IND vs SA: ದಾಖಲೆಯ ಚೊಚ್ಚಲ ಟಿ20 ಶತಕ ಸಿಡಿಸಿದ ತಿಲಕ್ ವರ್ಮಾ

Tilak Varma T20I debut century: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಯುವ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಅವರು ಅದ್ಭುತ ಪ್ರದರ್ಶನ ನೀಡಿದರು. ಕೇವಲ 51 ಎಸೆತಗಳಲ್ಲಿ ಶತಕ ಸಿಡಿಸಿ ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ದಾಖಲಿಸಿದರು.

IND vs SA: ದಾಖಲೆಯ ಚೊಚ್ಚಲ ಟಿ20 ಶತಕ ಸಿಡಿಸಿದ ತಿಲಕ್ ವರ್ಮಾ
ತಿಲಕ್ ವರ್ಮಾ
Follow us
ಪೃಥ್ವಿಶಂಕರ
|

Updated on: Nov 13, 2024 | 10:39 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರನೇ ಟಿ20 ಪಂದ್ಯ ಸೆಂಚೂರಿಯನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್​ಮನ್ ತಿಲಕ್ ವರ್ಮಾ ಸಂಚಲನ ಮೂಡಿಸಿದ್ದು, ಕೇವಲ 51 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಇದು ಅವರ ಟಿ20 ವೃತ್ತಿ ಜೀವನದ ಚೊಚ್ಚಲ ಶತಕ ಎಂಬುದು ಇಲ್ಲಿ ವಿಶೇಷ. ವಾಸ್ತವವಾಗಿ ಇಂಜುರಿಯಿಂದಾಗಿ ಕಳೆದ 11 ತಿಂಗಳುಗಳಿಂದ ಟೀಂ ಇಂಡಿಯಾದಿಂದ ಹೊರಗಿದ್ದ ತಿಲಕ್, ಇದೀಗ ಭಾರತ ತಂಡಕ್ಕೆ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಇಂದಿನಿಂದ ಪಂದ್ಯದಲ್ಲಿ ವಿಶೇಷವಾಗಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುತ್ತಿದ್ದ 2ನೇ ಕ್ರಮಾಂಕದಲ್ಲಿ ಅಖಾಡಕ್ಕಿಳಿದ ತಿಲಕ್, ಕೊನೆಯವರೆಗೂ ಅಜೇಯರಾಗಿ ಉಳಿದು ತಂಡವನ್ನು 219 ರನ್​ಗಳಿಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದರು.

107 ರನ್‌ಗಳ ಜೊತೆಯಾಟ

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತಕ್ಕೆ ವಿಶೇಷ ಆರಂಭ ಸಿಗಲಿಲ್ಲ. ಸಂಜು ಸ್ಯಾಮ್ಸನ್ ಖಾತೆ ತೆರೆಯದೆ ಔಟಾದರು. ಇದಾದ ಬಳಿಕ ಕ್ರೀಸ್​ಗೆ ಬಂದ ತಿಲಕ್, ಪವರ್‌ಪ್ಲೇನಲ್ಲಿ ವೇಗವಾಗಿ ರನ್ ಗಳಿಸಿದರು. ಅಲ್ಲದೆ ಅಭಿಷೇಕ್ ಜೊತೆಗೂಡಿ ಎರಡನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನೀಡಿದರು. ಹಾಗೆಯೇ ತಮ್ಮ ಇನಿಂಗ್ಸ್‌ನ 19 ನೇ ಓವರ್‌ನಲ್ಲಿ ತಮ್ಮ ವೃತ್ತಿಜೀವನದ ಮೊದಲ ಶತಕವನ್ನು ಪೂರೈಸಿದರು.

51 ಎಸೆತಗಳಲ್ಲಿ ಶತಕ

ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 51 ಎಸೆತಗಳನ್ನು ಎದುರಿಸಿದ ತಿಲಕ್, 196.07 ಸ್ಟ್ರೈಕ್ ರೇಟ್‌ನಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್​ಗಳ ನೆರವಿನಿಂದ ಬಾರಿಸಿ ಶತಕ ಪೂರೈಸಿದರು. ಈ ಮೂಲಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಭಾರತದ 11ನೇ ಆಟಗಾರ ಎಂಬ ಹೆಗ್ಗಳಿಕೆಗೆ ತಿಲಕ್ ವರ್ಮಾ ಪಾತ್ರರಾದರು. ಹಾಗೆಯೇ ದಕ್ಷಿಣ ಆಫ್ರಿಕಾ ವಿರುದ್ಧ ಈ ಸಾಧನೆ ಮಾಡಿದ ಭಾರತದ 5 ನೇ ಆಟಗಾರ ಎಂಬ ದಾಖಲೆ ತಿಲಕ್ ಪಾಲಾಯಿತು.

ತಿಲಕ್​ಗೂ ಮುನ್ನ ಸುರೇಶ್ ರೈನಾ, ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್ ಮತ್ತು ಸಂಜು ಸ್ಯಾಮ್ಸನ್ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಇನಿಂಗ್ಸ್ ಆಡಿದ್ದಾರೆ. ಇದರ ಜೊತೆಗೆ ಟಿ20ಯಲ್ಲಿ ಶತಕ ಸಿಡಿಸಿದ ಭಾರತದ ಎರಡನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಅವರು 22 ವರ್ಷ ಮತ್ತು 5 ದಿನಗಳ ವಯಸ್ಸಿನಲ್ಲಿ ಈ ಶತಕವನ್ನು ಸಿಡಿಸಿದ್ದಾರೆ. ಕೇವಲ 21 ವರ್ಷ ಮತ್ತು 279 ದಿನಗಳಲ್ಲಿ ಚೊಚ್ಚಲ ಟಿ20 ಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

220 ರನ್ ಟಾರ್ಗೆಟ್

ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ.. ತಿಲಕ್ ವರ್ಮಾ ಅವರ ಈ ಶತಕದ ಇನ್ನಿಂಗ್ಸ್‌ನಿಂದಾಗಿ ಭಾರತ ತಂಡ ತನ್ನ ಇನಿಂಗ್ಸ್‌ನಲ್ಲಿ ದೊಡ್ಡ ಸ್ಕೋರ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿತು. ಮೇಲೆ ಹೇಳಿದಂತೆ ಭಾರತ ತಂಡ ಖಾತೆ ತೆರೆಯದೆ ಮೊದಲ ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ಕ್ರೀಸ್​ಗೆ ಬಂದ ತಿಲಕ್ ವರ್ಮಾ ಅಜೇಯರಾಗಿ ಡಗೌಟ್​ಗೆ ಮರಳಿದರು. ಅಂತಿಮವಾಗಿ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿದೆ. ಈ ಪಂದ್ಯದಲ್ಲಿ ತಿಲಕ್ ಹೊರತಾಗಿ ಅಭಿಷೇಕ್ ಶರ್ಮಾ ಕೂಡ 25 ಎಸೆತಗಳಲ್ಲಿ 50 ರನ್​ಗಳ ಇನ್ನಿಂಗ್ಸ್ ಆಡಿದರೆ, ಹಾರ್ದಿಕ್ ಪಾಂಡ್ಯ 18 ರನ್ ಮತ್ತು ರಮಣದೀಪ್ ಸಿಂಗ್ 15 ರನ್ ಕೊಡುಗೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ