Yusuf Pathan: ರಾಜಕೀಯ ಅಖಾಡಕ್ಕೆ ಯೂಸುಫ್ ಪಠಾಣ್: ಕಾಂಗ್ರೆಸ್ ವಿರುದ್ಧ ಸ್ಪರ್ಧೆ

Yusuf Pathan: ಟೀಮ್ ಇಂಡಿಯಾ ಪರ 57 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಪಠಾಣ್ 810 ರನ್ ಕಲೆಹಾಕಿದ್ದಾರೆ. ಅಲ್ಲದೆ ಬೌಲಿಂಗ್​ನಲ್ಲೂ ಮಿಂಚುವ ಮೂಲಕ 33 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 22 ಟಿ20 ಪಂದ್ಯಗಳನ್ನಾಡಿರುವ ಅವರು 236 ರನ್ ಬಾರಿಸಿದ್ದಾರೆ. ಇದೀಗ ರಾಜಕೀಯದಲ್ಲಿ 2ನೇ ಇನಿಂಗ್ಸ್ ಆರಂಭಿಸಲು ಯೂಸುಫ್ ಪಠಾಣ್ ಮುಂದಾಗಿರುವುದು ವಿಶೇಷ.

Yusuf Pathan: ರಾಜಕೀಯ ಅಖಾಡಕ್ಕೆ ಯೂಸುಫ್ ಪಠಾಣ್: ಕಾಂಗ್ರೆಸ್ ವಿರುದ್ಧ ಸ್ಪರ್ಧೆ
Yusuf Pathan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Mar 11, 2024 | 7:05 AM

ದೇಶದಲ್ಲಿ ಸಾರ್ವತ್ರಿಕ ಚುನಾವಣಾ ಕಣ ರಂಗೇರುತ್ತಿದೆ. ಈಗಾಗಲೇ ಎಲ್ಲಾ ರಾಜಕೀಯ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿಸಿಕೊಂಡಿದ್ದು, ಇದರ ನಡುವೆ ಅನಿರೀಕ್ಷಿತ ಎಂಬಂತೆ ಟೀಮ್ ಇಂಡಿಯಾ ಮಾಜಿ ಆಟಗಾರ ಯೂಸುಫ್ ಪಠಾಣ್ (Yusuf Pathan) ಹೆಸರು ಚುನಾವಣಾ ಅಂಗಳದಲ್ಲಿ ಕಾಣಿಸಿಕೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂದಾಳತ್ವದ ತೃಣಮೂಲ ಕಾಂಗ್ರೆಸ್ ಪಕ್ಷವು  42 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಯೂಸುಫ್ ಪಠಾಣ್ ಹೆಸರು ಕೂಡ ಇರುವುದು ವಿಶೇಷ.

ಯೂಸುಫ್ ಪಠಾಣ್ ಮುಂಬರುವ ಚುನಾವಣೆಯಲ್ಲಿ  ಪಶ್ಚಿಮ ಬಂಗಾಳದ ಬರ್ಹಾಂಪುರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಕಳೆದ ಬಾರಿ ಈ ಕ್ಷೇತ್ರದಿಂದ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಧೀರ್ ರಂಜನ್ ಚೌಧರಿ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಕಾಂಗ್ರೆಸ್​ನ ಹಾಲಿ ಸಂಸದರ ವಿರುದ್ಧವೇ ಯೂಸುಫ್ ಪಠಾಣ್ ಅವರನ್ನು ಟಿಎಂಸಿ ಕಣಕ್ಕಿಳಿಸಿರುವುದು ವಿಶೇಷ.

ಗುಜರಾತ್ ಮೂಲದ ಯೂಸುಫ್ ಪಠಾಣ್ ಈ ಹಿಂದೆ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದಾರೆ. ಹೀಗಾಗಿ ಪಶ್ಚಿಮ ಬಂಗಾಳದಾದ್ಯಂತ ಪಠಾಣ್ ಜನಪ್ರಿಯರು. ಹೀಗಾಗಿ ಟಿಎಂಸಿ ಪಕ್ಷದ ಕಟ್ಟಾ ವಿಮರ್ಶಕ ಅಧೀರ್ ರಂಜನ್ ಅವರ ವಿರುದ್ಧ ಕೆಕೆಆರ್ ತಂಡದ ಮಾಜಿ ಆಟಗಾರನನ್ನು ಕಣಕ್ಕಿಳಿಸಲಾಗಿದೆ.

ಟಿಎಂಸಿ ಭಾನುವಾರ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇದರೊಂದಿಗೆ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್ ಜೊತೆಗಿನ ಒಪ್ಪಂದವನ್ನು ತೃಣಮೂಲ ಕಾಂಗ್ರೆಸ್ ಕಡಿತಗೊಳಿಸಿರುವುದು ಖಚಿತವಾಗಿದೆ. ಅಲ್ಲದೆ ಈ ಹಿಂದೆ ಅಮಾನತುಗೊಂಡ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಕೃಷ್ಣನಗರದ ಅಭ್ಯರ್ಥಿ ಎಂದು ಘೋಷಿಸಿದೆ. ಹಾಗೆಯೇ ಬಸಿರ್ಹತ್‌ನಿಂದ ಕಳೆದ ಬಾರಿ ಕಣಕ್ಕಿಳಿದಿದ್ದ ನುಶ್ರತ್ ಜಹಾನ್ ಅವರನ್ನು ಈ ಸಲ ಕೈಬಿಟ್ಟಿದ್ದಾರೆ.

ಡೈಮಂಡ್ ಹಾರ್ಬರ್‌ನಿಂದ ಅಭಿಷೇಕ್ ಬ್ಯಾನರ್ಜಿ, ಜಾದವ್‌ಪುರದಿಂದ ಸಯೋನಿ ಘೋಷ್, ಅಸನ್ಸೋಲ್‌ನಿಂದ ಶತ್ರುಘ್ನ ಸಿನ್ಹಾ, ಬಿರ್‌ಭೂಮ್‌ನಿಂದ ಸತಾಬ್ದಿ ರಾಯ್, ಹೂಗ್ಲಿಯಿಂದ ರಚನಾ ಬ್ಯಾನರ್ಜಿ, ಕೋಲ್ಕತ್ತಾ ದಕ್ಷಿಣದಿಂದ ಮಾಲಾ ರಾಯ್, ಬಸಿರ್‌ಹತ್‌ನಿಂದ ಹಾಜಿ ನೂರುಲ್ ಇಸ್ಲಾಂ ಮತ್ತು ದಮ್‌ನಿಂದ ಸೌಗತಾ ರಾಯ್ ಸ್ಪರ್ಧಿಸಲಿದ್ದಾರೆ.

ಹಾಗೆಯೇ ಬರ್ಹಾಂಪುರ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ರಾಜಕೀಯದಲ್ಲೂ ಹೊಸ ಇನಿಂಗ್ಸ್ ಆರಂಭಿಸಲು ಯೂಸುಫ್ ಪಠಾಣ್ ಮುಂದಾಗಿದ್ದಾರೆ.

ಇದನ್ನೂ ಓದಿ: Team India: ನಂಬರ್​ 1 ಸ್ಥಾನದೊಂದಿಗೆ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ಯೂಸುಫ್ ಪಠಾಣ್ ವೃತ್ತಿಜೀವನ:

ಟೀಮ್ ಇಂಡಿಯಾ ಪರ 57 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಪಠಾಣ್ 810 ರನ್ ಕಲೆಹಾಕಿದ್ದಾರೆ. ಅಲ್ಲದೆ ಬೌಲಿಂಗ್​ನಲ್ಲೂ ಮಿಂಚುವ ಮೂಲಕ 33 ವಿಕೆಟ್ ಗಳನ್ನು ಪಡೆದಿದ್ದಾರೆ. ಇನ್ನು 22 ಟಿ20 ಪಂದ್ಯಗಳನ್ನಾಡಿರುವ ಅವರು 236 ರನ್ ಬಾರಿಸಿದ್ದಾರೆ. ಹಾಗೆಯೇ ಟಿ20 ವಿಶ್ವಕಪ್ ಹಾಗೂ ಏಕದಿನ ವಿಶ್ವಕಪ್ ಗೆದ್ದ ಟೀಮ್ ಇಂಡಿಯಾದ ಭಾಗವಾಗಿದ್ದವರಲ್ಲಿ ಯೂಸುಫ್ ಪಠಾಣ್ ಕೂಡ ಒಬ್ಬರು ಎಂಬುದು ವಿಶೇಷ.

ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ಪರ 174 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಯೂಸುಫ್ ಪಠಾಣ್ 1415 ರನ್ ಮತ್ತು 42 ವಿಕೆಟ್ ಕಬಳಿಸಿದ್ದಾರೆ. ಈಗಾಗಲೇ ಸ್ಪರ್ಧಾತ್ಮಕ ಕ್ರಿಕೆಟ್​ಗೆ ವಿದಾಯ ಹೇಳಿರುವ ಪಠಾಣ್ ಇದೀಗ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

Published On - 3:20 pm, Sun, 10 March 24

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು