ಇಂದು (ನವೆಂಬರ್ 17) ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಆರಂಭವಾಗಲಿದೆ. ಭಾರತ ತಂಡದ ಮಾಜಿ ಕೋಚ್ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ನಿರ್ಗಮನದ ನಂತರದ ಮೊದಲ ಪಂದ್ಯ ಇದಾಗಿದ್ದು, ಹೊಸ ಹಾದಿಯಲ್ಲಿ ಸಾಗಲು ಭಾರತ ತಂಡ ಉತ್ಸುಕವಾಗಿದೆ. ಹೊಸ ಮುಖಗಳಿಗೆ ತಂಡದಲ್ಲಿ ಅವಕಾಶ ನೀಡಿರುವ ಭಾರತ, ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಸೇಡು ತೀರಿಸುವ ಉತ್ಸಾಹದಲ್ಲಿದೆ. ಇತ್ತ ನ್ಯೂಜಿಲೆಂಡ್ ತಂಡಕ್ಕೆ ನಾಯಕ ಕೇನ್ ವಿಲಿಯಮ್ಸನ್ ಇರದಿರುವುದು ತುಸು ಹಿನ್ನೆಡೆಯಾಗಿದ್ದರೂ ಕೂಡ, ಈಗಾಗಲೇ ಟಿಮ್ ಸೌಥಿ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ಹಲವು ಪಂದ್ಯದಲ್ಲಿ ತಂಡ ಮುನ್ನಡೆಸಿದ ಅನುಭವ ಹೊಂದಿದ್ದಾರೆ. ವಿಶ್ವಕಪ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಬೇಸರದಲ್ಲಿರುವ ನ್ಯೂಜಿಲೆಂಡ್ಗೆ ಪುನಶ್ಚೇತನಗೊಂಡಿರುವ ಭಾರತ ತಂಡ ಹೇಗೆ ಪ್ರತಿಕ್ರಿಯೆ ನೀಡಲಿದೆ ಎಂಬುದು ಸದ್ಯದ ಕುತೂಹಲ.
ಕಳೆದ ಬಾರಿ ನ್ಯೂಜಿಲೆಂಡಿನಲ್ಲಿ ನಡೆದಿದ್ದ ದ್ವಿಪಕ್ಷೀಯ ಟಿ20 ಸರಣಿಯಲ್ಲಿ 0-5 ಮುಖಾಂತರ ನ್ಯೂಜಿಲೆಂಡ್ ಸೋಲನುಭವಿಸಿತ್ತು. ಅದಕ್ಕೆ ಈ ಸರಣಿಯ ಮುಖಾಂತರ ಭಾರತದ ನೆಲದಲ್ಲೇ ಪ್ರತೀಕಾರ ತೀರಿಸಲು ಅವಕಾಶವಿದೆ. ಆದ್ದರಿಂದಲೇ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಇಂದಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ, ಎಲ್ಲಿ ವೀಕ್ಷಿಸಬಹುದು ಎಂಬ ಮಾಹಿತಿಗಳು ಇಲ್ಲಿವೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಪಂದ್ಯ ಎಲ್ಲಿ ನಡೆಯಲಿದೆ?
ಜೈಪುರದ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಎಷ್ಟು ಹೊತ್ತಿಗೆ ಆರಂಭವಾಗಲಿದೆ?
ಇಂದು (ನವೆಂಬರ್ 17, ಬುಧವಾರ) ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಟಾಸ್ ಸಂಜೆ 6.30ಕ್ಕೆ ನಡೆಯಲಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಪ್ರಸಾರ ಮಾಡಲಿದೆ. ಸ್ಟಾರ್ ಸ್ಪೋರ್ಟ್ಸ್ 1, ಸ್ಟಾರ್ ಸ್ಪೋರ್ಟ್ಸ್ 1 ಹೆಚ್ಡಿ, ಸ್ಟಾರ್ ಸ್ಪೋರ್ಟ್ಸ್ 1 ಕನ್ನಡ ಹಾಗೂ ಇತರ ಸ್ಟಾರ್ ಸ್ಪೋರ್ಟ್ಸ್ 1ನ ಪ್ರಾದೇಶಿಕ ಭಾಷೆಗಳಲ್ಲಿ ಪಂದ್ಯದ ನೇರ ಪ್ರಸಾರ ವೀಕ್ಷಿಸಬಹುದು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯವನ್ನು ಮೊಬೈಲ್ನಲ್ಲಿ ನೋಡುವುದು ಹೇಗೆ?
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಅಂತರಾಷ್ಟ್ರೀಯ ಪಂದ್ಯವನ್ನು ಹಾಟ್ಸ್ಟಾರ್ ಆಪ್ ಅಥವಾ ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಟಿವಿ9 ಕನ್ನಡ ವೆಬ್ಸೈಟ್ನಲ್ಲಿ ಕೂಡ ಪಂದ್ಯದ ಕ್ಷಣ ಕ್ಷಣದ ಅಪ್ಡೇಟ್ಸ್, ಸ್ಕೋರ್ಬೋರ್ಡ್ ಹಾಗೂ ಇತರ ಸುದ್ದಿಗಳು ಲಭ್ಯವಾಗಲಿವೆ.
ಇದನ್ನೂ ಓದಿ:
India vs New Zealand: ಭಾರತ-ನ್ಯೂಜಿಲೆಂಡ್ ಸರಣಿಯ ಸಂಪೂರ್ಣ ವೇಳಾಪಟ್ಟಿ
IND vs NZ: ಭಾರತ vs ನ್ಯೂಜಿಲೆಂಡ್: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ