AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಎಸೆತಗಳಲ್ಲಿ 6 ಸಿಕ್ಸರ್‌; ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ ತಿಸಾರ ಪೆರೆರಾ

Asian Legends League 2025: ಏಷ್ಯನ್ ಲೆಜೆಂಡ್ಸ್ ಲೀಗ್‌ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ತಂಡ ಅಫ್ಘಾನಿಸ್ತಾನ ಪಠಾಣ್ಸ್ ವಿರುದ್ಧ ಬೃಹತ್ ಮೊತ್ತ ಕಲೆಹಾಕಿದೆ. ಈ ಪಂದ್ಯದಲ್ಲಿ ಲಂಕಾ ಬ್ಯಾಟರ್ ತಿಸಾರ ಪೆರೆರಾ ಸ್ಫೋಟಕ ಶತಕ ಬಾರಿಸಿದಲ್ಲದೆ ಕೊನೆಯ ಓವರ್‌ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿ ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದರು. ಪೆರೆರಾ ಇನ್ನಿಂಗ್ಸ್​ನಿಂದಾಗಿ ಲಂಕಾ ತಂಡ 20 ಓವರ್‌ಗಳಲ್ಲಿ 3 ವಿಕೆಟ್‌ಗಳಿಗೆ 230 ರನ್ ಗಳಿಸಿದೆ

6 ಎಸೆತಗಳಲ್ಲಿ 6 ಸಿಕ್ಸರ್‌; ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ ತಿಸಾರ ಪೆರೆರಾ
Thisara Perera
ಪೃಥ್ವಿಶಂಕರ
|

Updated on: Mar 15, 2025 | 9:57 PM

Share

ಉದಯಪುರದ ಮೀರಜ್ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯನ್ ಲೆಜೆಂಡ್ಸ್​ ಲೀಗ್​ನಲ್ಲಿ ಇಂದು ಶ್ರೀಲಂಕನ್ ಲಯನ್ಸ್ ಹಾಗೂ ಅಫ್ಘಾನಿಸ್ತಾನ ಪಠಾಣ್ಸ್​ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕನ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು 230 ರನ್ ಕಲೆಹಾಕಿತು. ತಂಡ ಇಷ್ಟೊಂದು ಬೃಹತ್ ಮೊತ್ತ ಕಲೆಹಾಕುವಲ್ಲಿ ಆಲ್‌ರೌಂಡರ್ ತಿಸಾರ ಪೆರೆರಾ ಪ್ರಮುಖ ಪಾತ್ರವಹಿಸಿದರು. ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಪೆರೆರಾ ಸ್ಫೋಟಕ ಬ್ಯಾಟಿಂಗ್ ಮೂಲಕ ಕೇವಲ 36 ಎಸೆತಗಳಲ್ಲೇ ಶತಕ ಸಿಡಿಸಿದರು.

ಫೆರ್ನಾಂಡೊ 81 ರನ್‌

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕ ತಿಲಕರತ್ನೆ ದಿಲ್ಶನ್ ಕೇವಲ 8 ರನ್ ಗಳಿಸಿ ಔಟಾದರು. ಆದರೆ ಇದಾದ ನಂತರ, ಮಾವನ್ ಫೆರ್ನಾಂಡೊ ಔಟಾಗದೆ 81 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಆದರೆ ಆ ಬಳಿಕ ಬಂದ ಪೆರೆರಾ ಪಂದ್ಯದ ಗತಿಯನ್ನೇ ಬದಲಿಸಿದರು. ವಾಸ್ತವವಾಗಿ ಶ್ರೀಲಂಕಾದ ಮಾಜಿ ಸ್ಫೋಟಕ ಆಲ್‌ರೌಂಡರ್ ತಿಸಾರ ಪೆರೆರಾ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಕೆಲವು ಸ್ಫೋಟಕ ಇನ್ನಿಂಗ್ಸ್‌ಗಳನ್ನು ಆಡಿದ್ದರು. ಇದರಲ್ಲಿ 2014 ರ ಟಿ20 ವಿಶ್ವಕಪ್‌ನ ಫೈನಲ್ ವಿಶೇಷವಾಗಿತ್ತು.

20ನೇ ಓವರ್​ನಲ್ಲಿ 39 ರನ್

ಆದರೆ 4 ವರ್ಷಗಳ ಹಿಂದೆ ಅಂದರೆ 2021 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾದ ತಿಸಾರ, ಇದೀಗ ಏಷ್ಯನ್ ಲೆಜೆಂಡ್ಸ್ ಲೀಗ್​ನಲ್ಲಿ ರನ್​ಗಳ ಸುನಾಮಿ ಎಬ್ಬಿಸಿದರು. ಅದರಲ್ಲೂ ಇನ್ನಿಂಗ್ಸ್‌ನ 20 ನೇ ಓವರ್‌ನಲ್ಲಿ ಅಯಾನ್ ಖಾನ್ ಅವರ ಪ್ರತಿಯೊಂದು ಎಸೆತಕ್ಕೂ ಸಿಕ್ಸರ್ ಬಾರಿಸುವ ಮೂಲಕ ಪೆರೆರಾ ಸಂಚಲನ ಸೃಷ್ಟಿಸಿದರು. ಅಂದರೆ ಅವರು 20ನೇ ಓವರ್‌ನಲ್ಲಿ 6 ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಈ ಪಂದ್ಯಾವಳಿಯ ಇತಿಹಾಸದಲ್ಲಿ ಸತತ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಓವರ್‌ನಲ್ಲಿ 6 ಸಿಕ್ಸರ್​ಗಳಲ್ಲದೆ 3 ವೈಡ್ ಕೂಡ ಬಂದವು. ಹೀಗಾಗಿ ಶ್ರೀಲಂಕಾ ಆ ಓವರ್‌ನಲ್ಲಿ 39 ರನ್‌ ಗಳಿಸಿತು.

ಕೇವಲ 35 ಎಸೆತಗಳಲ್ಲಿ ಭರ್ಜರಿ ಶತಕ

ಕೊನೆಯ ಓವರ್​ಲ್ಲಿ 6 ಸಿಕ್ಸರ್‌ಗಳನ್ನು ಹೊಡೆದ ಪೆರೆರಾ ತಮ್ಮ ಶತಕವನ್ನೂ ಪೂರ್ಣಗೊಳಿಸಿದರು. ಇನ್ನಿಂಗ್ಸ್‌ನ ಕೊನೆಯ ಓವರ್‌ಗೆ ಮುನ್ನ, ತಿಸಾರ ಕೇವಲ 30 ಎಸೆತಗಳಲ್ಲಿ 7 ಸಿಕ್ಸರ್‌ಗಳೊಂದಿಗೆ 72 ರನ್ ಗಳಿಸಿದ್ದರು. ನಂತರ ಮುಂದಿನ 5 ಸಿಕ್ಸರ್‌ಗಳ ಸಹಾಯದಿಂದ, ಕೇವಲ 35 ಎಸೆತಗಳಲ್ಲಿ ಭರ್ಜರಿ ಶತಕ ಗಳಿಸುವ ಮೂಲಕ ಅಭಿಮಾನಿಗಳನ್ನು ರೋಮಾಂಚನಗೊಳಿಸಿದರು. ಕೊನೆಯ ಎಸೆತದಲ್ಲಿ ಒಂದು ಸಿಕ್ಸರ್ ಬಾರಿಸಿ ಅಜೇಯರಾಗುಳಿದ ಪೆರೆರಾ, ಕೇವಲ 36 ಎಸೆತಗಳಲ್ಲಿ 13 ಸಿಕ್ಸರ್ ಮತ್ತು 2 ಬೌಂಡರಿಗಳ ಸಹಿತ 108 ರನ್ ಗಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ