AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs MI: 6ನೇ ಪಂದ್ಯದಲ್ಲೂ ಭರವಸೆ ಕಳೆದುಕೊಂಡಿದ್ದ ಮುಂಬೈಗೆ ಬಲ ತುಂಬಿದ ತಿಲಕ್ ಶತಕ

Tilak Varma's Maiden IPL Century: ಐಪಿಎಲ್ 2026 ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಎದುರು 200 ರನ್‌ಗಳ ಗುರಿ ನೀಡಿದೆ. ಆರಂಭಿಕ ಆಘಾತದ ಹೊರತಾಗಿಯೂ, ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಅವರ ಅಜೇಯ 101 ರನ್‌ಗಳ ಸ್ಫೋಟಕ ಶತಕದ ನೆರವಿನಿಂದ ಮುಂಬೈ 5 ವಿಕೆಟ್‌ಗೆ 199 ರನ್ ಕಲೆಹಾಕಿತು. ಪ್ಲೇಆಫ್‌ಗೆ ಜೀವಂತವಾಗಿರಲು ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಮುಂಬೈಗೆ ಈ ಭರ್ಜರಿ ಬ್ಯಾಟಿಂಗ್ ನೆರವಾಗಿದೆ.

GT vs MI: 6ನೇ ಪಂದ್ಯದಲ್ಲೂ ಭರವಸೆ ಕಳೆದುಕೊಂಡಿದ್ದ ಮುಂಬೈಗೆ ಬಲ ತುಂಬಿದ ತಿಲಕ್ ಶತಕ
Tilak Varma
ಪೃಥ್ವಿಶಂಕರ
|

Updated on:Apr 20, 2026 | 9:37 PM

Share

ಐಪಿಎಲ್ 2026 (IPL 2026) ರ 30 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುಜರಾತ್ ಟೈಟಾನ್ಸ್ (MI vs GT) ತಂಡವನ್ನು ಎದುರಿಸಿತ್ತು. ಈ ಆವೃತ್ತಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ ಮುಂಬೈ ಮುಂದಿನ ಹಂತವನ್ನು ತಲುಪಬೇಕೆಂದರೆ ಉಳಿದ ಎಲ್ಲಾ ಪಂದ್ಯವನ್ನು ಗೆಲ್ಲಬೇಕು. ಅದರಂತೆ ಇಂದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ತಂಡ ತಿಲಕ್ ವರ್ಮಾ (Tilak Varma) ಅವರ ಸ್ಫೋಟಕ ಶತಕದ ನೆರವಿನಿಂದ 20 ಓವರ್​ಗಳಲ್ಲಿ 5 ವಿಕೆಟ್​ಗಳನ್ನು ಕಳೆದುಕೊಂಡು 199 ರನ್ ಕಲೆಹಾಕಿತು. ಈ ಮೂಲಕ ಗುಜರಾತ್ ಗೆಲುವಿಗೆ 200 ರನ್​ಗಳ ಗುರಿ ನೀಡಿದೆ.

ಮುಂಬೈಗೆ ಕಳಪೆ ಆರಂಭ

ಎಂದಿನಂತೆ ಈ ಪಂದ್ಯದಲ್ಲೂ ಮುಂಬೈಗೆ ಉತ್ತಮ ಆರಂಭ ಸಿಗಲಿಲ್ಲ. ತಂಡ ಪವರ್‌ಪ್ಲೇನಲ್ಲಿಯೇ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ರಬಾಡ ದಾಳಿಗೆ ತತ್ತರಿಸಿದ ಮುಂಬೈ ಅಗ್ರಕ್ರಮಾಂಕ ಕುಸಿಯಿತು. ಆದಾಗ್ಯೂ ಈ ಸಂಕಷ್ಟದ ಸಮಯದಲ್ಲಿ ತಂಡದ ಇನ್ನಿಂಗ್ಸ್ ಕಟ್ಟಿದ ತಿಲಕ್ ವರ್ಮಾ ಆರಂಭದಲ್ಲಿ ತಾಳ್ಮೆಯ ಆಟಕ್ಕೆ ಮುಂದಾದರು. ನಮನ್ ದೀರ್ ಜೊತೆಗೂಡಿ ತಂಡವನ್ನು ಶತಕದಂಚಿಗೆ ತಂದರು. ಆದರೆ ಅರ್ಧಶತಕದಂಚಿನಲ್ಲಿ ಎಡವಿದ ನಮನ್ 45 ರನ್​ಗಳಿಗೆ ಔಟಾದರು.

ತಿಲಕ್ ಚೊಚ್ಚಲ ಶತಕ

ಇದಾದ ನಂತರ ನಾಯಕ ಹಾರ್ದಿಕ್ ಪಾಂಡ್ಯರಿಂದ ಉತ್ತಮ ಬೆಂಬಲ ಪಡೆದ ತಿಲಕ್ ಗುಜರಾತ್ ವೇಗಿಗಳ ಬೆವರಿಳಿಸಿದರು. ಅದರಲ್ಲೂ ಕೊನೆಯ 4 ಓವರ್‌ಗಳಲ್ಲಿ ಉಗ್ರರೂಪ ತಾಳಿದ ತಿಲಕ್ ತಂಡವನ್ನು 150 ರನ್​ಗಳ ಗಡಿ ದಾಟಿಸಿದಲ್ಲದೆ 200 ರನ್​ಗಳಿಗೆ ಕೊಂಡೊಯ್ದರು. 20 ನೇ ಓವರ್​ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ತಿಲಕ್ ಐಪಿಎಲ್‌ನಲ್ಲಿ ತಮ್ಮ ಚೊಚ್ಚಲ ಶತಕವನ್ನು ಪೂರೈಸಿದರು. ಟಿ20 ಕ್ರಿಕೆಟ್​ನಲ್ಲಿ ಎರಡು ಶತಕಗಳನ್ನು ಬಾರಿಸಿರುವ ತಿಲಕ್​ಗೆ ಇದು ಐಪಿಎಲ್‌ನಲ್ಲಿ ಮೊದಲ ಶತಕವಾಗಿದೆ.

GT vs MI IPL 2026 Live Score: ತಿಲಕ್ ಶತಕ; ಗುಜರಾತ್​ಗೆ 200 ರನ್ ಗುರಿ

ಅಜೇಯ101 ರನ್

ಮೇಲೆ ಹೇಳಿದಂತೆ 17ನೇ ಓವರ್​ನಿಂದ ತಮ್ಮ ಬ್ಯಾಟಿಂಗ್‌ ಗೇರ್ ಬದಲಿಸಿದ ತಿಲಕ್ ಈ ಓವರ್​ನಲ್ಲಿ ಒಂದು ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದರು. ಈ ಓವರ್​ಗೂ ಮುನ್ನ ತಿಲಕ್ 28 ಎಸೆತಗಳಲ್ಲಿ 37ರನ್ ಕಲೆಹಾಕಿದ್ದರು. ಇದಾದ ಬಳಿಕ 18ನೇ ಓವರ್​ನಲ್ಲಿ ಬೌಂಡರಿಗಳ ಮಳೆಗರೆದ ತಿಲಕ್ ಈ ಓವರ್​ನಲ್ಲಿ 3 ಸಿಕ್ಸರ್ ಹಾಗೂ 2 ಭರ್ಜರಿ ಬೌಂಡರಿಗಳನ್ನು ಬಾರಿಸಿದರು. ಇದರೊಂದಿಗೆ ಅರ್ಧಶತಕವನ್ನು ಪೂರೈಸಿದರು. 19ನೇ ಓವರ್​ನಲ್ಲಿ ತಿಲಕ್ ಬ್ಯಾಟ್​ನಿಂದ 1 ಬೌಂಡರಿ ಬಂದರೆ, 20ನೇ ಓವರ್​ನಲ್ಲಿ ತಿಲಕ್ 2 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸಿ ತಮ್ಮ ಶತಕ ಪೂರೈಸಿದರು. ತಮ್ಮ ಇನ್ನಿಂಗ್ಸ್​ನಲ್ಲಿ 45 ಎಸೆತಗಳನ್ನು ಎದುರಿಸಿದ ತಿಲಕ್ 8 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ ಅಜೇಯ101 ರನ್ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:33 pm, Mon, 20 April 26

Follow Us
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ಬಿಜೆಪಿಗೆ ಸಪೋರ್ಟ್‌, SDPIಗೆ ಹಣ ನೀಡಿದ ವಿಡಿಯೋ ಇದೆ ಎಂದ ಕೈ ನಾಯಕ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ರಾತ್ರಿ ವೇಳೆಯೂ ಉಷ್ಣ ಅಲೆ, ಹೆಚ್ಚಲಿದೆ ತಾಪಮಾನ: ಹವಾಮಾನ ತಜ್ಞ ಮುನ್ಸೂಚನೆ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಕುಡಿದ ಮತ್ತಿನಲ್ಲಿ ಬಿಎಂಟಿಸಿ ಬಸ್ ಮೇಲೆ ಕಲ್ಲು ತೂರಾಟ
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಬಳ್ಳಾರಿಯಲ್ಲಿ ಭಾರಿ ಬಿಸಿಲು, ತಾಪಮಾನ ತಾಳಲಾರದೆ ಮಡಿಕೆಗಳ ಮೊರೆ ಹೋದ ಜನ!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ಕೇಂದ್ರ ಮಾಜಿ ಸಚಿವ ಕೆ.ರೆಹಮಾನ್ ಖಾನ್ ಮೊಮ್ಮಗನಿಗೂ ಬಿಟ್​ಕಾಯಿನ್ ನಂಟು!
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಾನು ಸರ್ಕಾರ ಅಲ್ಲ, ಸಂಪುಟ ಸ್ಥಾನ ಮಾನ ನೀಡಿರೋದು ಗೌರವಕ್ಕೆ: ರಾಯರೆಡ್ಡಿ
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ನಲಪಾಡ್ ಮನೆ ಮೇಲೆ ಇ.ಡಿ ದಾಳಿಗೆ ಕಾರಣವಾಯ್ತಾ 10 ಲಕ್ಷ ರೂ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಕ್ರಿಕೆಟ್ ಬಾಲ್​ ಒಳಗೆ ಗಾಂಜಾ, ಮೊಬೈಲ್ ಇಟ್ಟು ಕೈದಿಗಳಿಗೆ ಸಪ್ಲೈ!
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಸಿಎಂ ನಾಯ್ಡು ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕುಸಿದ ಬಿದ್ದ ಕಮಾಂಡೋ
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?
ಕನ್ನಡಿಗ ಪೊಲೀಸ್​​ ಅಧಿಕಾರಿಗಳ ಮೇಲೆ ದೌರ್ಜನ್ಯ!, ಆರೋಪ ಯಾರ ಮೇಲೆ?