AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಚ್‌ಗಳಿಗೆ ಕೊಟ್ಟ ಮಾತು ಉಳಿಸಿಕೊಂಡೆ: ಬ್ಯಾಟಿಂಗ್ ರಹಸ್ಯ ಬಿಚ್ಚಿಟ್ಟ ತಿಲಕ್ ವರ್ಮಾ!

ಕ್ರೈಸ್ಟ್​​ಚರ್ಚ್​ನಲ್ಲಿ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.5 ಓವರ್​ಗಳಲ್ಲಿ 181 ರನ್ ಗಳಿಸಿ 4 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ. 

ಕೋಚ್‌ಗಳಿಗೆ ಕೊಟ್ಟ ಮಾತು ಉಳಿಸಿಕೊಂಡೆ: ಬ್ಯಾಟಿಂಗ್ ರಹಸ್ಯ ಬಿಚ್ಚಿಟ್ಟ ತಿಲಕ್ ವರ್ಮಾ!
Tilak VarmaImage Credit source: BCCI
ಝಾಹಿರ್ ಯೂಸುಫ್
|

Updated on: Oct 25, 2026 | 2:13 PM

Share

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ತಂಡ ನಾಲ್ಕು ವಿಕೆಟ್‌ಗಳ ರೋಚಕ ಜಯ ದಾಖಲಿಸಿದೆ. ಈ ರೋಚಕ ಗೆಲುವಿನ ಬೆನ್ನಲ್ಲೇ, ಪಂದ್ಯದ ಹೀರೊ ತಿಲಕ್ ವರ್ಮಾ ತಮ್ಮ ಮ್ಯಾಚ್-ವಿನ್ನಿಂಗ್ ಪ್ರದರ್ಶನದ ಹಿಂದಿನ ಅಸಲಿ ರಹಸ್ಯವನ್ನು ಬಹಿರಂಗಪಡಿಸಿದ್ದಾರೆ.

181 ರನ್​ಗಳ ಗುರಿ ಬೆನ್ನಟ್ಟುವಾಗ ಭಾರತ ತಂಡ 11ನೇ ಓವರ್‌ನಲ್ಲಿ ಕೇವಲ 70 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ನಿಧಾನಗತಿಯ ಪಿಚ್‌ನಲ್ಲಿ ರನ್ ಗಳಿಸುವುದು ಕಷ್ಟವಾಗಿದ್ದರೂ, ತಿಲಕ್ ವರ್ಮಾ ಯಾವುದೇ ಅನಗತ್ಯ ರಿಸ್ಕ್ ತೆಗೆದುಕೊಳ್ಳದೆ ಪಂದ್ಯವನ್ನು ಕೊನೆಯವರೆಗೂ ಕೊಂಡೊಯ್ಯಲು ನಿರ್ಧರಿಸಿದ್ದರು.

ಈ ಬಗ್ಗೆ ಮಾತನಾಡಿದ ತಿಲಕ್ ವರ್ಮಾ, “ಪಂದ್ಯಕ್ಕೂ ಮುನ್ನ ನಾನು ಗೌತಮ್ ಗಂಭೀರ್ ಸರ್ ಮತ್ತು ಬ್ಯಾಟಿಂಗ್ ಕೋಚ್ ಸಿತಾಂಶು ಕೋಟಕ್ ಸರ್‌ಗೆ ಒಂದು ಮಾತು ಕೊಟ್ಟಿದ್ದೆ. ಎಷ್ಟೇ ಒತ್ತಡ ಬಂದರೂ ವಿಕೆಟ್ ಚೆಲ್ಲದೆ, ಪಂದ್ಯವನ್ನು ಕೊನೆಯವರೆಗೆ ಕೊಂಡೊಯ್ದು ಗೆಲ್ಲಿಸಿಕೊಡುವುದಾಗಿ ಹೇಳಿದ್ದೆ. ಅವರೂ ಕೂಡ ನನ್ನ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿದ್ದರು” ಎಂದು ತಿಳಿಸಿದ್ದಾರೆ.

ಗಂಭೀರ್ ನೀಡಿದ ಬೂಸ್ಟರ್ ಡೋಸ್!

ಸಂಕಷ್ಟದ ಸಮಯದಲ್ಲಿ ಕೋಚಿಂಗ್ ಸಿಬ್ಬಂದಿ ನೀಡಿದ ಧೈರ್ಯವೇ ತಮಗೆ ದಾರಿದೀಪವಾಯಿತು ಎಂದಿರುವ ತಿಲಕ್ ವರ್ಮಾ, ಕೋಚ್‌ಗಳ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ: “ಇಡೀ ಭಾರತವೇ ನಿನ್ನನ್ನು ನಂಬುತ್ತದೆ. ನೀನು ಕ್ರೀಸ್‌ನಲ್ಲಿ ಕೊನೆಯವರೆಗೂ ಉಳಿದರೆ ಖಂಡಿತ ಪಂದ್ಯವನ್ನು ಗೆಲ್ಲಿಸುತ್ತೀಯಾ” ಎಂದು ಗಂಭೀರ್ ಮತ್ತು ಕೋಟಕ್ ತಮಗೆ ಧೈರ್ಯ ತುಂಬಿದ್ದಾಗಿ ವರ್ಮಾ ಹೇಳಿದ್ದಾರೆ.

ವರ್ಕ್ ಆದ ಪ್ಲ್ಯಾನ್:

ಕ್ರೀಸ್‌ನ ಇನ್ನೊಂದು ತುದಿಯಲ್ಲಿದ್ದ ನಮನ್ ಧೀರ್ ಆಕ್ರಮಣಕಾರಿ ಆಟ ಆಡುತ್ತಿದ್ದಾಗ, ತಿಲಕ್ ವರ್ಮಾ ತಮ್ಮ ಸಿಕ್ಸರ್ ಹೊಡೆಯುವ ಹಸಿವನ್ನು ನಿಯಂತ್ರಿಸಿಕೊಂಡರು. ಸ್ಪಿನ್ನರ್‌ಗಳ ವಿರುದ್ಧ ರಿಸ್ಕ್ ತೆಗೆದುಕೊಳ್ಳದೆ ಸಿಂಗಲ್ಸ್ ಓಡಿ ಸ್ಟ್ರೈಕ್ ರೊಟೇಟ್ ಮಾಡುವುದರತ್ತ ಗಮನ ಹರಿಸಿದರು.

ಅಂತಿಮವಾಗಿ ಕೇವಲ 26 ಎಸೆತಗಳಲ್ಲಿ ಅಜೇಯ 51 ರನ್ ಚಚ್ಚಿದ ತಿಲಕ್ ವರ್ಮಾ ಸಿಡಿಲಬ್ಬರದ ಅರ್ಧಶತಕ ಪೂರೈಸಿದರು. ನಿತೀಶ್ ಕುಮಾರ್ ರೆಡ್ಡಿ (13 ಎಸೆತಗಳಲ್ಲಿ 26*) ಜೊತೆಗೂಡಿ ಕೇವಲ 30 ಎಸೆತಗಳಲ್ಲಿ ಅಜೇಯ 69 ರನ್‌ಗಳ ಜೊತೆಯಾಟವಾಡಿ, ಇನ್ನು ಒಂದು ಎಸೆತ ಬಾಕಿ ಇರುವಂತೆಯೇ ಭಾರತಕ್ಕೆ ವಿಜಯಲಕ್ಷ್ಮಿ ಒಲಿಸಿದರು.

ತಿಲಕ್ ಹೆಸರಿಗೆ ವಿಶ್ವದಾಖಲೆ:

ಈ ಗೆಲುವಿನೊಂದಿಗೆ ತಿಲಕ್ ವರ್ಮಾ ಟಿ20 ಕ್ರಿಕೆಟ್‌ನಲ್ಲಿ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅಂದರೆ ಟಿ20 ಕ್ರಿಕೆಟ್​ನಲ್ಲಿ ಅವರು ಇದುವರೆಗೆ ಚೇಸಿಂಗ್ ವೇಳೆ ಅಜೇಯರಾಗಿ ಉಳಿದ 26 ಪಂದ್ಯಗಳಲ್ಲೂ ತಂಡ (ಭಾರತ/ಐಪಿಎಲ್) ನೂರಕ್ಕೆ ನೂರರಷ್ಟು ಗೆಲುವು ಸಾಧಿಸಿದೆ. ಹೀಗಾಗಿ ತಿಲಕ್ ವರ್ಮಾರನ್ನು ಹೊಸ ಚೇಸಿಂಗ್ ಮಾಸ್ಟರ್ ಎಂದರೆ ತಪ್ಪಾಗಲಾರದು.

ಇದನ್ನೂ ಓದಿ: RCB ತಂಡವನ್ನು ಹಾಡಿಹೊಗಳಿದ ಮಹೇಂದ್ರ ಸಿಂಗ್ ಧೋನಿ

ಒಟ್ಟಿನಲ್ಲಿ, ಒತ್ತಡದ ಪರಿಸ್ಥಿತಿಯಲ್ಲೂ ಧೃತಿಗೆಡದೆ ಕೋಚ್‌ಗಳ ಮಾರ್ಗದರ್ಶನವನ್ನು ಅಚ್ಚುಕಟ್ಟಾಗಿ ಪಾಲಿಸಿದ ತಿಲಕ್ ವರ್ಮಾ, ಕೇವಲ ರನ್‌ ಗಳಿಸಲಿಲ್ಲ. ಬದಲಿಗೆ ಭಾರತೀಯ ಕ್ರಿಕೆಟ್‌ನ ಮುಂದಿನ ನಂಬಿಕಸ್ಥ ‘ಫಿನಿಷರ್’ ತಾನೇ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ
ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ