Team India: ಟೀಮ್ ಇಂಡಿಯಾ ಪರ ಕನ್ನಡಿಗರ ಹೆಸರಿನಲ್ಲಿದೆ ಈ ವಿಶೇಷ ದಾಖಲೆ..!

Team India: ಈ ವಿಶೇಷ ದಾಖಲೆ ಬರೆದು 5 ವರ್ಷಗಳೇ ಕಳೆದಿವೆ. ಇದಾಗ್ಯೂ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿರುವ ಯಾವುದೇ ಬ್ಯಾಟ್ಸ್​ಮನ್ ಈ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

Team India: ಟೀಮ್ ಇಂಡಿಯಾ ಪರ ಕನ್ನಡಿಗರ ಹೆಸರಿನಲ್ಲಿದೆ ಈ ವಿಶೇಷ ದಾಖಲೆ..!
Robin Uthappa-KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 24, 2022 | 12:54 PM

ಟೀಮ್ ಇಂಡಿಯಾ (Team India) ಪರ ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 1005 ಪಂದ್ಯಗಳನ್ನು ಆಡಿದೆ. ಈ ವೇಳೆ ಕಣಕ್ಕಿಳಿದ ಆಟಗಾರರ ಸಂಖ್ಯೆ 243. ಅಂದರೆ 1974 ರಿಂದ ಏಕದಿನ ಪಂದ್ಯವಾಡುತ್ತಿರುವ ಟೀಮ್ ಇಂಡಿಯಾವನ್ನು ಇದುವರೆಗೆ 243 ಆಟಗಾರರು ಪ್ರತಿನಿಧಿಸಿದ್ದಾರೆ. ಇವರಲ್ಲಿ ಕೆಲವೇ ಕೆಲವು ಆಟಗಾರರು ಮಾತ್ರ ಚೊಚ್ಚಲ ಪಂದ್ಯದಲ್ಲಿ ಮಿಂಚಿದ್ದರು. ಹೀಗೆ ಬ್ಯಾಟಿಂಗ್ ಮೂಲಕ ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಟಾಪ್-3 ಆಟಗಾರರಲ್ಲಿ ಮೂವರು ಕನ್ನಡಿಗರು ಇರುವುದು ವಿಶೇಷ. ಅಂದರೆ ಏಕದಿನ ಕ್ರಿಕೆಟ್​ನಲ್ಲಿ ಭಾರತದ ಆಡಿದ ಮೊದಲ ಪಂದ್ಯದಲ್ಲಿ ಮೂವರು ಕ್ರಿಕೆಟಿಗರು ಬ್ಯಾಟಿಂಗ್ ಮೂಲಕ ಅದ್ಭುತ ಪ್ರದರ್ಶನ ನೀಡಿದ್ದರು. ಈ ಮೂಲಕ ಒನ್​ಡೇ ಕ್ರಿಕೆಟ್​ನಲ್ಲಿ ಚೊಚ್ಚಲ ಪಂದ್ಯದಲ್ಲೇ ಅತ್ಯಧಿಕ ರನ್​ಗಳಿಸಿದ ಬ್ಯಾಟ್ಸ್​ಮನ್​ಗಳು ಎನಿಸಿಕೊಂಡಿದ್ದಾರೆ. ಹಾಗಿದ್ರೆ ಆ ಟಾಪ್-3 ಆಟಗಾರರು ಯಾರೆಂದು ನೋಡೋಣ….

  • 3- ಬ್ರಿಜೇಶ್ ಪಟೇಲ್: ಪ್ರಸ್ತುತ ಕೆಸಿಎ ಅಧ್ಯಕ್ಷರಾಗಿರುವ ಬ್ರಿಜೇಶ್ ಪಟೇಲ್ ಅವರು ಟೀಮ್ ಇಂಡಿಯಾ ಪರ 21 ಟೆಸ್ಟ್ ಮತ್ತು 10 ಏಕದಿನ ಪಂದ್ಯಗಳನ್ನು ಆಡಿದ್ದಾರೆ.  1974 ರಲ್ಲಿ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಪಟೇಲ್​ ಅವರು ಲೀಡ್ಸ್​ ಮೈದಾನದಲ್ಲಿ ಇಂಗ್ಲೆಂಡ್​ ವಿರುದ್ದ 82 ರನ್​ಗಳನ್ನು ಬಾರಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಚೊಚ್ಚಲ ಪಂದ್ಯದಲ್ಲೇ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ಗಳಿಸಿ ಆಟಗಾರ ಎನಿಸಿಕೊಂಡಿದ್ದರು. ವಿಶೇಷ ಎಂದರೆ ಮೂರು ದಶಕಗಳ ಕಾಲ ಇದು ದಾಖಲೆಯಾಗಿತ್ತು.
  • 2- ರಾಬಿನ್ ಉತ್ತಪ್ಪ: 2006 ರಲ್ಲಿ ಇಂಗ್ಲೆಂಡ್ ವಿರುದ್ಧದ ನ್ಯಾಟ್​ವೆಸ್ಟ್ ಒನ್​ಡೇ ಸಿರೀಸ್​ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಕೊಡಗಿನ ಕುವರ ರಾಬಿನ್ ಉತ್ತಪ್ಪ ತಮ್ಮ ಮೊದಲ ಪಂದ್ಯದಲ್ಲೇ 86 ರನ್ ಬಾರಿಸಿ ಅಬ್ಬರಿಸಿದ್ದರು. ಅಲ್ಲದೆ ಬ್ರಿಜೇಶ್ ಪಟೇಲ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದರು.
  • 1- ಕೆಎಲ್ ರಾಹುಲ್: ಕನ್ನಡಿಗ ರಾಬಿನ್ ಉತ್ತಪ್ಪ ಬರೆದಿಟ್ಟಿದ್ದ ದಾಖಲೆಯನ್ನು ಮುರಿದಿದ್ದು ಮತ್ತೋರ್ವ ಕನ್ನಡಿಗ ಕೆಎಲ್ ರಾಹುಲ್ ಎಂಬುದು ವಿಶೇಷ. 2016 ರಲ್ಲಿ ಜಿಂಬಾಬ್ವೆ ವಿರುದ್ದದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ್ದ ಕೆಎಲ್​ಆರ್​ ಮೊದಲ ಪಂದ್ಯದಲ್ಲೇ ಶತಕ (ಅಜೇಯ 100) ಸಿಡಿಸಿ ಮಿಂಚಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಪದಾರ್ಪಣೆ ಪಂದ್ಯದಲ್ಲೇ ಶತಕ ಬಾರಿಸಿದ ಮೊದಲ ಬ್ಯಾಟ್ಸ್​ಮನ್​ ಹಾಗೂ ಚೊಚ್ಚಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ರನ್​ಗಳಿಸಿದ ಆಟಗಾರ ಎನಿಸಿಕೊಂಡರು.

ಕೆಎಲ್ ರಾಹುಲ್ ಅವರು ಈ ವಿಶೇಷ ದಾಖಲೆ ಬರೆದು 5 ವರ್ಷಗಳೇ ಕಳೆದಿವೆ. ಇದಾಗ್ಯೂ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿರುವ ಯಾವುದೇ ಬ್ಯಾಟ್ಸ್​ಮನ್ ಈ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್