AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs LSG, IPL 2023: ಐಪಿಎಲ್​ನಲ್ಲಿಂದು ಎರಡು ಹೈವೋಲ್ಟೇಜ್ ಪಂದ್ಯ: ರೋಚಕತೆ ಸೃಷ್ಟಿಸಿದ ಗುಜರಾತ್-ಲಖನೌ ಕದನ

RR vs SRH, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯಗಳು ನಡೆಯಲಿದೆ. ಮೊದಲ ಮ್ಯಾಚ್​ನಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಖನೌ ತಂಡ ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯದಲ್ಲಿ ರಾಜಸ್ಥಾನ್ ತಂಡ ​ಹೈದರಾಬಾದ್ ಅನ್ನು ಎದುರಿಸಲಿದೆ.

GT vs LSG, IPL 2023: ಐಪಿಎಲ್​ನಲ್ಲಿಂದು ಎರಡು ಹೈವೋಲ್ಟೇಜ್ ಪಂದ್ಯ: ರೋಚಕತೆ ಸೃಷ್ಟಿಸಿದ ಗುಜರಾತ್-ಲಖನೌ ಕದನ
GT vs LSG IPL 2023
Vinay Bhat
|

Updated on: May 07, 2023 | 7:19 AM

Share

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಎರಡು ಹೈವೋಲ್ಟೇಜ್ ಪಂದ್ಯಗಳು ನಡೆಯಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿರುವ ಮೊದಲ ಮ್ಯಾಚ್​ನಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟಾನ್ಸ್ ಮತ್ತು ಕ್ರುನಾಲ್ ಪಾಂಡ್ಯ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ (GT vs LSG) ತಂಡ ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ರಾಜಸ್ಥಾನ್ ರಾಯಲ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ (RR vs SRH) ಅನ್ನು ಎದುರಿಸಲಿದೆ. ಈ ಪಂದ್ಯ ಜೈಪುರದ ಸವಾಯ್ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ.

ಗುಜರಾತ್ vs ಲಖನೌ:

ಜಿಟಿ ತಂಡದ ಪ್ಲೇಯರ್ಸ್ ಭರ್ಜರಿ ಪ್ರದರ್ಶನ ತೋರುತ್ತಿದ್ದಾರೆ. ಉತ್ತಮ ರನ್​ರೇಟ್ ಕೂಡ ಹೊಂದಿ 14 ಅಂಕ ಪಡೆದು ಅಗ್ರಸ್ಥಾನದಲ್ಲಿದೆ. ನಾಯಕ ಹಾರ್ದಿಕ್ ಪಾಂಡ್ಯ ಲಯಕಂಡುಕೊಂಡಿರುವುದು ದೊಡ್ಡ ಪ್ಲಸ್ ಪಾಯಿಂಟ್. ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಸ್ಫೋಟಕ ಆರಂಭ ಒದಗಿಸಿದ್ದಾರೆ. ಅಭಿನವ್ ಮನೋಹರ್ ಸಿಕ್ಕ ಅವಕಾಶವನ್ನು ಬಳಸಿಕೊಂಡಿದ್ದಾರೆ. ಡೇವಿಡ್ ಮಿಲ್ಲರ್, ವಿಜಯ್ ಶಂಕರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್​ಗಳಾಗಿ ಗುರುತಿಸಿಕೊಂಡಿದ್ದಾರೆ. ಮೊಹಮ್ಮದ್ ಶಮಿ, ಮೋಹಿತ್ ಶರ್ಮಾ, ಜೋಶ್ವಾ ಲಿಟಲ್, ರಶೀದ್ ಖಾನ್ ಹಾಗೂ ನೂರ್ ಅಹ್ಮದ್ ಮಾರಕವಾಗಿದ್ದಾರೆ.

ಇತ್ತ ಲಖನೌ ತಂಡ ಕೂಡ ಅತ್ಯಂತ ಬಲಿಷ್ಠವಾಗಿದೆ. ತಂಡದ ನಾಯಕ ಕೆಎಲ್ ರಾಹುಲ್ ಟೂರ್ನಿಯಿಂದ ಹೊರಬಿದ್ದಿರುವುದು ಬೇಸರದ ಸಂಗತಿ. ಎಲ್​ಎಸ್​ಜಿಯಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್​ಗಳು ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ಖೈಲ್ ಮೇಯರ್ಸ್ ತಂಡಕ್ಕೆ ಭರ್ಜರಿ ಆರಂಭ ಒದಗಿಸುತ್ತಿದ್ದಾರೆ. ಆಯುಷ್ ಬದೋನಿ, ಮಾರ್ಕಸ್ ಸ್ಟಾಯಿನಿಸ್ ಹಾಗೂ ನಿಕೋಲಸ್ ಪೂರನ್ ಮಧ್ಯಮ ಕ್ರಮಾಂಕದ ಬಲವಾಗಿದ್ದು ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸುತ್ತಿದ್ದಾರೆ. ದೀಪಕ್ ಹೂಡ ಕಡೆಯಿಂದ ಇನ್ನಷ್ಟು ಉತ್ತಮ ಆಟ ಬರಬೇಕಿದೆ. ನಾಯಕ ಕ್ರುನಾಲ್ ಪಾಂಡ್ಯ ಕೂಡ ಆಲ್ರೌಂಡ್ ಪ್ರದರ್ಶನ ತೋರಬೇಕಿದೆ. ಬೌಲಿಂಗ್​ನಲ್ಲಿ ನವೀನ್ ಉಲ್ ಹಖ್, ಆವೇಶ್ ಖಾನ್, ರವಿ ಬಿಷ್ಟೋಯಿ ಹಾಗೂ ಅಮಿತ್ ಮಿಶ್ರಾ ಉತ್ತಮ ಫಾರ್ಮ್​ನಲ್ಲಿದ್ದಾರೆ.

ಇದನ್ನೂ ಓದಿ
Image
IPL 2023: ವೈಮನಸ್ಸು ಮರೆತು ಹಸ್ತಲಾಘವ ಮಾಡಿದ ವಿರಾಟ್ ಕೊಹ್ಲಿ-ಗಂಗೂಲಿ
Image
IPL 2023 Points Table: CSK ಗೆ ಜಯ, RCB ಗೆ ಸೋಲು: ಪಾಯಿಂಟ್ಸ್​ ಟೇಬಲ್​ನಲ್ಲಿ ಮಹತ್ವದ ಬದಲಾವಣೆ
Image
IPL 2023: ಇಬ್ಬರನ್ನು ಬ್ಯಾನ್ ಮಾಡುವಂತೆ ಆಗ್ರಹಿಸಿದ ಸುನಿಲ್ ಗವಾಸ್ಕರ್
Image
IPL 2023: ಫಿಲ್ ಸಾಲ್ಟ್ ಜೊತೆ ಮೊಹಮ್ಮದ್ ಸಿರಾಜ್ ಕಿರಿಕ್

Virat Kohli: ವಿಶ್ವ ದಾಖಲೆ ನಿರ್ಮಿಸಿದ ವಿರಾಟ್ ಕೊಹ್ಲಿ

ಆರ್​ಆರ್​ vs ಎಸ್​ಆರ್​ಹೆಚ್:

ಅರ್​ಆರ್​ ತಂಡಕ್ಕೆ ಯಶಸ್ವಿ ಜೈಸ್ವಾಲ್ ಮತ್ತು ಜೋಸ್ ಬಟ್ಲರ್ ಭರ್ಜರಿ ಆರಂಭ ಒದಗಿಸುತ್ತಿರುವುದು ಪ್ಲಸ್ ಪಾಯಿಂಟ್. ಅದರಲ್ಲೂ ಜೈಸ್ವಾಲ್ ಭರ್ಜರಿ ಫಾರ್ಮ್​ನಲ್ಲಿದ್ದು ಹಿಂದಿನ ಮುಂಬೈ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಅಬ್ಬರಿಸಿದ್ದರು. ಸರಿಯಾದ ಕ್ರಮಾಂಕದಲ್ಲಿ ಬ್ಯಾಟಿಂಗ್ ಸಿಗದೆ ದೇವದತ್ ಪಡಿಕ್ಕಲ್ ಪರದಾಡುತ್ತಿದ್ದಾರೆ. ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಅಸ್ತ್ರ. ಧ್ರುವ್ ಜುರೆಲ್ ಮತ್ತು ಜೇಸನ್ ಹೋಲ್ಡರ್ ಕಡೆಯಿಂದ ಉತ್ತಮ ಆಟ ಬರಬೇಕಿದೆ. ಆರ್​ಆರ್​ ಸ್ಪಿನ್ನರ್​ಗಳಾದ ಚಹಲ್, ಅಶ್ವಿನ್ ಮತ್ತು ಝಂಪಾ ಎದುರಾಳಿಗೆ ಕಂಟಕವಾಗಿದ್ದಾರೆ. ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಜೇಸನ್ ಹೋಲ್ಡನ್, ಕುಲ್ದೀಪ್ ಸೇನ್ ವೇಗಿಗಳಾಗಿದ್ದಾರೆ.

ಸನ್​ರೈಸರ್ಸ್ ಹೈದರಾಬಾದ್ ತಂಡ ಪಾಯಿಂಟ್ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿರುವ ಕಾರಣ ಎಸ್​ಆರ್​ಹೆಚ್​ಗೆ ಗೆಲುವು ಬೇಕಾಗಿದೆ. ಇಡೀ ಟೂರ್ನಿಯಲ್ಲಿ ತಂಡ ಉತ್ತಮ ಆರಂಭ ಪಡೆದುಕೊಂಡಿಲ್ಲ. ಅಭಿಷೇಕ್ ಶರ್ಮಾ ಬ್ಯಾಟ್ ಬೀಸಿದರೆ ಮಯಾಂಕ್ ಅಗರ್ವಾಲ್ ಸಂಪೂರ್ಣ ವೈಫಲ್ಯ ಅನುಭವಿಸುತ್ತಿದ್ದಾರೆ. ಹ್ಯಾರಿ ಬ್ರೂಕ್ ಒಂದು ಶತಕ ಸಿಡಿಸಿ ಮಂಕಾಗಿದ್ದಾರೆ. ರಾಹುಲ್ ತ್ರಿಪಾಠಿ, ನಾಯಕ ಮರ್ಕ್ರಮ್, ಹೆನ್ರಿಚ್ ಕ್ಲಾಸೆನ್ ಅಬ್ಬರಿಸ ಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಬೌಲಿಂಗ್​ನಲ್ಲಿ ಹೈದರಬಾದ್ ಪರ ಭುವನೇಶ್ವರ್ ಕುಮಾರ್ ಬಿಟ್ಟರೆ ಮತ್ಯಾರು ಮಾರಕವಾಗಿ ಗೋಚರಿಸುತ್ತಿಲ್ಲ. ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಟಿ. ನಟರಾಜನ್ ಲಯಕಂಡುಕೊಳ್ಳಬೇಕಿದೆ. ಮಯಾಂಕ್ ಮಾರ್ಕಂಡೆ ಸ್ಪಿನ್ ಕೆಲಬಾರಿಯಷ್ಟೆ ಕೆಲಸ ಮಾಡುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ