AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tim Paine: ಎಲ್ಲ ಮಾದರಿ ಕ್ರಿಕೆಟ್​ನಿಂದ ಟಿಮ್ ಪೇನ್ ಬ್ರೇಕ್: ಆಸ್ಟ್ರೇಲಿಯಾಕ್ಕೆ ಪ್ಯಾಟ್ ಕಮಿನ್ಸ್ ನೂತನ ನಾಯಕ

Pat Cummins: ನಾಯಕತ್ವದಿಂದ ಕೆಳಗಿಳಿದ ಬಳಿಕ ಟಿಮ್ ಪೇನ್ ಎಲ್ಲ ಮಾದರಿ ಕ್ರಿಕೆಟ್​ನಿಂದ ಕೆಲ ಸಮಯ ರಜೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ ಟೆಸ್ಟ್​ಗೆ ಪ್ಯಾಟ್ ಕಮಿನ್ಸ್ ಅವರನ್ನು ನೂತನ ನಾಯಕನನ್ನಾಗಿ ಆಯ್ಕೆ ಮಾಡಿದೆ. ಸ್ಟೀವ್ ಸ್ಮಿತ್ ಉಪ ನಾಯಕನಾಗಿದ್ದಾರೆ.

Tim Paine: ಎಲ್ಲ ಮಾದರಿ ಕ್ರಿಕೆಟ್​ನಿಂದ ಟಿಮ್ ಪೇನ್ ಬ್ರೇಕ್: ಆಸ್ಟ್ರೇಲಿಯಾಕ್ಕೆ ಪ್ಯಾಟ್ ಕಮಿನ್ಸ್ ನೂತನ ನಾಯಕ
Tim Pain and Pat Cummins
TV9 Web
| Edited By: |

Updated on: Nov 26, 2021 | 8:54 AM

Share

ಆಸ್ಟ್ರೇಲಿಯಾ ಕ್ರಿಕೆಟ್ ರಂಗದಲ್ಲಿ ನೂತನ ಬೆಳವಣಿಗೆಗಳು ನಡೆಯುತ್ತಿದ್ದು, ಇತ್ತೀಚೆಗಷ್ಟೆ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್​ (Australia Cricket Team) ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿದಿದ್ದ ಟಿಮ್ ಪೇನ್ (Tim Paine) ಇದೀಗ ಎಲ್ಲ ಮಾದರಿ ಕ್ರಿಕೆಟ್​ನಿಂದ ಕೆಲ ಸಮಯ ರಜೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಕ್ರಿಕೆಟ್ ಆಸ್ಟ್ರೇಲಿಯಾ (Cricket Australia) ಟೆಸ್ಟ್​ಗೆ ಪ್ಯಾಟ್ ಕಮಿನ್ಸ್ (Pat Cummins) ಅವರನ್ನು ನೂತನ ನಾಯಕನನ್ನಾಗಿ ಆಯ್ಕೆ ಮಾಡಿದೆ. 2017-18ರ ಆ್ಯಶಸ್​ ಸರಣಿ ಆರಂಭಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾದ ಮಾಜಿ ಸಹದ್ಯೋಗಿಗೆ ಅಶ್ಲೀಲ ಚಿತ್ರಗಳ ಮತ್ತು ಸಂದೇಶ ರವಾನೆ ಆರೋಪ ಟಿಮ್ ಪೇನ್ ಮೇಳೆ ಕೇಳಿ ಬಂದಿತ್ತು. ಇದೇ ಕಾರಣ ಈ ಪ್ರಕರಣದ ಬಗ್ಗೆ ತನಿಖೆಗೆ ನಡೆಯುತ್ತಿರುವ ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ಘೋಷಿಸಿದ್ದರು. ಸದ್ಯ ಮಾನಸಿಕ ಆರೋಗ್ಯ ಸುಧಾರಣೆಗೆ ಕ್ರಿಕೆಟ್​ನಿಂದ ಕೊಂಚ ವಿರಾಮ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ.

ಬಹುನಿರೀಕ್ಷಿತ ಆ್ಯಶಸ್ ಟೆಸ್ಟ್ ಸರಣಿಗೆ ಇನ್ನೇನು ಕೆಲವೇ ದಿನಗಳಿರುವಾಗ ಈ ಬೆಳವಣಿಗೆ ನಡೆದಿರುವುದು ಆಸ್ಟ್ರೇಲಿಯಾ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈ ಹಿಂದೆ ಸ್ಟೀವ್ ಸ್ಮಿತ್ ಚೆಂಡು ವಿರೂಪ ಪ್ರಕರಣದಲ್ಲಿ ನಿಷೇಧಕ್ಕೊಳಗಾದಾಗ ಟಿಮ್ ಆಸ್ಟ್ರೇಲಿಯಾ ತಂಡದ ನಾಯಕರಾಗಿ ನೇಮಕವಾಗಿದ್ದರು. ಸದ್ಯ ಸಹೋದ್ಯೋಗಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಆಸ್ಟ್ರೇಲಿಯಾ ಟಿಮ್ ಪೈನ್ ವಿರುದ್ಧ ತನಿಖೆಯನ್ನು ನಡೆಸುತ್ತಿದೆ. ಈ ಪ್ರಕರಣದ ಕಾರಣದಿಂದಾಗಿ ಟಿಮ್ ಪೇನ್ ಆಸ್ಟ್ರೇಲಿಯಾ ಕ್ರಿಕೆಟ್ ತಮಡದ ನಾಯಕತ್ವದಿಂದ ಕೆಳಗಿಳಿದು, ವಿರಾಮ ತೆಗೆದುಕೊಂಡಿದ್ದಾರೆ.

ನಾಯಕತ್ವ ತ್ಯಜಿಸಿದ ಬಗ್ಗೆ ಮಾತನಾಡಿದ್ದ ಟಿಮ್ ಪೇನ್, ‘ಇದು ನಂಬಲಾಗದ ನಿರ್ಧಾರ. ಆದರೆ ಕ್ರಿಕೆಟ್ ಆಸ್ಟ್ರೇಲಿಯಾ ಹಾಗೂ ನನ್ನ ಕುಟುಂಬದ ಪಾಲಿಗೆ ಇದು ಸರಿಯಾದ ನಿರ್ಧಾರವಾಗಿದೆ. ಆಗ ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದೆ. ಈ ಘಟನೆ ಸಾರ್ವಜನಿಕವಾಗಿ ದೊಡ್ಡ ಚರ್ಚೆಯಾಗಿದೆ. ಈ ಪ್ರಕರಣ ಸಬಂಧ ನನ್ನ ಹೆಂಡತಿ, ಕುಟುಂಬಸ್ಥರು ಹಾಗೂ ಕ್ರಿಕೆಟ್​ ಆಸ್ಟ್ರೇಲಿಯಾಗೆ ನಾನು ಕ್ಷಮೆಯಾಚಿಸುತ್ತೇನೆ. ನಾಯಕತ್ವದಿಂದ ಕೆಳಗಿಳಿಯುವ ತಕ್ಷಣದ ನಿರ್ಧಾರ ಸರಿಯಾಗಿದೆ ಎಂದು ನಾನು ನಂಬುತ್ತೇನೆ. ಆಸೀಸ್ ಸರಣಿಗೂ ಮುನ್ನ ದೊಡ್ಡ ವಿವಾದ ಸೃಷ್ಟಿಸಲು ನಾನು ಬಯಸುವುದಿಲ್ಲ. ಹೀಗಾಗಿ ನಾಯಕತ್ವ ಸ್ಥಾನದಿಂದ ಕೆಳಗಿಳಿಯುತ್ತಿದ್ದೇನೆ’ ಎಂದು ಟಿಮ್ ತಿಳಿಸಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾ ಹೊಸ ನಾಯಕನ ಘೋಷಣೆ ಕೂಡ ಮಾಡಿದೆ. ತಂಡದ ಸ್ಟಾರ್ ವೇಗದ ಬೌಲರ್  ಪ್ಯಾಟ್ ಕಮಿನ್ಸ್ ಮುಂದಿನ ಆ್ಯಶಸ್ ಸರಣಿಯಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಲಿದ್ದಾರೆ. ಈ ಮೂಲಕ 65 ವರ್ಷಗಳ ನಂತರ ಆಸ್ಟ್ರೇಲಿಯಾ ತಂಡವನ್ನು ವೇಗದ ಬೌಲರ್ ಒಬ್ಬರು ತಂಡಕ್ಕೆ ನಾಯಕನಾಗಿ ಆಯ್ಕೆಯಾಗಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಆಸ್ಟ್ರೇಲಿಯಾ ತಂಡವನ್ನು ನಾಯಕನಾಗಿ ಮುನ್ನಡೆಸುವ 47ನೇ ಆಟಗಾರ ಎನಿಸಿದ್ದಾರೆ. ಸ್ಟೀವ್ ಸ್ಮಿತ್ ಉಪ ನಾಯಕನಾಗಿದ್ದಾರೆ.

Ajinkya Rahane: ಮುಂದುವರೆದ ಅಜಿಂಕ್ಯಾ ರಹಾನೆ ಕಳಪೆ ಆಟ: ವಿವಿಎಸ್ ಲಕ್ಷ್ಮಣ್​ರಿಂದ ಮಹತ್ವದ ಹೇಳಿಕೆ

IND vs NZ, 1st Test, Day 2: ಕುತೂಹಲ ಕೆರಳಿಸಿದ ಎರಡನೇ ದಿನದಾಟ: ಶತಕದತ್ತ ಅಯ್ಯರ್: 400ರ ಗಡಿ ದಾಟುತ್ತಾ ಭಾರತ

(Tim Paine To Take Leave From All Cricket and Pat Cummins named Australian Test captain)

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ