಬ ಭಾರತೀಯ ಬ್ಯಾಟ್ಸ್‌ಮನ್ ತಿಲಕ್ ವರ್ಮಾ (Tilak Varma) ಕೂಡ ಇಂಗ್ಲೆಂಡ್‌ನಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಪ್ರಸ್ತುತ ತಿಲಕ್ ವರ್ಮಾ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ (County Championship) ಹ್ಯಾಂಪ್‌ಶೈರ್ ತಂಡದ ಪರ ಕಣಕ್ಕಿಳಿದಿದ್ದು, ತನ್ನ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ.

ಚೊಚ್ಚಲ ಪಂದ್ಯದಲ್ಲೇ ಶತಕ

ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ತಿಲಕ್ ವರ್ಮಾ ತಮ್ಮ ಮೊದಲ ಪಂದ್ಯದಲ್ಲೇ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹ್ಯಾಂಪ್‌ಶೈರ್ ಪರ ಆಡುತ್ತಿರುವ ತಿಲಕ್, ಎಸೆಕ್ಸ್ ವಿರುದ್ಧದ ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ್ದಾರೆ. ವಾಸ್ತವವಾಗಿ ತಿಲಕ್ ವರ್ಮಾ ಬ್ಯಾಟಿಂಗ್ ಮಾಡಲು ಬಂದಾಗ ತಂಡವು 34 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಇದರ ನಂತರ ತಿಲಕ್ ವರ್ಮಾ ತಮ್ಮ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಹಾಗೆಯೇ ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 239 ಎಸೆತಗಳನ್ನು ಎದುರಿಸಿ 11 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳನ್ನು ಸಿಡಿಸಿದರು.

ಕೌಂಟಿಯಲ್ಲಿ ತಮ್ಮ ಮೊದಲ ಪಂದ್ಯದಲ್ಲೇ ಶತಕ ಪೂರೈಸಿರುವ ತಿಲಕ್ ವರ್ಮಾ, ಇದಕ್ಕೂ ಮೊದಲು ರಣಜಿ ಟ್ರೋಫಿಯಲ್ಲಿ ಹೈದರಾಬಾದ್ ಪರ ಮೂರು ಶತಕಗಳು, ನ್ಯೂಜಿಲೆಂಡ್ ಎ ವಿರುದ್ಧ ಭಾರತ ಎ ಪರ ಒಂದು ಶತಕ ಮತ್ತು ಕಳೆದ ವರ್ಷ ದುಲೀಪ್ ಟ್ರೋಫಿಯಲ್ಲಿ ಒಂದು ಶತಕ ಸಿಡಿಸಿದ್ದಾರೆ. 2019 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ತಿಲಕ್ ವರ್ಮಾ, ಪ್ರಸ್ತುತ ಭಾರತ ಟಿ20 ತಂಡದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಟೆಸ್ಟ್‌ನಲ್ಲಿಯೂ ತಮ್ಮ ಪರಾಕ್ರಮ ತೊರಿರುವ ತಿಲಕ್ ಮುಂದೊಂದು ದಿನ ಭಾರತ ಟೆಸ್ಟ್ ತಂಡದಲ್ಲೂ ಆಡುವ ಸೂಚನೆ ನೀಡಿದ್ದಾರೆ.

LSG vs MI, IPL 2025: ತಿಲಕ್ ವರ್ಮಾ ಅಲ್ಲ: ಲಕ್ನೋ ವಿರುದ್ಧದ ಸೋಲಿಗೆ ಹಾರ್ದಿಕ್ ಪಾಂಡ್ಯ ದೂರಿದ್ದು ಯಾರನ್ನು ಗೊತ್ತೇ?

ಟಿ20 ಶ್ರೇಯಾಂಕದಲ್ಲಿ ತಿಲಕ್​ಗೆ 3ನೇ ಸ್ಥಾನ

ತಿಲಕ್ ವರ್ಮಾ ಇತ್ತೀಚೆಗೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಅದ್ಭುತ ಪ್ರದರ್ಶನ ನೀಡಿದ್ದರು. ಇದಲ್ಲದೆ, ಅವರು ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇದರ ಫಲವಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ತಿಲಕ್​ಗೆ ಮೂರನೇ ಸ್ಥಾನ ಲಭಿಸಿದೆ. ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಮಾತ್ರ ಅವರಿಗಿಂತ ಮುಂದಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Tue, 24 June 25

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ