6 ಸಿಕ್ಸ್​, 2 ಫೋರ್: ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್​ಮನ್

TNPL: ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ತಮಿಳುನಾಡು ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದರು. ಟಿಎನ್‌ಪಿಎಲ್‌ನಲ್ಲೂ ಅವರು ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮುಂದುವರೆದಿದೆ.

6 ಸಿಕ್ಸ್​, 2 ಫೋರ್: ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಮುಂಬೈ ಇಂಡಿಯನ್ಸ್ ಬ್ಯಾಟ್ಸ್​ಮನ್
Sanjay Yadav
Follow us
| Updated By: ಝಾಹಿರ್ ಯೂಸುಫ್

Updated on: Jul 02, 2022 | 1:49 PM

ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ (England vs India) ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವಿನ ಐದನೇ ಟೆಸ್ಟ್ ಪಂದ್ಯ ಜುಲೈ 1 ರಿಂದ ಶುರುವಾಗಿದೆ. ಭಾರತೀಯ ಕ್ರಿಕೆಟ್ ಪ್ರೇಮಿಗಳ ಕಣ್ಣು ಈ ಟೆಸ್ಟ್‌ನತ್ತ ನೆಟ್ಟಿದ್ದರೆ ಇತ್ತ ದೇಶೀಯ ಟಿ20 ಲೀಗ್​ನಲ್ಲಿ ಅಬ್ಬರಿಸುವ ಮೂಲಕ ಸಂಜಯ್ ಯಾದವ್ (Sanjay Yadav) ಎಲ್ಲರ ಗಮನವನ್ನು ತನ್ನತ್ತ ಸೆಳೆದಿದ್ದಾರೆ. ದೇಶೀಯ ಅಂಗಳದಲ್ಲಿ ತಮಿಳುನಾಡು ಪ್ರೀಮಿಯರ್ ಲೀಗ್‌ನಲ್ಲಿ (TNPL) ನಡೆಯುತ್ತಿದ್ದು, ಈ ಲೀಗ್​ನ 7ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ನೆಲ್ಲೈ ರಾಯಲ್ ಕಿಂಗ್ಸ್ ಮತ್ತು ದಿಂಡಿಗಲ್ ಡ್ರಾಗನ್ಸ್ (Nellai Royal Kings vs Dindigul Dragons) ನಡುವಿನ ಈ ಪಂದ್ಯವು ಮಳೆಯ ಕಾರಣ ತಡವಾಗಿ ಆರಂಭವಾಗಿತ್ತು. ಅಲ್ಲದೆ ವಿಳಂಬವಾದ ಕಾರಣ ಪಂದ್ಯವನ್ನು 12 ಓವರ್​ಗಳಿಗೆ ಸೀಮಿತಗೊಳಿಸಲಾಗಿತ್ತು. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ನೆಲ್ಲೈ ರಾಯಲ್ ಕಿಂಗ್ಸ್ ತಂಡದ ನಾಯಕ ಬೌಲಿಂಗ್ ಆಯ್ದುಕೊಂಡರು. ಇತ್ತ ದಿಂಡಿಗಲ್ ಪರ ಆರಂಭಿಕರಾಗಿ ಕಣಕ್ಕಿಳಿದ ವಿಶಾಲ್ ವೈದ್ಯ 45 ರನ್ (21 ಎಸೆತ) ಮತ್ತು ಹರಿ ನಿಶಾಂತ್ 37 ರನ್ (27 ಎಸೆತ) ಬಾರಿಸಿ ಅಬ್ಬರಿಸಿದರು. ಪರಿಣಾಮ ದಿಂಡಿಗಲ್ ಡ್ರಾಗನ್ಸ್ ತಂಡವು ನಿಗದಿತ 12 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 130 ರನ್​ ಕಲೆಹಾಕಿತು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ನೆಲ್ಲೈ ರಾಯಲ್ ಕಿಂಗ್ಸ್ ತಂಡವು ಮೊದಲ 5 ಓವರ್‌ಗಳಲ್ಲಿ ಕಲೆಹಾಕಿದ್ದು ಕೇವಲ 34 ರನ್‌ಗಳು ಮಾತ್ರ. ಆರಂಭಿಕರಿಬ್ಬರು ಔಟಾದ ಬಳಿಕ ಕಣಕ್ಕಿಳಿದ ಬಾಬಾ ಅಪರಾಜಿತ್ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಆಡಿದ ಸಂಜಯ್ ಯಾದವ್ ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿಬಿಟ್ಟರು. ಸ್ಪೋಟಕ ಇನಿಂಗ್ಸ್ ಆಡಿದ ಈ ಜೋಡಿ ದಿಂಡಿಗಲ್ ಬೌಲರ್​ಗಳ ಬೆಂಡೆತ್ತಿದರು. ಅದರಲ್ಲೂ ಸಂಜಯ್ ಯಾದವ್ ಆರ್ಭಟವನ್ನು ತಡೆಯಲು ಡ್ರಾಗನ್ಸ್ ತಂಡದ ಬೌಲರ್​ಗಳು ಹರಸಾಹಸ ಪಡಬೇಕಾಯಿತು.

9ನೇ ಓವರ್​ನಲ್ಲಿ 4 ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಸಂಜಯ್ ಯಾದವ್ ಪಂದ್ಯವನ್ನು ಏಕಪಕ್ಷೀಯ ಮಾಡಿದರು. ಅತ್ತ ಯಾದವ್​ಗೆ ಸಾಥ್ ನೀಡಿದ ಬಾಬಾ ಅಪರಾಜಿತ್ ಕೂಡ ಅರ್ಧಶತಕ ಪೂರೈಸಿದರು. ಅದರಂತೆ ಕೇವಲ 19 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 2 ಫೋರ್​ನೊಂದಿಗೆ ಸಂಜಯ್ ಯಾದವ್ 56 ರನ್ ಬಾರಿಸಿದರು. ಇನ್ನು 4 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ ಬಾಬಾ ಅಪರಾಜಿತ್ 30 ಎಸೆತಗಳಲ್ಲಿ 59 ರನ್ ಸಿಡಿಸಿದರು. ಪರಿಣಾಮ ಕೇವಲ 11 ಓವರ್​ಗಳಲ್ಲಿ 2 ವಿಕೆಟ್ ನಷ್ಟದೊಂದಿಗೆ 133 ರನ್ ಬಾರಿಸುವ ಮೂಲಕ ನೆಲ್ಲೈ ರಾಯಲ್ ಕಿಂಗ್ಸ್ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಅಲ್ಲದೆ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತುವ ಮೂಲಕ ಸಂಜಯ್-ಅಪರಾಜಿತ್ ಗೆಲುವಿನ ರೂವಾರಿ ಎನಿಸಿಕೊಂಡರು.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ದೇಶೀಯ ಅಂಗಳದಲ್ಲಿ ಸಂಜಯ್ ಯಾದವ್ ತಮ್ಮ ಸ್ಪೋಟಕ ಬ್ಯಾಟಿಂಗ್​ ಹೆಸರುವಾಸಿಯಾಗಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ತಮಿಳುನಾಡು ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದರು. ಟಿಎನ್‌ಪಿಎಲ್‌ನಲ್ಲೂ ಅವರು ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮುಂದುವರೆದಿದೆ. ಈ ಸೀಸನ್​ನ ಮೊದಲ ಪಂದ್ಯದಲ್ಲಿ ಕೇವಲ 47 ಎಸೆತಗಳಲ್ಲಿ 87 ರನ್ ಬಾರಿಸಿದ್ದರು. ವಿಶೇಷ ಎಂದರೆ ಈ ಸ್ಪೋಟಕ ಯುವ ಆಟಗಾರ ಈ ಬಾರಿಯ ಐಪಿಎಲ್​ನಲ್ಲಿ ಏಕೈಕ ಪಂದ್ಯವಾಡಿದ್ದರು. ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಸಂಜಯ್ ಯಾದವ್​ಗೆ ಒಂದು ಪಂದ್ಯದಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು. ಈ ಪಂದ್ಯದಲ್ಲಿ 12 ಎಸೆತಗಳಲ್ಲಿ 23 ರನ್ ಬಾರಿಸಿ ಔಟಾಗಿದ್ದರು. ಆ ಬಳಿಕ ಚಾನ್ಸ್ ನೀಡಿರಲಿಲ್ಲ. ಇದೀಗ ತಮಿಳುನಾಡು ಪ್ರೀಮಿಯರ್ ಲೀಗ್​ನಲ್ಲಿ ಅಬ್ಬರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್