
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟರ್ಗಳು ಅಮೋಘ ಪ್ರದರ್ಶನ ನೀಡಿದ್ದು, ಒಟ್ಟು 5 ಶತಕಗಳನ್ನು ಬಾರಿಸಿದ್ದಾರೆ. ಅದೇ ಸಮಯದಲ್ಲಿ, ಮತ್ತೊಬ್ಬ ಭಾರತೀಯ ಬ್ಯಾಟ್ಸ್‌ಮನ್ ತಿಲಕ್ ವರ್ಮಾ (Tilak Varma) ಕೂಡ ಇಂಗ್ಲೆಂಡ್‌ನಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದಾರೆ. ಪ್ರಸ್ತುತ ತಿಲಕ್ ವರ್ಮಾ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ (County Championship) ಹ್ಯಾಂಪ್‌ಶೈರ್ ತಂಡದ ಪರ ಕಣಕ್ಕಿಳಿದಿದ್ದು, ತನ್ನ ಚೊಚ್ಚಲ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ.
ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ತಿಲಕ್ ವರ್ಮಾ ತಮ್ಮ ಮೊದಲ ಪಂದ್ಯದಲ್ಲೇ ಅದ್ಭುತ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹ್ಯಾಂಪ್‌ಶೈರ್ ಪರ ಆಡುತ್ತಿರುವ ತಿಲಕ್, ಎಸೆಕ್ಸ್ ವಿರುದ್ಧದ ತಮ್ಮ ಚೊಚ್ಚಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ್ದಾರೆ. ವಾಸ್ತವವಾಗಿ ತಿಲಕ್ ವರ್ಮಾ ಬ್ಯಾಟಿಂಗ್ ಮಾಡಲು ಬಂದಾಗ ತಂಡವು 34 ರನ್‌ಗಳಿಗೆ 2 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಇದರ ನಂತರ ತಿಲಕ್ ವರ್ಮಾ ತಮ್ಮ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಹಾಗೆಯೇ ತಮ್ಮ ಶತಕದ ಇನ್ನಿಂಗ್ಸ್‌ನಲ್ಲಿ 239 ಎಸೆತಗಳನ್ನು ಎದುರಿಸಿ 11 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳನ್ನು ಸಿಡಿಸಿದರು.
Just in: County Championship updates.
– Tilak Varma has scored 100 runs vs Essex.
– Ishan Kishan scored 87 runs vs Yorkshire.Both Indian batters having a good outing in county cricket. pic.twitter.com/g5bjvRyzWg
— Inside out (@INSIDDE_OUT) June 24, 2025
ಕೌಂಟಿಯಲ್ಲಿ ತಮ್ಮ ಮೊದಲ ಪಂದ್ಯದಲ್ಲೇ ಶತಕ ಪೂರೈಸಿರುವ ತಿಲಕ್ ವರ್ಮಾ, ಇದಕ್ಕೂ ಮೊದಲು ರಣಜಿ ಟ್ರೋಫಿಯಲ್ಲಿ ಹೈದರಾಬಾದ್ ಪರ ಮೂರು ಶತಕಗಳು, ನ್ಯೂಜಿಲೆಂಡ್ ಎ ವಿರುದ್ಧ ಭಾರತ ಎ ಪರ ಒಂದು ಶತಕ ಮತ್ತು ಕಳೆದ ವರ್ಷ ದುಲೀಪ್ ಟ್ರೋಫಿಯಲ್ಲಿ ಒಂದು ಶತಕ ಸಿಡಿಸಿದ್ದಾರೆ. 2019 ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ತಿಲಕ್ ವರ್ಮಾ, ಪ್ರಸ್ತುತ ಭಾರತ ಟಿ20 ತಂಡದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಟೆಸ್ಟ್‌ನಲ್ಲಿಯೂ ತಮ್ಮ ಪರಾಕ್ರಮ ತೊರಿರುವ ತಿಲಕ್ ಮುಂದೊಂದು ದಿನ ಭಾರತ ಟೆಸ್ಟ್ ತಂಡದಲ್ಲೂ ಆಡುವ ಸೂಚನೆ ನೀಡಿದ್ದಾರೆ.
ತಿಲಕ್ ವರ್ಮಾ ಇತ್ತೀಚೆಗೆ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ಪರ ಅದ್ಭುತ ಪ್ರದರ್ಶನ ನೀಡಿದ್ದರು. ಇದಲ್ಲದೆ, ಅವರು ಟೀಂ ಇಂಡಿಯಾ ಪರ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಇದರ ಫಲವಾಗಿ ಐಸಿಸಿ ಟಿ20 ಶ್ರೇಯಾಂಕದಲ್ಲಿ ತಿಲಕ್ಗೆ ಮೂರನೇ ಸ್ಥಾನ ಲಭಿಸಿದೆ. ಅಭಿಷೇಕ್ ಶರ್ಮಾ ಮತ್ತು ಟ್ರಾವಿಸ್ ಹೆಡ್ ಮಾತ್ರ ಅವರಿಗಿಂತ ಮುಂದಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:11 pm, Tue, 24 June 25