AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೋಟಕ ಸೆಂಚುರಿಯೊಂದಿಗೆ ದಾಖಲೆ ಬರೆದ ಟಾಮ್ ಬ್ಯಾಂಟನ್

MI Emirates vs Desert Vipers: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಎಮಿರೇಟ್ಸ್ ತಂಡದ ಪರ ಟಾಮ್ ಬ್ಯಾಂಟನ್ 105 ರನ್ ಬಾರಿಸಿದರೆ, ಆ್ಯಂಡ್ರೆ ಫ್ಲೆಚರ್ ಅಜೇಯ 96 ರನ್ ಸಿಡಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಎಂಐ ಎಮಿರೇಟ್ಸ್ ತಂಡವು 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 228 ರನ್ ಕಲೆಹಾಕಿತು.

ಸ್ಪೋಟಕ ಸೆಂಚುರಿಯೊಂದಿಗೆ ದಾಖಲೆ ಬರೆದ ಟಾಮ್ ಬ್ಯಾಂಟನ್
Tom Banton
ಝಾಹಿರ್ ಯೂಸುಫ್
| Edited By: |

Updated on: Jan 28, 2025 | 11:59 AM

Share

ಅಬುಧಾಬಿಯ ಶೇಖ್ ಝಾಯೆದ್ ಸ್ಟೇಡಿಯಂನಲ್ಲಿ ನಡೆದ ಇಂಟರ್​​ನ್ಯಾಷನಲ್ ಲೀಗ್​ ಟಿ20 ಟೂರ್ನಿಯಲ್ಲಿ ಸ್ಪೋಟಕ ಶತಕ ಬಾರಿಸಿ ಟಾಮ್ ಬ್ಯಾಂಟನ್ ಹೊಸ ಇತಿಹಾಸ ರಚಿಸಿದ್ದಾರೆ. ಎಂಐ ಎಮಿರೇಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಸರ್ಟ್ ವೈಪರ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಎಂಐ ಎಮಿರೇಟ್ಸ್ ಪರ ಟಾಮ್ ಬ್ಯಾಂಟನ್ ಹಾಗೂ ಆ್ಯಂಡ್ರೆ ಫ್ಲೆಚರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಸ್ಪೋಟಕ ಇನಿಂಗ್ಸ್​ಗೆ ಒತ್ತು ನೀಡಿದ ಬ್ಯಾಂಟನ್ 55 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 105 ರನ್ ಬಾರಿಸಿದರು. ಇದರೊಂದಿಗೆ ಇಂಟರ್​​ನ್ಯಾಷನಲ್ ಲೀಗ್​ ಟಿ20 ಟೂರ್ನಿಯಲ್ಲಿ ಎರಡು ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಟಾಮ್ ಬ್ಯಾಂಟನ್ ಪಾಲಾಯಿತು.

ಇದಕ್ಕೂ ಮುನ್ನ ಟಾಮ್ ಬ್ಯಾಂಟನ್ ಶಾರ್ಜಾ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ 102 ರನ್ ಬಾರಿಸಿದ್ದರು. ಇದೀಗ ಮತ್ತೊಮ್ಮೆ ಸೆಂಚುರಿ ಸಿಡಿಸಿ ಇಂಟರ್​​ನ್ಯಾಷನಲ್ ಲೀಗ್​ ಟಿ20 ಟೂರ್ನಿಯಲ್ಲಿ 2 ಶತಕ ಬಾರಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಟಾಮ್ ಬ್ಯಾಂಟನ್ ಬ್ಯಾಟಿಂಗ್:

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಂಐ ಎಮಿರೇಟ್ಸ್ ತಂಡದ ಪರ ಟಾಮ್ ಬ್ಯಾಂಟನ್ 105 ರನ್ ಬಾರಿಸಿದರೆ, ಆ್ಯಂಡ್ರೆ ಫ್ಲೆಚರ್ ಅಜೇಯ 96 ರನ್ ಸಿಡಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಎಂಐ ಎಮಿರೇಟ್ಸ್ ತಂಡವು 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 228 ರನ್ ಕಲೆಹಾಕಿತು.

229 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡೆಸರ್ಟ್ ವೈಪರ್ಸ್ ತಂಡವು ರೋಹಿದ್ ಖಾನ್ ಹಾಗೂ ಅಲ್ಝಾರಿ ಜೋಸೆಫ್ ಅವರ ಮಾರಕ ದಾಳಿಗೆ ತತ್ತರಿಸಿದೆ. ಪರಿಣಾಮ ಡೆಸರ್ಟ್ ವೈಪರ್ಸ್ ತಂಡ 12.3 ಓವರ್​ಗಳಲ್ಲಿ 74 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಎಂಐ ಎಮಿರೇಟ್ಸ್ ತಂಡ 154 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಎಂಐ ಎಮಿರೇಟ್ಸ್ ಪ್ಲೇಯಿಂಗ್ 11: ಕುಸಾಲ್ ಪೆರೆರಾ , ಮುಹಮ್ಮದ್ ವಸೀಮ್ , ಆ್ಯಂಡ್ರೆ ಫ್ಲೆಚರ್ , ಟಾಮ್ ಬ್ಯಾಂಟನ್ , ನಿಕೋಲಸ್ ಪೂರನ್ (ನಾಯಕ) , ಡಾನ್ ಮೌಸ್ಲಿ , ಕೀರಾನ್ ಪೊಲಾರ್ಡ್ , ರೊಮಾರಿಯೋ ಶೆಫರ್ಡ್ , ಮುಹಮ್ಮದ್ ರೋಹಿದ್ ಖಾನ್ , ಅಲ್ಜಾರಿ ಜೋಸೆಫ್ , ಫಜಲ್ಹಕ್ ಫಾರೂಕಿ.

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗೆ ಮೊಹಮ್ಮದ್ ಸಿರಾಜ್ ವೈಲ್ಡ್​ ಕಾರ್ಡ್ ಎಂಟ್ರಿ ಸಾಧ್ಯತೆ

ಡೆಸರ್ಟ್ ವೈಪರ್ಸ್ ಪ್ಲೇಯಿಂಗ್ 11: ಫಖರ್ ಝಮಾನ್ , ಡೇನಿಯಲ್ ಲಾರೆನ್ಸ್ , ಆಡಮ್ ಹೋಸ್ , ಸ್ಯಾಮ್ ಕರ್ರಾನ್ (ನಾಯಕ) , ಆಝಂ ಖಾನ್ ( ವಿಕೆಟ್ ಕೀಪರ್ ) , ಶೆರ್ಫೇನ್ ರುದರ್ಫೋರ್ಡ್ , ಧ್ರುವ ಪರಾಶರ್ , ನಾಥನ್ ಸೌಟರ್ , ಮೊಹಮ್ಮದ್ ಅಮೀರ್ , ಖುಜೈಮಾ ತನ್ವೀರ್ , ಡೇವಿಡ್ ಪೇನ್.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ